ಜು.9ರಿಂದ 13ರವರೆಗೆ ಜಿ-20 ರಾಷ್ಟ್ರಗಳ ಸಾಂಸ್ಕೃತಿಕ ಕಾರ್ಯ ತಂಡದ ಸಭೆ ನಡೆಯಲಿದೆ. ಈ ತಂಡ ಭಾರತದ ಸಂಸ್ಕೃತಿ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಿದೆ. ಜೊತೆಗೆ ಸದಸ್ಯ ರಾಷ್ಟ್ರಗಳ ಐತಿಹಾಸಿಕ ಪರಂಪರೆಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಬಗ್ಗೆ ಜಿ-20 ರಾಷ್ಟ್ರಗಳು ಸುದೀರ್ಘವಾಗಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲಿವೆ.
ಕೃಷ್ಣ ಎನ್.ಲಮಾಣಿ
ಹೊಸಪೇಟೆ(ಜು.09): ವಿಜಯನಗರ ವಾಸ್ತುಶಿಲ್ಪ ಶೈಲಿ, ವಿಜಯನಗರ ಸಾಮ್ರಾಜ್ಯದ ಹಿರಿಮೆ-ಗರಿಮೆಯನ್ನು ಇಡೀ ಜಗತ್ತಿಗೆ ಪರಿಚಯಿಸುವ ದೃಷ್ಟಿಯಿಂದ ಹಂಪಿಯಲ್ಲಿ ಇಂದಿನಿಂದ(ಜು.9ರಿಂದ 16)ರ ವರೆಗೆ ಜಿ-20 ಶೃಂಗಸಭೆ ನಡೆಯಲಿದೆ. ಅರಸರ ಕಾಲದಲ್ಲೇ ಹಂಪಿಗೆ ದೇಶ-ವಿದೇಶಿ ರಾಯಭಾರಿಗಳು, ಪ್ರವಾಸಿಗರು ಬರುತ್ತಿದ್ದರು. ಈಗ ಜಿ-20 ರಾಷ್ಟ್ರಗಳ ಶೃಂಗವನ್ನು ಹಂಪಿಯಲ್ಲಿ ನಡೆಸುವ ಮೂಲಕ ಗತ ವೈಭವ ಮರುಕಳಿಸಲು ಮುನ್ನುಡಿ ಬರೆಯಲಾಗುತ್ತಿದೆ.
undefined
ಸಾಂಸ್ಕೃತಿಕ ತಂಡದ ಸಭೆ:
ಜು.9ರಿಂದ 13ರವರೆಗೆ ಜಿ-20 ರಾಷ್ಟ್ರಗಳ ಸಾಂಸ್ಕೃತಿಕ ಕಾರ್ಯ ತಂಡದ ಸಭೆ ನಡೆಯಲಿದೆ. ಈ ತಂಡ ಭಾರತದ ಸಂಸ್ಕೃತಿ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಿದೆ. ಜೊತೆಗೆ ಸದಸ್ಯ ರಾಷ್ಟ್ರಗಳ ಐತಿಹಾಸಿಕ ಪರಂಪರೆಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಬಗ್ಗೆ ಜಿ-20 ರಾಷ್ಟ್ರಗಳು ಸುದೀರ್ಘವಾಗಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲಿವೆ.
ಇನ್ಮುಂದೆ ಐತಿಹಾಸಿಕ ಹಂಪಿಯ ಕಲ್ಲಿನ ತೇರಿನ ಮುಂದೆ ಸೆಲ್ಫಿ ಕ್ಲಿಕ್ಕಿಸಲು ಆಗಲ್ಲ: ಕಾರಣವೇನು ಗೊತ್ತಾ?
ಜಿ-20 ಶೆರ್ಪಾ ಸಭೆ: ಈ ತಂಡದ ಬಳಿಕ ಜಿ-20 ಶೆರ್ಪಾ ಸಭೆ ಜು.13ರಿಂದ 16ರವರೆಗೆ ನಡೆಯಲಿದೆ. ಜಿ-20 ರಾಷ್ಟ್ರಗಳ ಪ್ರಧಾನಿಗಳ ಜೊತೆಗೆ ನೇರ ಸಂಪರ್ಕ ಹೊಂದಿರುವ ಅಧಿಕಾರಿಗಳು ಶೆರ್ಪಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜಿ-20 ರಾಷ್ಟ್ರಗಳ ಸಭೆಗಳಲ್ಲಿ ಇದೊಂದು ವಿಶೇಷ ಸಭೆಯಾಗಿದೆ. ಸಭೆಯಲ್ಲಿ 20 ದೇಶಗಳ ಪೈಕಿ 19 ದೇಶಗಳ 30 ಪ್ರತಿನಿಧಿಗಳು, 9 ಆಹ್ವಾನಿತ ದೇಶಗಳ 16 ಪ್ರತಿನಿಧಿಗಳು, 4 ಸಂಸ್ಥೆಗಳ ಪ್ರತಿನಿಧಿಗಳು ಸೇರಿ ಒಟ್ಟು 52 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಉಭಯ ಸಭೆಗಳಲ್ಲಿ 200ಕ್ಕೂ ಅಧಿಕ ಅಧಿಕಾರಿಗಳೂ ಪಾಲ್ಗೊಳ್ಳಲಿದ್ದಾರೆ.