
ಶಿವಮೊಗ್ಗ: ಜೋಕಾಲಿ ಆಡಲು ಹೋಗಿ, ಕುಣಿಕೆ ಬಿಗಿದು ಬಾಲಕಿ ಸಾವಿಗೀಡಾದಂತಹ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಮೂರು ದಿನದ ಹಿಂದೆ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು 9 ವರ್ಷದ ಪ್ರಣಮ್ಯ ಎಂದು ಗುರುತಿಸಲಾಗಿದೆ. ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಪ್ರಣಮ್ಯ ರೂಮಿನಲ್ಲಿ ಕಟ್ಟಿದ್ದ ಜೋಕಾಲಿಯಲ್ಲಿ ಆಡುತ್ತಿದ್ದಳು, ಬಾಗಿಲು ಹಾಕಿ ಜೋಕಾಲಿ ಆಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಆಡುತ್ತಿದ್ದ ಜೋಕಾಲಿಯೇ ನೇಣಿನಂತೆ ಕತ್ತನ್ನು ಸುತ್ತಿಕೊಂಡು ಬಾಲಕಿ ಸಾವನ್ನಪ್ಪಿದ್ದಾಳೆ.
ಬಾಲಕಿ ಪ್ರಣಮ್ಯ ವಿದ್ಯಾನಗರದ ನಿವಾಸಿಯಾಗಿದ್ದು, ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಗೆ ಬೇಸಿಗೆ ರಜೆ ಕಳೆಯಲು ಹೋಗಿದ್ದ ವೇಳೆ ಈ ದುರಂತ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟಿನಲ್ಲಿ ಈ ಬಾರಿಯ ಬೇಸಿಗೆ ರಜೆ ಪೋಷಕರಿಗೆ ಸಜೆಯಂತಾಗಿದ್ದು, ಮಕ್ಕಳನ್ನು ನೋಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಬೇಸಿಗೆಯ ಸೆಖೆಯಿಂದಾಗಿ ನೀರಿನ ಮೂಲಗಳಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ರಾಜ್ಯದಲ್ಲಿ ಎರಡಂಕಿ ದಾಟಿದೆ.
ಇದನ್ನೂ ಓದಿ: ಪ್ರೀ ಫೈರ್ ಗೇಮ್ ಚಟ: ಅಮ್ಮ ಗೇಮ್ ಆಡೋಕೆ ಫೋನ್ ಕೊಟ್ಟಿಲ್ಲ ಅಂತ ಅಮ್ಮನ ಸೀರೆಯಲ್ಲೇ ನೇಣಿಗೆ ಶರಣಾದ ಬಾಲಕ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ