
ಬೆಂಗಳೂರು (ನ.8): ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹೊರ ವಲಯದಲ್ಲಿ ಶೆಲ್ಟರ್ ನಿರ್ಮಾಣಕ್ಕೆ ಸರ್ಕಾರಿ ಭೂಮಿ ಗುರುತಿಸಲಾಗುತ್ತಿದ್ದು, ಖಾಸಗಿ ವ್ಯಕ್ತಿಗಳು ಜಮೀನು ಕೊಟ್ಟರೆ ಬಳಕೆ ಮಾಡಿಕೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್, ಪ್ರಾಣಿ ಕಲ್ಯಾಣ ಮಂಡಳಿಯ ಆದೇಶಗಳನ್ನು ಪಾಲನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ನಗರದ ಹೊರ ವಲಯದಲ್ಲಿ ಶೆಲ್ಟರ್ ನಿರ್ಮಾಣಕ್ಕೆ ಅಗತ್ಯವಿರುವ ಸರ್ಕಾರಿ ಭೂಮಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸುಮ್ಮನಹಳ್ಳಿಯ ಬಳಿ ಇರುವ ಪ್ರಾಣಿ ಚಿತಾಗಾರ ದುರಸ್ತಿ ಕಾರ್ಯ ನಡೆಯುತ್ತಿದ್ದು, ಒಂದೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಜತೆಗೆ, ನಗರದ ಎಲ್ಲ ಪಾಲಿಕೆ ವ್ಯಾಪ್ತಿಯಲ್ಲಿ ತಲಾ 1 ಎಕರೆ ಜಾಗ ಗುರುತಿಸಲು ಸೂಚಿಸಲಾಗಿದೆ. ಈ ಜಾಗದಲ್ಲಿ ಬೀದಿ ನಾಯಿ, ದನ, ಕರುಗಳು ಸೇರಿದಂತೆ ಪಶುಪಾಲನೆ ವಿಭಾಗಕ್ಕೆ ಅಗತ್ಯವಿರುವ ಚಟುವಟಿಕೆ ನಡೆಸಲು ಕ್ರಮ ವಹಿಸಲಾಗುವುದು. ಬೀದಿ ನಾಯಿಗಳ ಸಂತಾನಹರಣ ಸೇರಿದಂತೆ ಮೊದಲಾದ ಕಾರ್ಯಗಳ ಬಗ್ಗೆ ನಿಗಾ ವಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ