ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರದಿಂದ ಶೇ.60 ಅನುದಾನವನ್ನು ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರಕ್ಕೆ ಮನವಿ ಮಾಡಿದರು.
ಬೆಂಗಳೂರು (ಜು.15): ರಾಜ್ಯದಲ್ಲಿ ಸಾಮಾನ್ಯ ವರ್ಗದರ ಗಂಭೀರ ರೋಗಳಿಗೆ ಚಿಕಿತ್ಸೆ ಪಡೆಯಲು ಅನುಕೂಲ ಆಗಿರುವ ಆಯುಷ್ಮಾನ್ - ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಶೇ 60ರಷ್ಟು ಹಣಕಾಸಿನ ನೆರವು ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮನವಿ ಸಲ್ಲಿಕೆ ಮಾಡಿದ್ದಾರೆ.
ಡೆಹ್ರಾಡೂನ್ ಸ್ವಾಸ್ಥ್ಯ ಚಿಂಚಿನ ಶಿಬರದಲ್ಲಿ ಪಾಲ್ಗೊಂಡಿರುವ ಸಚಿವರು, ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರದಿಂದ ಹೆಚ್ಚಿನ ನೆರವಿನ ಅಗತ್ಯತೆಯ ಕುರಿತು ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದರು. ಈ ವೇಳೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ವಿಮೆ ಯೋಜನೆಗೆ (Ayushman Bharat Arogya Karnataka Scheme- ABARK) ಕೇಂದ್ರ ಸರ್ಕಾರ ಶೇ 60 ರಷ್ಟು ಅನುದಾನ ನೀಡಬೇಕು ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು
ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ದೇಶದಲ್ಲಿಯೇ ಅತ್ಯಧಿಕ ವಿಮೆ ಕೊಟ್ಟ ಕೆಎಸ್‌ಆರ್‌ಟಿಸಿ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಚೆಕ್
ಕೇಂದ್ರದಿಂದ ಹೆಚ್ಚಿನ ನೆರವು ಸಿಗುತ್ತಿಲ್ಲ: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆ (Ayushman Bharat Pradhan Mantri Jan Arogya Yojana-ABPMJAY) ಯೋಜನೆಯಲ್ಲಿ ಕರ್ನಾಟಕವು ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ. ಅದರೂ, ಆಯುಷ್ಮಾನ್ ಯೋಜನೆಯಡಿ ಆರೋಗ್ಯ ಕರ್ನಾಟಕ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ನೀರಿಕ್ಷಿತ ಹಣಕಾಸಿನ ನೆರವು ದೊರೆಯುತ್ತಿಲ್ಲ ಎಂದು ಸಚಿವ ಗುಂಡೂರಾವ್ ಕೇಂದ್ರ ಸಚಿವ ಮನ್ಸೂಖ್ ಮಂಡೋವಿಯಾ ಅವರಿಗೆ ವಿವರಿಸಿದರು.
ಕೇಂದ್ರದಿಂದ ಶೇ.36 ಅನುದಾನ ಬಿಡುಗಡೆ: ಪ್ರಸ್ತುತ ರಾಜ್ಯ ಸರ್ಕಾರ ಶೇ.64 ರಷ್ಟು ಹಣಕಾಸಿನ ನೆರವು ನೀಡುತ್ತಿದ್ದು, ಕೇಂದ್ರ ಸರ್ಕಾರ ಶೇ 36 ರಷ್ಟು ಮಾತ್ರ ಅನುದಾನ ಒದಗಿಸುತ್ತಿದೆ. ಈ ಮೂಲಕ ಎಬಿಎಆರ್‌ಕೆ ಕಾರ್ಡ್ ಮೂಲಕ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಗೆ ಶೇ.64 ರಷ್ಟು ಹಣಕಾಸನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಸರ್ಕಾರ ಶೇ 60 ರಷ್ಟು ಹಣಕಾಸಿನ ನೆರವು ನೀಡದರೆ ಇನ್ನೂ ಪರಿಣಾಮಕಾರಿಯಾಗಿ ಹೆಚ್ಚಿನ ಜನರಿಗೆ ಯೋಜನೆಯನ್ನ ತಲುಪಿಸಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೇ 60 ರಾಜ್ಯ ಸರ್ಕಾರ ಶೇ 40 ದರಗಳಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದರು.
ನೀಟ್ ಪಾಸಾದವರು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಜು.21 ಕೊನೆ ದಿನ: ಇಂದೇ ಅರ್ಜಿ ಸಲ್ಲಿಸಿ
ಜನರ ಆರೋಗ್ಯ ಭದ್ರೆತೆಗೆ ಆಯುಷ್ಮಾನ್ ಆರೋಗ್ಯ ಯೋಜನೆ ಸಹಕಾರಿ: ಸಾರ್ವಜನಿಕರ ಆರೋಗ್ಯ ಭದ್ರತೆ ದೃಷ್ಠಿಕೋನದಲ್ಲಿ ಆರಂಭ ಆಗಿರುವ ಆಯುಷ್ಮಾನ್ ಭಾರತ್ ಮಹತ್ವದ ಯೋಜನೆಗೆ ಈ ಬಗ್ಗೆ ಶೀಘ್ರ ನಿರ್ಣಯ ಕೈಗೊಳ್ಳುವಂತೆ ಸಚಿವರು ಮನವಿ ಮಾಡಿದರು. ಸ್ವಾಸ್ಥ್ಯ ಚಿಂತನ ಶಿಬಿರದ ಎರಡನೇ ದಿನವಾದ ಇಂದು ಆಯುಷ್ಮಾನ್ ಭವ ವಿಚಾರ ಸಂಕಿರಣದಲ್ಲಿ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೋ ಚೇರ್ಮೆನ್ ಆಗಿ ಪಾಲ್ಗೊಂಡಿದ್ದರು.