Balija community: 2ಎ ಮೀಸಲು ನೀಡಿ, ಇಲ್ಲಿದಿದ್ದರೆ ಉಗ್ರ ಹೋರಾಟ: ಬಲಿಜ ವೇದಿಕೆ

By Kannadaprabha News  |  First Published Jan 3, 2023, 9:29 AM IST

ಬಲಿಜ ಸಮುದಾಯ ಅತಿ ಹಿಂದುಳಿದ ಸಮುದಾಯಗಳಲ್ಲಿ ಒಂದಾಗಿದ್ದು, ಉದ್ಯೋಗ ಮತ್ತು ರಾಜಕೀಯದಲ್ಲೂ 2ಎ ಮೀಸಲಾತಿ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ಸಮಗ್ರ ಬಲಿಜ ವೇದಿಕೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ತಪ್ಪಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದೆ.


ಬೆಂಗಳೂರು (ಜ.3) : ಬಲಿಜ ಸಮುದಾಯ ಅತಿ ಹಿಂದುಳಿದ ಸಮುದಾಯಗಳಲ್ಲಿ ಒಂದಾಗಿದ್ದು, ಉದ್ಯೋಗ ಮತ್ತು ರಾಜಕೀಯದಲ್ಲೂ 2ಎ ಮೀಸಲಾತಿ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ಸಮಗ್ರ ಬಲಿಜ ವೇದಿಕೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ತಪ್ಪಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ವೇದಿಕೆಯ ರಾಜ್ಯಾಧ್ಯಕ್ಷ ಎನ್‌.ಪಿ.ಮುನಿಕೃಷ್ಣ(NP munikrishna) ಅವರು, ಬಲಿಜ ಸಮುದಾಯ(balija community) ಉದ್ಯೋಗ ಮತ್ತು ರಾಜಕೀಯದಲ್ಲಿ 2ಎ ಮೀಸಲಾತಿ(2A reservation)ಗಾಗಿ ಕಳೆದ 28 ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದೆ. ಇತ್ತೀಚೆಗೆ ಚಳಿಗಾಲದ ಅಧಿವೇಶನ(winter session) ನಡೆದ ಬೆಳಗಾವಿಯ ಸುವರ್ಣ ಸೌಧ(Belagavi suvarna soudha)ದ ಎದುರು ಧರಣಿ ನಡೆಸಿ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದ್ದೇವೆ. ಆದರೆ, ಸರ್ಕಾರ ನಮ್ಮ ಬೇಡಿಕೆ ಪರಿಗಣಿಸಿಲ್ಲ ಎಂದು ದೂರಿದ್ದಾರೆ.

Tap to resize

Latest Videos

‘ಬಲಿಜ ಸಮುದಾಯಕ್ಕೆ 2ಎ ಮೀಸಲಾತಿ’

ಬಲಿಜ ಸಮುದಾಯಕ್ಕೆ ಶಿಕ್ಷಣದಲ್ಲಿ ನೀಡಿರುವಂತೆ ಉದ್ಯೋಗ ಮತ್ತು ರಾಜಕೀಯದಲ್ಲೂ 2ಎ ಮೀಸಲಾತಿ ನೀಡಬೇಕೆಂದು ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಹಾಗೂ ಆವನೂರು ಆಯೋಗಗಳು ಶಿಫಾರಸು ಮಾಡಿವೆ. ಹಿಂದೆ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಬಿಜೆಪಿಯ ಪ್ರಣಾಳಿಕೆಯಲ್ಲೂ ಪ್ರಕಟಿಸಲಾಗಿತ್ತು. ಆದರೆ, ಈಡೇರಿಸಿಲ್ಲ. ಹಾಗಾಗಿ ಸರ್ಕಾರ ಕೂಡಲೇ ನಮ್ಮ ಬೇಡಿಕೆ ಈಡೇರಿಕೆಗೆ ಕ್ರಮ ವಹಿಸದೆ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ್ಯ ಎಲ್ಲಾ ಜಿಲ್ಲೆ, ತಾಲೂಕು ಮಟ್ಟದಲ್ಲಿ ಬಲಿಜ ಸಮಾಜದಿಂದ ಪ್ರತಿಭಟನೆ ನಡೆಸುವುದಾಗಿ ಮುನಿಕೃಷ್ಣ ತಿಳಿಸಿದ್ದಾರೆ.

click me!