ಉತ್ತರ ಕರ್ನಾಟಕದ ಪಟ್ಟೇದ ಅಂಚು ಸೀರೆಗೆ ಜಿಐ ಟ್ಯಾಗ್: ಗಜೇಂದ್ರಗಡ ನೇಕಾರರ ಸಂಘಕ್ಕೆ ಟ್ಯಾಗ್‌

Published : Apr 12, 2025, 09:24 AM ISTUpdated : Apr 12, 2025, 09:26 AM IST
ಉತ್ತರ ಕರ್ನಾಟಕದ ಪಟ್ಟೇದ ಅಂಚು ಸೀರೆಗೆ ಜಿಐ ಟ್ಯಾಗ್: ಗಜೇಂದ್ರಗಡ ನೇಕಾರರ ಸಂಘಕ್ಕೆ ಟ್ಯಾಗ್‌

ಸಾರಾಂಶ

ಉತ್ತರ ಕರ್ನಾಟಕದ ಕೈಮಗ್ಗ ಪರಂಪರೆಯ ಸಂಕೇತವಾಗಿರುವ ‘ಪಟ್ಟೇದ ಅಂಚು’ ಸೀರೆಗೆ ಭೌಗೋಳಿಕ ಗುರುತು (ಜಿಐ ಟ್ಯಾಗ್) ನೀಡಲಾಗಿದೆ. ಗಜೇಂದ್ರಗಡ ನೇಕಾರರ ಸಹಕಾರಿ ಉತ್ಪಾದಕ ಸಂಘಕ್ಕೆ ಈ ಟ್ಯಾಗ್ ದೊರಕಿದೆ. 

ಬೆಂಗಳೂರು (ಏ.12): ಉತ್ತರ ಕರ್ನಾಟಕದ ಕೈಮಗ್ಗ ಪರಂಪರೆಯ ಸಂಕೇತವಾಗಿರುವ ‘ಪಟ್ಟೇದ ಅಂಚು’ ಸೀರೆಗೆ ಭೌಗೋಳಿಕ ಗುರುತು (ಜಿಐ ಟ್ಯಾಗ್) ನೀಡಲಾಗಿದೆ. ಗಜೇಂದ್ರಗಡ ನೇಕಾರರ ಸಹಕಾರಿ ಉತ್ಪಾದಕ ಸಂಘಕ್ಕೆ ಈ ಟ್ಯಾಗ್ ದೊರಕಿದೆ. ರಾಮಯ್ಯ ಕಾಲೇಜ್ ಆಫ್ ಲಾ ಸೆಂಟರ್ ಫಾರ್ ಇಂಟಲೆಕ್ಟುವಲ್ ಪ್ರಾಪರ್ಟಿ ರೈಟ್ಸ್ (ಆರ್‌ಸಿಐಪಿಆರ್‌) ಸಹಯೋಗದಲ್ಲಿ ಕರ್ನಾಟಕದ ಜಿಐ ಟ್ಯಾಗ್ ನೋಡಲ್ ಏಜೆನ್ಸಿಯಾಗಿರುವ ದಿ ವಿಶ್ವೇಶ್ವರಯ್ಯ ಪ್ರಮೋಷನ್ ಸೆಂಟರ್‌ನಿಂದ (ವಿಟಿಪಿಸಿ) ಜಿಐ ಟ್ಯಾಗ್ ನೋಂದಣಿ ಮಾಡಲಾಗಿದೆ.

ಕರ್ನಾಟಕದ ಶ್ರೀಮಂತ ಜವಳಿ ಪರಂಪರೆಯನ್ನು ಸಂರಕ್ಷಿಸಲು ಹಾಗೂ ಸಾಂಪ್ರದಾಯಿಕ ನೇಕಾರರನ್ನು ಪ್ರೋತ್ಸಾಹಿಸಲು ಜಿಐ ಟ್ಯಾಗ್ ಮಹತ್ವದ ಪಾತ್ರ ವಹಿಸುತ್ತದೆ. ಪಟ್ಟೇದ ಅಂಚು ಸೀರೆಯು ಗಾಢವಾದ ಬಣ್ಣ ಹಾಗೂ ವಿಶಿಷ್ಟವಾದ ಅಂಚಿಗೆ ಹೆಸರುವಾಸಿಯಾಗಿದೆ. ಆರ್‌ಸಿಐಪಿಆರ್‌ ಜತೆಗೆ ರಾಜ್ಯ ಜವಳಿ ಅಭಿವೃದ್ಧಿ ಆಯುಕ್ತರು, ಕೈಮಗ್ಗ ಮತ್ತು ಜವಳಿ ನಿರ್ದೇಶಕರು, ವಿಟಿಪಿಸಿ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಮಹತ್ವದ ಮಾರ್ಗದರ್ಶನ ಸಿಕ್ಕಿದೆ. ಶಿವಾರಪಟ್ಟಣದ ಶಿಲ್ಪಕಲೆ, ಬೆಳಗಾವಿ ಕುಂದ, ಕರದಂಟು ಸೇರಿ 50ಕ್ಕೂ ಹೆಚ್ಚು ಉತ್ಪನ್ನಗಳಿಗೆ ಜಿಐ ಟ್ಯಾಗ್ ದೊರಕಿಸಿಕೊಡುವಲ್ಲಿ ರಾಮಯ್ಯ ಕಾನೂನು ಕಾಲೇಜು ಕೆಲಸ ನಿರ್ವಹಿಸಿದೆ ಎಂದು ಆರ್‌ಸಿಐಪಿಆರ್‌ ಪ್ರಕಟಣೆಯಲ್ಲಿ ತಿಳಿಸಿದೆ.

4.5 ಲಕ್ಷದ ಸೀರೆ ಅರ್ಪಣೆ: ವಿಜಯಪುರ ಜಿಲ್ಲೆಯ ಜಂಬಗಿಯ ಪ್ರಭುದೇವರ ಬೆಟ್ಟದ ಶಿವಯೋಗೀಶ್ವರ ಮಹಾರಾಜರ ಸಂಕಲ್ಪದಂತೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ವೀರಘಟ್ಟದ ಅಡವಿಲಿಂಗ ಮಹಾರಾಜರು ಸುಮಾರು ₹4.5 ಲಕ್ಷ ವೆಚ್ಚದಲ್ಲಿ ಸಿದ್ಧಪಡಿಸಿದ ಸೀರೆಯನ್ನು ರೇಣುಕಾ ಯಲ್ಲಮ್ಮ ದೇವಿಗೆ ಗುರುವಾರ ರಾತ್ರಿ ಅರ್ಪಿಸಿದರು. 1955ರಲ್ಲಿ ಜಂಬಗಿಯ ಪ್ರಭುದೇವರ ಬೆಟ್ಟದ ಶಿವಯೋಗೀಶ್ವರ ಮಹಾರಾಜರು ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಆಗಮಿಸಿದ್ದರು. ಆಗ ದೇವಿಗೆ ಇಂಥ ಸೀರೆ ನೀಡುವುದಾಗಿ ಬೇಡಿಕೊಂಡಿದ್ದರು. 

‘ನೈಸ್‌’ ಭವಿಷ್ಯ ನಿರ್ಧಾರಕ್ಕೆ ಸಂಪುಟ ಉಪಸಮಿತಿ ರಚನೆ: ರಸ್ತೆ ನಿರ್ಮಾಣ ಮುಂದುವರಿಸಬೇಕೆ? ಅಧ್ಯಯನ

70 ವರ್ಷಗಳ ನಂತರ, ಕಾಶಿಯ ಬನಾರಸನಲ್ಲಿ ರೇಷ್ಮೆಯಿಂದ ತಯಾರಿಸಿದ ಮತ್ತು ಚಿನ್ನದ ಝರಿಗಳನ್ನು ಒಳಗೊಂಡ ಸೀರೆಯನ್ನು ದೇವಿಗೆ ಅರ್ಪಿಸಿ ಭಕ್ತಿ ಮೆರೆದರು. ಸಕಲ ಜೀವರಾಶಿಗೆ ಒಳಿತಾಗಲೆಂದು ಪ್ರಾರ್ಥಿಸಿದರು. ನಂತರ ದೇವಿಗೆ ಉಡಿ ತುಂಬಿ ಹರಕೆ ತೀರಿಸಿದರು. ಶುಕ್ರವಾರ ಬೆಳಗ್ಗೆ ಮಡಿಭಜನೆ, ಧಾರ್ಮಿಕ ಸಭೆ ನೆರವೇರಿದವು. ರಾಯಚೂರು, ವಿಜಯಪುರ, ಬಳ್ಳಾರಿ ಜಿಲ್ಲೆಗಳಿಂದ ಬಂದಿದ್ದ ನೂರಾರು ಕಲಾವಿದರು ನಿರಂತರ 3 ದಿನಗಳವರೆಗೂ ಭಜನೆ ಪ್ರಸ್ತುತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!