
ಬೆಂಗಳೂರು(ಜೂ.20): ಮೇಕೆದಾಟು ಯೋಜನೆ ವಿಚಾರವಾಗಿ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನ ಹರಿಸಬೇಕು ಮತ್ತು ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೇಕೆದಾಟು ಯೋಜನೆ ಸಂಬಂಧ ಎನ್‌ಜಿಟಿ ದಕ್ಷಿಣ ಪೀಠ ಆರಂಭಿಸಿದ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಕೇಂದ್ರ-ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಸ್ವರ್ಗ ಸೃಷ್ಟಿಯಾಗುವುದಾಗಿ ಬಿಜೆಪಿ ಹೇಳಿತ್ತು. ಸ್ವರ್ಗ ಬೇಡ, ಅನಿಶ್ಚಿತತೆಯಲ್ಲಿ ತೂಗುತ್ತಿರುವ ಮೇಕೆದಾಟು ಯೋಜನೆಗೆ ಪರಿಸರ ಅನುಮತಿಯನ್ನು ಶೀಘ್ರ ಪಡೆದುಕೊಂಡರೆ ಸಾಕು. ನಮ್ಮ ನೆಲ, ಜಲ, ಧನ ಬಳಸಿ ನಮ್ಮವರ ದಾಹ ನೀಗಿಸುವ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಇನ್ನು ನಿರ್ಲಕ್ಷ್ಯ ತೋರಬಾರದು ಎಂದು ಒತ್ತಾಯಿಸಿದ್ದಾರೆ.
ಮೇಕೆದಾಟು, ಕಾವೇರಿ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ದೂರು
ಕೇಂದ್ರದ ಅನುಮತಿ ಸಿಕ್ಕ ಕೂಡಲೇ ಯೊಜನೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ ಹೇಳಿಕೆಯನ್ನು ಸೋದರ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿರೋಧಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿರುವ ಪ್ರಕರಣವೊಂದರಲ್ಲಿ ಕರ್ನಾಟಕ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂಬುದು ಅವರ ಆರೋಪ. ವಿಚಾರಣೆಯಾಗುತ್ತಿರುವ ಯೋಜನೆಯೊಂದಕ್ಕೆ ತಡೆ ತರಲು ಪ್ರಧಾನಿಯನ್ನು ಭೇಟಿಯಾಗಿದ್ದು ತಪ್ಪಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ