ಘರ್ ವಾಪಸಿ ಹಗ್ಗ ಜಗ್ಗಾಟ: ಅತೃಪ್ತರ ಓಲೈಕೆಗೆ ಬಿಜೆಪಿ ಕಸರತ್ತು

By Kannadaprabha News  |  First Published Aug 20, 2023, 4:19 AM IST

 ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ಶಾಸಕರನ್ನು ಮನವೊಲಿಸುವ ಕಸರತ್ತನ್ನು ಬಿಜೆಪಿ ಆರಂಭಿಸಿದೆ. ಇದರ ಮೊದಲ ಭಾಗವಾಗಿ, ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರು ಶನಿವಾರ ರಾಜ್ಯ ಬಿಜೆಪಿ ಕಚೇರಿಗೆ ತೆರಳಿ ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಜತೆ ಸಮಾಲೋಚನೆ ನಡೆಸಿದರು.


ಬೆಂಗಳೂರು/ಶಿರಸಿ: ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ಶಾಸಕರನ್ನು ಮನವೊಲಿಸುವ ಕಸರತ್ತನ್ನು ಬಿಜೆಪಿ ಆರಂಭಿಸಿದೆ. ಇದರ ಮೊದಲ ಭಾಗವಾಗಿ, ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರು ಶನಿವಾರ ರಾಜ್ಯ ಬಿಜೆಪಿ ಕಚೇರಿಗೆ ತೆರಳಿ ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಜತೆ ಸಮಾಲೋಚನೆ ನಡೆಸಿದ್ದಾರೆ. ಮತ್ತೊಂದೆಡೆ, ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್‌ ಮಾತುಕತೆ ನಡೆಸಿದ್ದಾರೆ.

ಪಕ್ಷದ ಶಾಸಕರು ಕಾಂಗ್ರೆಸ್ಸಿಗೆ ವಲಸೆ ಹೋಗುವುದನ್ನು ತಪ್ಪಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ(BS Yadiyurappa) ನೇತೃತ್ವದಲ್ಲಿ ಶುಕ್ರವಾರ ಬಿಜೆಪಿ ಸಭೆ ನಡೆದಿತ್ತು. ಶಾಸಕರ ಮನವೊಲಿಕೆ ಕಾರ್ಯವನ್ನು ಮೂವರು ಮಾಜಿ ಸಿಎಂಗಳು ಹಾಗೂ ಒಬ್ಬರು ಮಾಜಿ ಡಿಸಿಎಂಗೆ ವಹಿಸಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್‌ಗೆ ಮರಳಲಿದ್ದಾರೆ (Ghar wapsi)ಎಂದು ಹೇಳಲಾಗಿರುವ ಇಬ್ಬರು ಶಾಸಕರ ಜತೆ ಪಕ್ಷದ ಮುಖಂಡರು ಮಾತುಕತೆ ನಡೆಸಿರುವುದ್ದಾರೆ.

Tap to resize

Latest Videos

ಆರ್.ಆರ್. ನಗರದಲ್ಲಿ ಕಳ್ಳರು, ಕನಕಪುರದಲ್ಲಿ ಸತ್ಯ ಹರಿಶ್ಚಂದ್ರರು ಇದ್ದಾರಾ? ಡಿಕೆಶಿಗೆ ಶಾಸಕ ಮುನಿರತ್ನ ತಿರುಗೇಟು

ರವಿ- ಎಸ್‌ಟಿಎಸ್‌ 1 ತಾಸು ಚರ್ಚೆ:

ಶನಿವಾರ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಗೆ ಆಗಮಿಸಿದ ಎಸ್‌.ಟಿ.ಸೋಮಶೇಖರ್‌ (ST Somashekhar)ಅವರು ಸಿ.ಟಿ.ರವಿ (CT Ravi)ಜತೆ ಸುಮಾರು ಒಂದು ತಾಸು ಚರ್ಚೆ ನಡೆಸಿದರು. ಬಿಜೆಪಿಗೆ ಬಂದ ವಲಸಿಗರು ಮತ್ತೆ ಕಾಂಗ್ರೆಸ್‌ಗೆ ವಾಪಸ್‌ ಮರಳಲಿದ್ದಾರೆ ಎಂಬ ಸುದ್ದಿ ಹರಡಿದ ಬಳಿಕ ಸೋಮಶೇಖರ್‌ ಶುಕ್ರವಾರ ನಡೆದ ಬಿಜೆಪಿಯ ಸಭೆಗೆ ಗೈರಾಗಿದ್ದರು. ಇದರಿಂದ ವದಂತಿಗೆ ಮತ್ತಷ್ಟುಪುಷ್ಟಿನೀಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಸಿ.ಟಿ.ರವಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಚರ್ಚೆಯ ವೇಳೆ ಸೋಮಶೇಖರ್‌ ಅವರು ತಮ್ಮ ಸಮಸ್ಯೆಯನ್ನು ತೋಡಿಕೊಂಡಿದ್ದಾರೆ. ಪಕ್ಷದಲ್ಲಿನ ಕೆಲವು ವಿಚಾರದಲ್ಲಿರುವ ಅತೃಪ್ತಿಯ ಬಗ್ಗೆ ಹೇಳಿಕೊಂಡಿದ್ದಾರೆ. ಸೋಮಶೇಖರ್‌ ಅವರ ಸಮಸ್ಯೆಯನ್ನು ಸಿ.ಟಿ.ರವಿ ಆಲಿಸಿದ್ದು, ಸಮಸ್ಯೆಯನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸಿ.ಟಿ.ರವಿ ಜತೆಗಿನ ಚರ್ಚೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಎಸ್‌.ಟಿ.ಸೋಮಶೇಖರ್‌, ಪಕ್ಷದ ಮುಖಂಡರಾಗಿರುವ ಸಿ.ಟಿ.ರವಿ ಅವರು ಬನ್ನಿ ಎಂದು ಕರೆದಿದ್ದರು. ಹೀಗಾಗಿ ಅವರನ್ನು ಭೇಟಿ ಮಾಡಲು ಆಗಮಿಸಿದ್ದು, ಇತ್ತೀಚಿನ ಬೆಳವಣಿಗೆ ಬಗ್ಗೆ ಮಾಹಿತಿ ಕೊಟ್ಟಿದ್ದೇನೆ. ಕ್ಷೇತ್ರದಲ್ಲಾಗಿರುವ ಬೆಳವಣಿಗೆ ಕುರಿತು ಮಾಹಿತಿ ನೀಡಿದ್ದೇನೆ. ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಮಾನಸಿಕವಾಗಿ, ದೈಹಿಕವಾಗಿ ಬಿಜೆಪಿಯಲ್ಲಿಯೇ ಇದ್ದೇನೆ ಎಂದು ಸ್ಪಷ್ಟಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿವಾಸದ ಸಭೆ ಕುರಿತ ಮಾಹಿತಿಯು ನನಗೆ ತಡವಾಗಿ ಸಿಕ್ಕಿತ್ತು. ಅಲ್ಲದೇ, ಕ್ಷೇತ್ರದಲ್ಲಿ ಬೇರೆ ಬೇರೆ ಕಾರ್ಯಕ್ರಮ ಇದ್ದ ಕಾರಣದಿಂದಾಗಿ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್‌.ಅಶೋಕ್‌ ಸೇರಿದಂತೆ ಇತರೆ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ಹೇಳಿದರು.

ಕಾಗೇರಿ- ಹೆಬ್ಬಾರ್‌ ಚರ್ಚೆ:

ಶಿರಸಿಯ ರಾಘವೇಂದ್ರ ವೃತ್ತದ ಸಮೀಪವಿರುವ ಮಾಜಿ ಸ್ಪೀಕರ್‌ ಕಾಗೇರಿ ಅವರ ಕಾರ್ಯಾಲಯಕ್ಕೆ ಶನಿವಾರ ಮಧ್ಯಾಹ್ನ ಆಗಮಿಸಿದ ಶಾಸಕ ಹೆಬ್ಬಾರ್‌ ಅರ್ಧ ತಾಸಿಗೂ ಹೆಚ್ಚು ಕಾಲ ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಈ ಕುರಿತು ಹೇಳಿಕೆ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಸೌಹಾರ್ದಯುತವಾಗಿ ಭೇಟಿ ಮಾಡಿದ್ದೇವೆ. ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಶಿವರಾಮ ಹೆಬ್ಬಾರ್‌ ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದಷ್ಟೆಹೇಳಿದರು.

Ghar wapsi: ಕಾಂಗ್ರೆಸ್‌ಗೆ ಸೋಮಶೇಖರ್‌ ಕರೆ ತರಲು ಶಾಸಕ ಶ್ರೀನಿವಾಸ್‌ಗೆ ಡಿಕೆ ಶಿವಕುಮಾರ್‌ ಟಾಸ್ಕ್

ಖಾಸಗಿ ಕಾರ್ಯಕ್ರಮದ ನಿಮಿತ್ತ ಶಿರಸಿ ನಗರಕ್ಕೆ ಆಗಮಿಸಿದ್ದೆ. ಇದೇ ವೇಳೆ ಕಾಗೇರಿ ಅವರನ್ನು ಭೇಟಿ ಮಾಡಿದ್ದೇನೆ. ಇದೊಂದು ಸಹಜ ಭೇಟಿಯೇ ಹೊರತು ರಾಜಕೀಯ ವಿಷಯವಾಗಿ ಯಾವುದೇ ಚರ್ಚೆ ನಡೆಸಿಲ್ಲ. ಈ ಭೇಟಿ ಬಗ್ಗೆ ಹೆಚ್ಚಿನ ಮಹತ್ವ ಕಲ್ಪಿಸುವ ಅಗತ್ಯವೂ ಇಲ್ಲ ಎಂದು ಶಿವರಾಮ ಹೆಬ್ಬಾರ್‌ ತಿಳಿಸಿದರು.

click me!