
ಆ.15ರಿಂದ ಬೆಂಗಳೂರು ಹಸಿರೂರು ಅಭಿಯಾನ
ಬೆಂಗಳೂರು (ಆ.2): ರಾಜಧಾನಿ ಬೆಂಗಳೂರಿನಲ್ಲಿ ಆ.15ರಿಂದ ಆರಂಭವಾಗುವ ‘ಬೆಂಗಳೂರು ಹಸಿರೂರು’ ಅಭಿಯಾನ(Green bengaluru Campaign)ಕ್ಕಾಗಿ ನಗರದ ನಾಗರಿಕರು ಹಾಗೂ ಕ್ಷೇಮಾಭಿವೃದ್ಧಿ ಸಂಘಗಳು ತಮ್ಮ ಬಡಾವಣೆಗಳಲ್ಲಿ ಕನಿಷ್ಠ 30 ಸಸಿಗಳನ್ನು ನೆಡಲು ಅವಕಾಶವಿದ್ದಲ್ಲಿ, ಆಗಸ್ಟ್ 10ರ ಒಳಗೆ ಪಾಲಿಕೆ ವೆಬ್‌ಸೈಟ್, ಇ-ಮೇಲ್ ಹಾಗೂ ವಾಟ್ಸಪ್ ಮೂಲಕ ಮನವಿ ಸಲ್ಲಿಸಬಹುದು ಎಂದು ಜಿಬಿಎ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ.
ಶನಿವಾರ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ನಡೆದ ವರ್ಚುವಲ್ ಸಭೆಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಾಗರಿಕರಿಂದ ಬಂದ ಮನವಿಗಳ ಆಧಾರದ ಮೇಲೆ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸಸಿ ನೆಡಲು ಸೂಕ್ತ ಸ್ಥಳವಿದ್ದಲ್ಲಿ ಪಾಲಿಕೆಯಿಂದಲೇ ಸಸಿಗಳನ್ನು ನೆಡಲಾಗುವುದು. ಸಸಿ ನೆಡುವವರು ಪಾಲಿಕೆ ವೆಬ್ ಸೈಟ್ https://gbatreeplantation.com, ಇ-ಮೇಲ್ dcfgba26gmail.com, ಅಲ್ಲದೆ, 9480683633 ಈ ಸಂಖ್ಯೆಗೆ ವಾಟ್ಸಪ್ ಮೂಲಕ ಮನವಿ ಸಲ್ಲಿಸಬಹುದು ಎಂದರು.
ನಗರದಲ್ಲಿ ಈ ಬಾರಿ 60 ಸಾವಿರ ಸಸಿಗಳನ್ನು ನೆಡುವ ಹಾಗೂ 40 ಸಾವಿರ ಸಸಿಗಳನ್ನು ವಿತರಿಸುವ ಯೋಜನೆಯಿದೆ. ಸಸಿ ನೆಡುವ ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಈಗಾಗಲೇ 43 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡಲು ನಾಗರಿಕರಿಂದ 236 ಅರ್ಜಿಗಳು ಬಂದಿವೆ ಎಂದು ಹೇಳಿದರು. ಸಭೆಯಲ್ಲಿ ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್, ತೋಟಗಾರಿಕಾ ವಿಭಾಗದ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ನಗರ ಪಾಲಿಕೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ