ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲು ನಾಲಾಯಕ್ ಎಂದು ಈಗಾಗಲೇ ಸಾಬೀತು ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದರು.
ಕೊಪ್ಪಳ (ಜೂ.18): ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲು ನಾಲಾಯಕ್ ಎಂದು ಈಗಾಗಲೇ ಸಾಬೀತು ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳ ಹೆಸರಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಇದೀಗ ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡುವ ಮೂಲಕ ಬಡವರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದ್ದಾರೆ. ಇದು ಪಿಕ್ ಪಾಕೆಟ್ ಸರ್ಕಾರ ಎಂಬುದನ್ನ ಸಿದ್ದರಾಮಯ್ಯ ಸರ್ಕಾರ ಸಾಬೀತು ಮಾಡಿದ್ದಾರೆ ಎಂದು ಹರಿಹಾಯ್ದರು.
undefined
'ನಾನೀಗ ಕೇಂದ್ರ ಸಚಿವ..' ದರ್ಶನ್ ಬಂಧನ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಎಚ್‌ಡಿಕೆ
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಬರಗಾಲದಿಂದ ಸಂಕಷ್ಟದಲ್ಲಿರುವ ಬಡವರು ರೈತರಿಗೆ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ಮಾಡಿ ಇನ್ನಷ್ಟು ಸಂಕಷ್ಟಕ್ಕೆ ದೂಡಿದ್ದಾರೆ ಇಂತಹ ಸರಕಾರವನ್ನು ಶೀಘ್ರವೇ ಕೆಳಗಿಳಿಸುವ ಪ್ರಯತ್ನ ಜನರಿಂದ ಆಗಿಯೇ ಆಗುತ್ತದೆ ಎಂದರು.
ಇನ್ನು ಗಂಗಾವತಿಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಾನು ಈ ವಿಚಾರವಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೂ ತಂದಿದ್ದೇನೆ. ಅಕ್ರಮ ಚಟುವಟಿಕೆಗಳಲ್ಲಿ ಸಚಿವ ಶಿವರಾಜ ತಂಗಡಗಿ ಕುಟುಂಬ ನೇರವಾಗಿ ತೊಡಗಿಕೊಂಡಿದೆ. ಹೀಗಾಗಿ ಜಿಲ್ಲಾಡಳಿತ ಈ ಬಗ್ಗೆ ಏನು ಮಾಡಲು ಆಗದೆ ನಿಸ್ಸಾಹಯಕವಾಗಿದೆ ಎಂದು ಗಂಭೀರ ಆರೋಪ ಮಾಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ; ಚಿಕ್ಕಣ್ಣ ಬಳಿಕ ಮತ್ತೊಬ್ಬ ನಟನಿಗೆ ಸಂಕಷ್ಟ?
ಈ ಅಕ್ರಮ ಚಟುವಟಿಕೆಗಳ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದ ಹೋರಾಟ ಮಾಡುತ್ತೇನೆ. ರಾಜ್ಯದ ಜನರೇ ಕಾಂಗ್ರೆಸ್ ಸರ್ಕಾರವನ್ನ ಕೆಳಗಿಳಿಸುತ್ತಾರೆ. ಈಗಾಗಲೇ ಕಾಂಗ್ರೆಸ್ ಶಾಸಕರು ಆಡಳಿತದಿಂದ ಬೇಸತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಶಾಸಕರೇ ಅಸಮಾಧಾನ ಹೊರಹಾಕುತ್ತಿದ್ದಾರೆ ಸರ್ಕಾರ ಬಿಳುವ ದಿನ ದೂರವಿಲ್ಲ ಎಂದ ಜನಾರ್ದನ ರೆಡ್ಡಿ