ಜಾತಿ ನಿಂದನೆಯ ಆಡಿಯೋ ದನಿ ಮುನಿರತ್ನರದ್ದೇ: ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢ

By Kannadaprabha News  |  First Published Nov 26, 2024, 12:36 PM IST

ಪ್ರಕರಣ ದಾಖಲಿಸಿಕೊಂಡು ಮುನಿರತ್ನ ಅವರನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ದೂರುದಾರನಿಂದ ಆಡಿಯೋ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಅದರಂತೆ ವಿಚಾರಣೆ ವೇಳೆ ಚಲುರಾಜು ಮತ್ತು ಮುನಿರತ್ನ ಅವರ ದನಿ ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಇದೀಗ ಎಫ್ ಎಸ್ಎಲ್ ವರದಿ ಬಂದಿದ್ದು, ಆಡಿಯೋದಲ್ಲಿನ ದನಿ ಚಲುವರಾಜು ಮತ್ತು ಮುನಿರತ್ನ ಅವರದ್ದೇ ಎಂಬುದು ದೃಢಪಟ್ಟಿದೆ.


ಬೆಂಗಳೂರು(ನ.26):  ಮಾಜಿ ಸಚಿವ ಮುನಿರತ್ನ ವಿರುದ್ಧದ ಜಾತಿ ನಿಂದನೆ ಆರೋಪದ ಪ್ರಕರಣದ ಸಂಬಂಧ ಆಡಿಯೋದಲ್ಲಿ ಮಾತನಾಡಿರುವ ದನಿ ಮುನಿರತ್ನ ಅವರದೇ ಎಂಬುದು ವಿಧಿವಿ ಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್)ದ ವರದಿ ಯಲ್ಲಿ ದೃಢಪಟ್ಟಿದೆ. 

ಈ ವರದಿಯು ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಕೈ ಸೇರಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಮಾಜಿ ಸಚಿವ ಮುನಿರತ್ನ ಅವರು ಗುತ್ತಿಗೆದಾರ ಚೆಲುವರಾಜುಗೆ ಜತೆಗೆ ಮೊಬೈಲ್ ನಲ್ಲಿ ಮಾತನಾಡುವಾಗ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ವೈಯಾಲಿ ಕಾವಲ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. 

Tap to resize

Latest Videos

ಶಾಸಕ ಮುನಿರತ್ನ ವಿರುದ್ಧ ವೋಟರ್‌ ಐಡಿ ಹಗರಣ ತನಿಖೆ ವಿಳಂಬ: ಮುನಿರಾಜುಗೌಡ ದೂರು

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುನಿರತ್ನ ಅವರನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ದೂರುದಾರನಿಂದ ಆಡಿಯೋ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಅದರಂತೆ ವಿಚಾರಣೆ ವೇಳೆ ಚಲುರಾಜು ಮತ್ತು ಮುನಿರತ್ನ ಅವರ ದನಿ ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಇದೀಗ ಎಫ್ ಎಸ್ಎಲ್ ವರದಿ ಬಂದಿದ್ದು, ಆಡಿಯೋದಲ್ಲಿನ ದನಿ ಚಲುವರಾಜು ಮತ್ತು ಮುನಿರತ್ನ ಅವರದ್ದೇ ಎಂಬುದು ದೃಢಪಟ್ಟಿದೆ. ಹೀಗಾಗಿ ಮುನಿರತ್ನ ವಿರುದ್ಧದ ಜಾತಿ ನಿಂದನೆ ಆರೋಪಕ್ಕೆ ಬಲವಾದ ಸಾಕ್ಷ್ಯ ಸಿಕ್ಕಂತಾಗಿದೆ. ಸದ್ಯ ಜಾಮೀನಿನ ಮೇಲೆ ಬಿಡುಗಡೆ ಯಾಗಿರುವ ಮುನಿರತ್ನ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎನ್ನಲಾಗಿದೆ. 

ಪ್ರಕರಣದ ಹಿನ್ನೆಲೆ: 

ಗುತ್ತಿಗೆದಾರ ಚೆಲುವರಾಜುಗೆ ಜೀವ ಬೆದರಿಕೆ ಹಾಗೂ ಹಣಕ್ಕೆ ಬೇಡಿಕೆ ಆರೋಪ ಮತ್ತು ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್‌ಗೆ ಜಾತಿ ನಿಂದನೆ ಮಾಡಿದ ಆರೋಪದಡಿ ಮಾಜಿ ಸಚಿವ ಮುನಿರತ್ನ ವಿರುದ್ಧ ವೈಯಾಲಿಕಾವಲ್‌ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್‌ನಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು. ಈ ಸಂಬಂಧ ಮುನಿರತ್ನ ಅವರನ್ನು ಬಂಧಿಸಿದ್ದ ಪೊಲೀಸರು, ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 

ಬಳಿಕ ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಆರೋಪ ಮಾಡಿ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಮುನಿರತ್ನ ವಿರುದ್ಧದ ಪ್ರಕರಣಗಳ ಸಮಗ್ರ ತನಿಖೆಗಾಗಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಿತ್ತು. ಹೀಗಾಗಿ ಮೂರು ಪ್ರಕರಣಗಳು ಎಸ್‌ಐಟಿಗೆ ವರ್ಗಾವಣೆಯಾಗಿತ್ತು. ಸದ್ಯ ಮುನಿರತ್ನ ಅವರು ತಮ್ಮ ವಿರುದ್ಧದ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಗಿದ್ದಾರೆ.

ಬಿಜೆಪಿ ಶಾಸಕಗೆ ಏಡ್ಸ್‌ ಹಬ್ಬಿಸಲೆತ್ನ: ಮುನಿರತ್ನ ಆಪ್ತ ಇನ್ಸ್‌ಪೆಕ್ಟರ್‌ ಬಂಧನ

ಬೆಂಗಳೂರು:  ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಅಪ ರಾಧಿಕ ಸಂಚಿನಲ್ಲಿ ಪಾತ್ರವಹಿಸಿರುವ ಮಾಹಿತಿ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. 

ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ: ಸಂತ್ರಸ್ತೆ ಹೇಳಿಕೆ!

ಬೆಂಗಳೂರು ಮೂಲದ ರಾಜ್ಯದ ಬಿಜೆಪಿ ಪ್ರಭಾವಿ ಮುಖಂಡ ಹಾಗೂ ಹಿರಿಯ ಶಾಸಕನಿಗೆ ಏಡ್ಸ್‌ ಸೋಂಕು ಹಬ್ಬಿಸಲು ಚುಚ್ಚು ಮದ್ದು ನೀಡುವ ಸಂಚನ್ನು ಆರೋಪಿಗಳು ರೂಪಿಸಿದ್ದರು. ಈ ಸಂಚಿನಲ್ಲಿ ಇನ್‌ಸ್ಪೆಕ್ಟರ್ ಅಯ್ಯಣ್ಣ ಪ್ರಮುಖ ಪಾತ್ರವಹಿಸಿದ್ದ ಸಂಗತಿ ಗೊತ್ತಾಯಿತು. ಹಾಗೆಯೇ ವಿಚಾರಣೆ ವೇಳೆ ದೂರುದಾರರು ಹಾಗೂ ಕೆಲ ಸಾಕ್ಷಿದಾರರು ಕೂಡ ಅಯ್ಯಣ್ಣ ಕುರಿತು ಮಾಹಿತಿ ನೀಡಿದ್ದರು. ಅಂತೆಯೇ ಐಪಿಸಿ 120ಬಿ (ಅಪರಾಧಿ ಸಂಚು) ಆರೋಪದಡಿ ಐಯ್ಯಣ್ಣರವನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮುನಿರತ್ನ ಆಪ್ತ ರೆಡ್ಡಿ: 

ಶಾಸಕ ಮುನಿರತ್ನ ಅವರ ಆಪ್ತ ವಲಯದಲ್ಲಿ ಇನ್‌ಸ್ಪೆಕ್ಟರ್‌ ಅಯ್ಯಣ್ಣ ಗುರುತಿಸಿಕೊಂಡಿದ್ದರು. ಹೀಗಾಗಿಯೇ ರಾಜರಾಜೇಶ್ವರಿ ನಗರ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ, ರಾಜಗೋಪಾಲ ನಗರ ಹಾಗೂ ಪೀಣ್ಯ ಠಾಣೆಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದರು. ಅಲ್ಲದೆ ಮುನಿರತ್ನ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಕೋಲಾರ ಗ್ರಾಮಾಂತರ ವೃತ್ತ ಪಿಐಗೆ ಅಯ್ಯಣ್ಣ ಕೆಲಸ ಮಾಡಿದ್ದರು. ಹಾಗೆಯೇ ಮುನಿರತ್ನ ಶಿಫಾರಸಿನ ಮೇರೆಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಆಡಳಿತ ನಡೆಸಿದ್ದ ಅವರು, ಪ್ರಸುತ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. 

click me!