
ಬೆಂಗಳೂರು (ಜೂ.10): ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರು ಕರ್ತವ್ಯದ ವೇಳೆ ಅನಧಿಕೃತ ಗೈರು ಹಾಜರಾಗುವುದನ್ನು ತಡೆಯಲು ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಜಿಯೋ ಫೆನ್ಸಿಂಗ್ ತಂತ್ರಜ್ಞಾನ ಅಳವಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಇನ್ನು ಅನಧಿಕೃತ ಗೈರು ಹಾಜರಿಯನ್ನು ತಪ್ಪಿಸುವ ವೈದ್ಯರು ಆಸ್ಪತ್ರೆಯಿಂದ ಹೊರಗೆ 100 ಮೀಟರ್ ದೂರ ಹೋದ ಕೂಡಲೇ ಗೊತ್ತಾಗುವಂತೆ ಸರ್ಕಾರಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಜಿಯೋ ಫೆನ್ಸಿಂಗ್ ತಂತ್ರಜ್ಞಾನ ಅಳವಡಿಸಲಾಗುವುದು. ಅಲ್ಲದೆ, ಪ್ರತಿ ಆಸ್ಪತ್ರೆಯ ವಾರ್ಡ್, ಐಸಿಯುನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ ಒಂದೇ ಕಡೆ ನಿರ್ವಹಣೆ ಮಾಡುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ.
ಚಿತ್ರೀಕರಣದ ಮುನ್ನ ಎಲ್ರೂ ಲಸಿಕೆ ಹಾಕಿಸಿಕೊಳ್ಳಿ: ಸಚಿವ ಸುಧಾಕರ್ ಮನವಿ ..
ಇತ್ತೀಚೆಗೆ ಹುಬ್ಬಳ್ಳಿ ಕಿಮ್ಸ್‌ಗೆ ಭೇಟಿ ನೀಡಿದ್ದಾಗ ವೈದ್ಯರ ಗೈರು ಹಾಜರಿ ಬಗ್ಗೆ ಬೇರೆ ಸಚಿವರು ದೂರು ನೀಡಿದ್ದರು. ಆಗ ಸ್ಥಳದಲ್ಲೇ ತನಿಖೆಗೆ ಆದೇಶಿಸಿ ವರದಿ ನೀಡಲು ಸೂಚಿಸಲಾಗಿತ್ತು. ವರದಿ ನನ್ನ ಬಳಿ ವರದಿ ಬಂದ ಕೂಡಲೇ ಈ ಬಗ್ಗೆ ಗಂಭೀರ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಬುಧವಾರ ನಗರದ ತಮ್ಮ ಅಧಿಕೃತ ಸರ್ಕಾರಿ ನಿವಾಸದ ಬಳಿ ಹರ್ಬಲ್ ಲೈಫ್ ನ್ಯೂಟ್ರೀಶಿಯನ್ ಕಂಪನಿಯು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ನೀಡಿದ 150 ಆಕ್ಸಿಜನ್ ಸಾಂದ್ರಕಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.
2,281 ಬ್ಲ್ಯಾಕ್ ಫಂಗಸ್, 156 ಸಾವು: ರಾಜ್ಯದಲ್ಲಿ ಕಪ್ಪು ಶಿಲೀಂಧ್ರದ 2,281 ಪ್ರಕರಣ ವರದಿಯಾಗಿದ್ದು 156 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ 102 ಮಂದಿ ಗುಣಮುಖರಾಗಿದ್ದು ಉಳಿದ 1,948 ಮಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾ.ಕೆ. ಸುಧಾಕರ್ ಮಾಹಿತಿ ನೀಡಿದರು.
ಕಾಂಗ್ರೆಸ್‌ಗೆ ಸಮಸ್ಯೆ ಬೇಡ: ಕಾಂಗ್ರೆಸ್ ಶಾಸಕರು ತಮ್ಮ ಅನುದಾನದಿಂದ ಲಸಿಕೆ ನೀಡುವ ಸಮಸ್ಯೆ ಬೇಡ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಉಚಿತವಾಗಿ ಲಸಿಕೆ ನೀಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‌ನವರು ಲಸಿಕೆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದು ಬೇಡ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ