ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳು ಖುದ್ದು ಹಾಜರಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಬೆಂಗಳೂರು (ಜು.14): ನಾಳೆಯಿಂದ ಪ್ರಾರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಬಾರಿ ಸಂಪೂರ್ಣ ಬಜೆಟ್‌ಗೆ ಮಾರ್ಚ್ ನಲ್ಲಿಯೇ ಅನುಮೋದನೆ ದೊರೆತಿರುವ ಕಾರಣ ಇದು ಬಜೆಟ್ ಬಗ್ಗೆ ಚರ್ಚಿಸುವ ಅಧಿವೇಶನ ಅಲ್ಲ. ಯಾವಗಲೂ ಮಾರ್ಚ್ ನಲ್ಲಿ ಲೇಖಾನುದಾನ ಪಡೆದು, ಮಳೆಗಾಲದ ಅಧಿವೇಶನದಲ್ಲಿ ಪೂರ್ಣ ಬಜೆಟ್ ಗೆ ಅನುಮೋದನೆ ಪಡೆಯಲಾಗುತ್ತಿತ್ತು. ಈ ಬಾರಿ ಪೂರ್ಣ ಬಜೆಟ್ ಅನುಮೋದನೆ ಆಗಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದವರು ಈ ಬಾರಿಯ ಸಂಪೂರ್ಣ ಅಧಿವೇಶನವನ್ನು ವಿವಿಧ ಆರೋಪ ಮಾಡುವ ಕುರಿತು ಬಳಸಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಸೂಕ್ತ ಉತ್ತರ ನೀಡಲು ಅಧಿಕಾರಿಗಳು ಸಿದ್ಧರಾಗಿರಬೇಕು ಎಂದು ಸೂಚಿಸಿದರು.
undefined
ಬೆಂಗಳೂರು ಮೂರು ತಿಂಗಳಿಂದ ಮನೆ ಬಾಡಿಗೆ ಕುಸಿತ; ವರ್ಕ್ ಫ್ರಮ್ ಹೋಮ್ ಬಿಟ್ಟುಬರದ ಟೆಕ್ಕಿಗಳಿಂದ ಮಹಾ ಹೊಡೆತ
ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಮಾಹಿತಿ ಪಡೆದರು. ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸಹ ಸೂಚನೆ ನೀಡಿದರು. ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು. ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ. ನಿಮ್ಮ ಇಲಾಖೆಯ ವಿಷಯ ಇದ್ದಾಗ ಕಾರ್ಯದರ್ಶಿಗಳು ಖುದ್ದು ಹಾಜರಿದ್ದು, ಸಚಿವರಿಗೆ ಸಹಕಾರ ನೀಡಬೇಕು. ಕೇವಲ ಅಧೀನ ಅಧಿಕಾರಿಗಳನ್ನು ಕಳುಹಿಸಿ ಗೈರು ಹಾಜರಾಗುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.
ಕ್ಷೇತ್ರದ ಅಭಿವೃದ್ಧಿಗೆ ಅಧಿವೇಶನ ಸದುಪಯೋಗ ಮಾಡಿಕೊಳ್ಳಿ: ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ನಾನು ಅಧಿಕಾರ ವಹಿಸಿಕೊಂಡು ಒಂದು ವರ್ಷ ಆಯ್ತು. ಸದನಕ್ಕೆ ಶಾಸಕರು ಯಾರು ಬೇಗ ಬರ್ತಾರೆ ಕೊನೆಯವರೆಗೂ ಇರ್ತಾರೆ. ಇದನ್ನ ಗುರುತಿಸಲು ಎಐ ಟೆಕ್ನಾಲಜಿ ಬಳಸಲಾಗುತ್ತದೆ. ಶಾಸಕರು ಎಷ್ಟು ಗಂಟೆಗೆ ಬರ್ತಾರೆ ಹೋಗ್ತಾರೆ, ಶಾಸಕರು ಕ್ಷೇತ್ರದ ಬಗ್ಗೆ ಚರ್ಚೆ ಮಾಡಬೇಕು. 10 ದಿನ ಅಧಿವೇಶನ ನಡೆಯುತ್ತದೆ, ಇದರ ಸದುಪಯೋಗ ಮಾಡಿಕೊಬೇಕು. ವಿಪಕ್ಷಗಳಿಂದ ವಿಧಾನಸೌದಕ್ಕೆ ಮುತ್ತಿಗೆ ವಿಚಾರದ ಬಗ್ಗೆ ಮಾತನಾಡಿ, ಇಷ್ಟು ದಿನ ಸಮಯ ಇತ್ತಲ್ಲಾ ಆಗ ಮುತ್ತಿಗೆ ಹಾಕಬೇಕಿತ್ತು. ಇನ್ನು ಅವರು ಮುತ್ತಿಗೆ ಹಾಕಲು ಪ್ರಜಾಪ್ರಭುತ್ವದಲ್ಲಿ ಅವಕಾಶ ಇದೆ. ಆದರೆ, ಅಧಿವೇಶನದ ಸಮಯವನ್ನ ಕುಂಠಿತ ಮಾಡಬಾರದು ಎಂಬುದು ನಮ್ಮ ಆಶಯ ಆಗಿದೆ.
ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯ ನಿರತರಾಗಿದ್ದಾರೆ: ಕೇಂದ್ರ ಸಚಿವ ವಿ.ಸೋಮಣ್ಣ
ವಿಪಕ್ಷದವರು ಅಧಿವೇಶನ ಸಮಯ ಹಾಳುಮಾಡಬೇಡಿ: ವಿಪಕ್ಷದವರು ಅಧಿವೇಶನ ಆದ್ಮೇಲೆ ಮುತ್ತಿಗೆ ಹಾಕಬಹುದು. ಸಿಕ್ಕಿರುವ ಸಮಯವಕಾಶವನ್ನ ಕ್ಷೇತ್ರದ ಸಮಸ್ಯೆ ಮನವಿಗಳ ಬಗ್ಗೆ ಮಾತಾಡಲಿ. ಅಧಿವೇಶನದಲ್ಲಿ ಸಮಸ್ಯೆಗಳ ಚರ್ಚೆ ಮಾಡಬೇಕು. ಪ್ರತಿಪಕ್ಷಗಳಿಗೆ ಎಲ್ಲರ ರೀತಿಯ ಸಹಕಾರ ಕೊಡ್ತಿನಿ ನಾನು ಅವರ ಮಿತ್ರ. ರಾಜ್ಯದ ದೇಶದ ಹಿತಕೋಸ್ಕರ ವಿಪಕ್ಷಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.