
ಬೆಂಗಳೂರು (ಜು.21) : ರಾಜ್ಯ ಸರ್ಕಾರ ಬಜೆಟ್‌ನಲ್ಲಿ ನೀಡಿದ್ದ ಶಾಕ್ ಮದ್ಯಪ್ರಿಯರಿಗೆ ಈಗ ಹೊಡೆದಿದೆ! ಸರ್ಕಾರ ಅಬಕಾರಿ ಸುಂಕವನ್ನು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಗರಿಷ್ಠ ಶೇ.20ರಷ್ಟುಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಬಜೆಟ್‌ನಲ್ಲಿ ಘೋಷಿಸಿದ್ದಂತೆ ಮದ್ಯದ ಅಬಕಾರಿ ಸುಂಕವನ್ನು ಹೆಚ್ಚಿಸಲಾಗಿದೆ. ಸರ್ಕಾರ ಈಗಾಗಲೇ ಜಾರಿಗೆ ತಂದಿರುವ ಶಕ್ತಿ ಯೋಜನೆಗಳು ಹಾಗೂ ಮುಂದಿನ ದಿನಗಳಲ್ಲಿ ಯೋಜನೆಗಳಿಗಾಗಿ ಸಂಪನ್ಮೂಕ ಕ್ರೋಢೀಕರಣ ದೃಷ್ಟಿಯಿಂದ ಮದ್ಯದ ಬೆಲೆಯನ್ನು ಹೆಚ್ಚಿಸಲಾಗಿದೆ.
ಮದ್ಯದ ಬೆಲೆ ಹೆಚ್ಚಳದಿಂದ ಬಡವರಿಗೆ ಸಮಸ್ಯೆ: ಶಾಸಕ ಕೃಷ್ಣಪ್ಪ
ಸರ್ಕಾರಿ ಆದೇಶದ ಪ್ರಕಾರ ಗುರುವಾರ ಮಧ್ಯರಾತ್ರಿಯಿಂದ ಈ ದರ ಹೆಚ್ಚಳ ಜಾರಿಗೆ ಬರಲಿದೆ. ಆದರೆ, ರಾಜ್ಯದ ಕೆಲ ಜಿಲ್ಲೆಗಳ ರಿಟೇಲ್ ಮದ್ಯ ಮಾರಾಟದ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಲ್ಲಿ ಗುರುವಾರ ರಾತ್ರಿಯೇ ಹೆಚ್ಚಿನ ದರವನ್ನು ಗ್ರಾಹಕರಿಂದ ವಸೂಲಿ ಮಾಡಿದ ಪ್ರಕರಣಗಳೂ ವರದಿಯಾಗಿವೆ.
ಸರ್ಕಾರ ಬಜೆಟ್‌ನಲ್ಲಿ ಬ್ರಾಂದಿ, ವಿಸ್ಕಿ, ಜಿನ್, ರಮ್ ಮತ್ತು ಅಂಥಹ ಇತರ ಮದ್ಯಗಳ ಸುಂಕವನ್ನು ಶೇ.20ರಷ್ಟುಏರಿಕೆ ಹಾಗೂ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇ.10ರಷ್ಟುಹೆಚ್ಚಿಸಿದ್ದನ್ನು ತಿಳಿಸಿತ್ತು. ಹೀಗಾಗಿ ಹಾಲಿ ದರಕ್ಕೆ ಹೋಲಿಸಿದಾಗ ಶೇ.10ರಷ್ಟುಬಿಯರ್ ದರ ಹೆಚ್ಚಳವಾಗಲಿದೆ. ಐಎಂಎಲ್ ಒಂದು ಪೆಗ್ (60 ಎಂಎಲ್) ಗೆ .10-20 ಹೆಚ್ಚಳವಾಗುವ ಸಾಧ್ಯತೆಯಿದೆ.
ಮಹಿಳೆಯರಂತೆ ಉಚಿತ ಪ್ರಯಾಣ ಬೇಡ, ಬಸ್‌ನಲ್ಲಿ ಮದ್ಯದ ಬಾಟಲಿ ಸಾಗಾಟಕ್ಕೆ ಅವಕಾಶ ಕೊಡಿ
ಒಟ್ಟಾರೆ 18 ಸ್ತರದಲ್ಲಿ ಅಬಕಾರಿ ಸುಂಕವನ್ನು ಹೆಚ್ಚಿಸಲಾಗಿದೆ. ಪ್ರತಿ ರಟ್ಟಿನ ಪೆಟ್ಟಿಗೆಯ ಬೆಲೆ .450 ತನಕ ಇದ್ದರೆ ಅದರ ಅಬಕಾರಿ ಸುಂಕ .215 ರುಪಾಯಿ ಆಗಲಿದೆ. ಇದೇ ರೀತಿ, 450ರಿಂದ 499 ರು.ತನಕದ ಮೌಲ್ಯದ ಪೆಟ್ಟಿಗೆ ಮೇಲಿನ ಅಬಕಾರಿ ಸುಂಕ 294 ರುಪಾಯಿ ಆಗಲಿದೆ. ಅದೇ ರೀತಿ 500 ರುಪಾಯಿಯಿಂದ 549 ರುಪಾಯಿ ತನಕದ ಪೆಟ್ಟಿಗೆಯ ಸುಂಕ 386 ರು. ಆಗಲಿದೆ. ಈ ರೀತಿ, 18 ಸ್ತರದಲ್ಲಿ ಅಬಕಾರಿ ಸುಂಕ ಹೆಚ್ಚಳವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ