
ಹಾಸನ/ಹೊಳೆನರಸೀಪುರ(ಮೇ.14): ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಎಸ್ಪಿ ಕಚೇರಿ ಪಕ್ಕದಲ್ಲೇ ಇರುವ ಲೋಕಸಭಾ ಸದಸ್ಯರ ನಿವಾಸ ಹಾಗೂ ಹೊಳೆನರಸೀಪುರ ಪಟ್ಟಣದಲ್ಲಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ತಂಡ ಕೆಲಕಾಲ ತಪಾಸಣೆ ನಡೆಸಿದೆ.
ಸಂಸದರ ನಿವಾಸದಲ್ಲಿ ಅತ್ಯಾಚಾರವಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಸತತ ನಾಲ್ಕು ಗಂಟೆಗಳ ನಿವಾಸದಲ್ಲಿ ಪರಿಶೀಲನೆ ನಡೆಸಲಾಯಿತು. ಅನೇಕ ದಾಖಲೆಗಳನ್ನು ಸಂಗ್ರಹಿಸಿದ ಅಧಿಕಾರಿಗಳು ನಂತರ ಹೊಳೆನರಸೀಪುರಕ್ಕೆ ತೆರಳಿದರು. ಹಿಂದೆ ಸಂತ್ರಸ್ತ ಮಹಿಳೆಯೊಬ್ಬರು ತನ್ನ ಮೇಲೆ ಸಂಸದರ ನಿವಾಸದಲ್ಲಿ ಅತ್ಯಾಚಾರ ನಡೆದಿದೆ ಎಂದು ಹೇಳಿಕೆ ನೀಡಿ ದೂರು ದಾಖಲಿಸಿದ್ದರು. ಮಹಿಳೆಯ ದೂರನ್ನಾಧರಿಸಿ ಎಫ್‌ಎಸ್‌ಎಲ್ ತಂಡ ಸ್ಥಳ ಪರಿಶೀಲನೆ ನಡೆಸಿದೆ.
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಮತ್ತೊಂದು ತಿರುವು! ಶಾಸಕ ಎ ಮಂಜು ಕೈವಾಡ?
ಸ್ಥಳ ಪರಿಶೀಲನೆ ಬಳಿಕ ಸಂಸದರ ನಿವಾಸವನ್ನು ಸೀಜ್ ಮಾಡಿ ಬೀಗ ಹಾಕಿ ಕೀಲಿಯನ್ನು ಎಫ್‌ಎಸ್‌ಎಲ್ ಅಧಿಕಾರಿಗಳ ತಂಡ ತಮ್ಮ ವಶಕ್ಕೆ ಪಡೆದಿದೆ. ಮೇ ೪ ರಂದು ಸಂತ್ರಸ್ತ ಮಹಿಳೆ ಜತೆ ಎಸ್‌ಐಟಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಅದಾದ ಬಳಿಕ ಮತ್ತೆ ಮತ್ತೆ ಎರಡನೇ ಬಾರಿಗೆ ಪರಿಶೀಲನೆ ನಡೆಸಿದ್ದಾರೆ.
ಹೊಳೆನರಸೀಪುರದ ಚೆನ್ನಾಂಬಿಕ ನಿವಾಸದಲ್ಲೂ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಮಹಿಳೆ ನೀಡಿದ ಹೇಳಿಕೆ ಆಧರಿಸಿ ಅಲ್ಲಿಗೂ ತೆರಳಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ