ರಾಜ್ಯದ ಜನತೆಯನ್ನುದ್ದೇಶಿಸಿ ಸಿಎಂ ಮಾತು: ಮಹತ್ವದ ಮಾಹಿತಿ ಬಿಚ್ಚಿಟ್ಟ ಬಿಎಸ್‌ವೈ

Published : Jul 21, 2020, 06:01 PM ISTUpdated : Jul 21, 2020, 06:06 PM IST
ರಾಜ್ಯದ ಜನತೆಯನ್ನುದ್ದೇಶಿಸಿ ಸಿಎಂ ಮಾತು: ಮಹತ್ವದ ಮಾಹಿತಿ ಬಿಚ್ಚಿಟ್ಟ ಬಿಎಸ್‌ವೈ

ಸಾರಾಂಶ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಜನತೆಯನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದರು. ಅವರ ಭಾಷಣದ ಹೈಲೇಟ್ಸ್ ಈ ಕೆಳಗಿನಂತಿದೆ ನೋಡಿ.

ಬೆಂಗಳೂರು, (ಜುಲೈ.21): ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜ್ಯದ ಜನತೆಯನ್ನ ಉದ್ದೇಶಿಸಿ ಇಂದು (ಮಂಗಳವಾರ) ಸಂಜೆ ಭಾಷಣ ಮಾಡಿದರು.

 ಇದೇ ಮೊದಲ ಬಾರಿ ಸಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕದ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ನಿರೀಕ್ಷೆಯಂತೆ ಕೊರೋನಾ ವೈರಸ್‌ ಬಗ್ಗೆ ಮಾತನಾಡಿದರು. ಈ ವೇಳೆ ಕರ್ನಾಟಕ ಜನತೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ಬದಲಾಯ್ತು ರಾಮ ಮಂದಿರ ವಿನ್ಯಾಸ, ಬ್ಯಾಂಕ್ ಖಾಸಗೀಕರಣಕ್ಕೆ ಸಾಹಸ; ಜು.21ರ ಟಾಪ್ 10 ಸುದ್ದಿ!

ದೇಶದೆಲ್ಲೆಡೆ ಕೊರೋನಾ ವೈರಸ್​ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್​ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದ್ರೆ, ಇತ್ತೀಚಿನ ದಿನಗಳಲ್ಲಿ ಬೆಂಗಳೂಡು ಹಾಗೂ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುವುದೇನೆಂದರೆ, ಇದನ್ನು ತೊಲಗಿಸಲು ಲಾಕ್​ಡೌನ್​ ಒಂದೇ ಪರಿಹಾರವಲ್ಲ ಎಂದರು. 

ಜನರು ಕೋವಿಡ್​ ತೊಲಗಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು.  ಪ್ರತಿಯೊಬ್ಬರು ಮಾಸ್ಕ್​ ಧರಿಸಬೇಕು . ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ನೀವು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಪಾಲನೇ ಮಾಡ್ತಿರೋ ಅಷ್ಟರಮಟ್ಟಿಗೆ ಕೋವಿಡ್​ ತಡೆಯಲು ನಮ್ಮಿಂದ ಸಾಧ್ಯ ಎಂದು ಹೇಳಿದರು.

ಅನ್‌ ಲಾಕ್‌ ಆದ್ರೂ ಬೆಂಗಳೂರಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ..! 

ಈಗಾಗಲೇ ನಮ್ಮೆಲ್ಲ ಸಚಿವರು, ಶಾಸಕರು, ವೈದ್ಯರು, ನರ್ಸ್​ಗಳು, ಪೊಲೀಸರು ಹಾಗೂ ಆಶಾ ಕಾರ್ಯಕರ್ತರು ಕೋವಿಡ್​ ತಡೆಯಲು ತಮ್ಮ ಜೀವವನ್ನೇ ಪಣವಾಗಿಟ್ಟು ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ, ನಾವು ಬದುಕುಳಿಯಬೇಕಾದರೆ, ಅಂತರ ಕಾಯ್ದುಕೊಳ್ಳುವುದು, ಮಾಸ್ಕ್​ ಕಡ್ಡಾಯವಾಗಿ ಧರಿಸುವುದು ಮುಂತಾದ ಕ್ರಮಗಳನ್ನು ಪಾಲಿಸುವುದರಿಂದ ಕೊರೋನಾ ತಡೆಯಲು ಸಾಧ್ಯ ಎಂದು ತಿಳಿಸಿದರು.

5T ತಂತ್ರಗಳು 
ಕೋವಿಡ್​ ನಿಯಂತ್ರಣಕ್ಕೆ ತಜ್ಞರು ಕೊಟ್ಟಿರುವ 5ಟಿ ತಂತ್ರಗಳು ಬಹಳ ಮುಖ್ಯವಾಗಿವೆ. ಅವುಗಳೆಂದರೆ ಟ್ರೇಸ್​ (ಪತ್ತೆ), ಟ್ರ್ಯಾಕ್​ (ಹುಡುಕು), ಟೆಸ್ಟ್​ (ಪರೀಕ್ಷೆ), ಟ್ರೀಟ್​ (ಚಿಕಿತ್ಸೆ) ಹಾಗೂ ಟೆಕ್ನಾಲಜಿ (ತಂತ್ರಜ್ಞಾನ) ತಂತ್ರಗಳನ್ನು ಅಳವಡಿಸಿಕೊಳ್ಳುವುದರಲ್ಲಿ ರಾಜ್ಯ ಈಗಾಗಲೇ ಮುಂಚೂಣಿಯಲ್ಲಿದೆ. ಇದರಿಂದ ಕೋವಿಡ್​ ತಡೆಯಲು ಸಾಧ್ಯ ಎಂಬುದು ನನ್ನ ನಂಬಿಕೆಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪತ್ತೆಯಾಗಿರುವ ಶೋಂಕಿತರಲ್ಲಿ ಶೇ.80ಕ್ಕೂ ಹೆಚ್ಚು ಸೋಂಕಿತರಲ್ಲಿ ಯಾವುದೇ ರೋಗ ಲಕ್ಷಣಗಳು ಇಲ್ಲ. ಇಂತಹ ಲಘು ರೋಗ ಲಕ್ಷಣ ಇರುವವರಿಗೆ ಆಸ್ಪತ್ರೆಯ ಅವಶ್ಯಕತೆ ಇಲ್ಲ ಎಂಬುದನ್ನು ರಾಜ್ಯದ ಜನ ಮನವರಿಕೆ ಮಾಡಿಕೊಳ್ಳಬೇಕು. ಅಂತಹವರನ್ನು ಮನೆಯಲ್ಲಿ ಅಥವಾ ಕೋವಿಡ್​ ಕೇರ್​ ಕೇಂದ್ರದಲ್ಲಿ ಪ್ರತ್ಯೇಕವಾಗಿ ಇರಿಸಲಾಗುವುದು. ಸೋಂಕಿತರಲ್ಲಿ ಶೇ. 5 ರಷ್ಟು ಮಂದಿಗೆ ಮಾತ್ರ ಐಸಿಯು ಅಥವಾ ವೆಂಟಿಲೇಟರ್​ ಅಗತ್ಯವಿದೆ ಎಂಬುದು ಈಗಾಗಲೇ ಅನುಭವಕ್ಕೆ ಬಂದಿರುವ ಮಾತು. ಬೆಂಗಳೂರಿನಲ್ಲಿ ಕೋವಿಡ್​ ಚಿಕಿತ್ಸೆಗೆ ಈಗಾಗಲೇ 11230 ಹಾಸಿಗೆಗಳನ್ನು ಮೀಸಲಿಟ್ಟಿದ್ದೇವೆ ಎಂದರು.

24 ಗಂಟೆಯಲ್ಲಿ ವರದಿ
ಕೋವಿಡ್ ನಿಯಂತ್ರಣ ಮಾಡಲು ಸರ್ಕಾರ ಸರ್ವ ರೀತಿಯಲ್ಲೂ ಕೆಲಸ ಮಾಡ್ತಿದೆ. ಆತ್ಮಹತ್ಯೆಯಂತಹ ಆತುರದ ನಿರ್ಧಾರ ಬೇಡವೆಂದು ಜನರಲ್ಲಿ ಮನವಿ ಮಾಡಿದ ಬಿಎಸ್​ವೈ, ಮಹಾರಾಷ್ಟ್ರ, ತಮಿಳುನಾಡಿನಿಂದ ಬಂದ ಜನರಿಂದ ಪ್ರಕರಣಗಳು ಹೆಚ್ಚಾಗಿವೆ. ಖಾಸಗಿ ಆಸ್ಪತ್ರೆಗಳ ವಿಚಾರದಲ್ಲಿ ಗೊಂದಲ ಇದ್ದದ್ದು ನಿಜ. ಶೇಕಡಾ 50 ಖಾಸಗಿ ಆಸ್ಪತ್ರೆಗಳು ಬೆಡ್ ಕೊಡಲು ಒಪ್ಪಿಗೆ ಸೂಚಿಸಿದ್ದಾರೆ ಹಾಗೂ ಇನ್ಮಂದೆ 24 ಗಂಟೆಯಲ್ಲಿ ಟೆಸ್ಟ್ ರಿಸಲ್ಟ್ ಸಿಗುತ್ತದೆ ಎಂದು ಸ್ಪಷ್ಟಪಡಿಸಿದರು.

ಲಾಕ್‌ಡೌನ್ ವಿಸ್ತರಣೆ ಇಲ್ಲ
ಬೆಂಗಳೂರಿನ 8 ದಿಕ್ಕುಗಳಿಗೆ ಎಂಟು ಜನರಿಗೆ ಜವಾಬ್ದಾರಿ ಮತ್ತು ಬಿಬಿಎಂಪಿ ಅಧಿಕಾರಿ ನೇಮಕ ಮಾಡಲಾಗಿದೆ. ಅಲ್ಲದೆ, ಕೆಲ ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬೆಂಗಳೂರು ಸೇರಿದಂತೆ ಎಲ್ಲ ಕಡೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಣೆ ಮಾಡುವುದಿಲ್ಲ ಎಂದು ಪುನರುಚ್ಚರಿಸಿದ

ಪ್ರತಿಪಕ್ಷಗಳ ಸಹಕಾರ ಕೋರಿದ ಸಿಎಂ
ಪ್ರತಿಪಕ್ಷಗಳು ಯಾವುದೇ ಮಾಹಿತಿ ಕೇಳಿದ್ರೂ 24 ಗಂಟೆಯಲ್ಲೇ ಮಾಹಿತಿ ನೀಡಲಾಗುತ್ತದೆ. ಯಾವುದೇ ಪ್ರತಿ ಪಕ್ಷದ ನಾಯಕರು ಬಂದು ದಾಖಲೆಯನ್ನು ಪರಿಶೀಲನೆ ಮಾಡಬಹುದು. ಇದಕ್ಕಾಗಿ ನಮ್ಮ ಅಧಿಕಾರಿಗಳು ಸಿದ್ಧರಿದ್ದಾರೆ. ಕೋವಿಡ್ ಸಂದರ್ಭದಲ್ಲಿ ನಮ್ಮ ಮತ್ತು ಪ್ರತಿ ಪಕ್ಷದ ನಾಯಕರಲ್ಲಿ ಗೊಂದಲಗಳಿರಬಾರದು. ಸಿದ್ದರಾಮಯ್ಯನವರೇ ನಿಮಗೆ ಯಾವ ಮಾಹಿತಿ ಬೇಕು ಕೇಳಿ, ನೀಡುತ್ತೇವೆ. ಕೋವಿಡ್ ಉಪಕರಣಗಳ ಖರೀದಿಯಲ್ಲಿ ಒಂದು ರೂಪಾಯಿಯನ್ನು ದುರುಪಯೋಗ ಮಾಡಿಕೊಂಡಿಲ್ಲ. ದಯಮಾಡಿ ಈ ಸಂದರ್ಭದಲ್ಲಿ ಸಹಕರಿಸಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್