ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಿ: ಕಾಂಗ್ರೆಸ್

Published : Feb 04, 2024, 05:49 AM IST
ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಿ: ಕಾಂಗ್ರೆಸ್

ಸಾರಾಂಶ

ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೂ ಮರಣೋತ್ತರ ಭಾರತ ರತ್ನ ನೀಡಿ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರು (ಫೆ.4): ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೂ ಮರಣೋತ್ತರ ಭಾರತ ರತ್ನ ನೀಡಿ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಶ್ರೀ ಶಿವಕುಮಾರ ಸ್ವಾಮೀಜಿ ಅವರು ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು ಎನಿಸಿದ್ದಾರೆ. ಸಿದ್ಧಗಂಗಾ ಶ್ರೀಗಳು ಇಡೀ ದೇಶಕ್ಕೇ ಮಾದರಿ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಲಿಂಗೈಕ್ಯ ಶ್ರೀಗಳಿಗೆ ಆದ್ಯತೆ ನೀಡಬೇಕು. ಅವರಿಗೆ ಮರಣೋತ್ತರ ಭಾರತ ರತ್ನ ನೀಡಿ ಎಂದು ಮನವಿ ಮಾಡಿದ್ದಾರೆ.

ಎಲ್‌ಕೆ ಅಡ್ವಾಣಿಗೆ ಭಾರತ ರತ್ನ ಘೋಷಣೆ; ಅಯೋಧ್ಯೆಯಿಂದ ಬಂತು ಪೇಜಾವರ ಶ್ರೀಗಳ ಸಂದೇಶ!

ಅಷ್ಟೇ ಅಲ್ಲದೆ, ಶಿವಕುಮಾರ ಸ್ವಾಮೀಜಿ ಅವರು ಈ ಶತಮಾನ ಕಂಡ ಅಪರೂಪದ ಶರಣರಾಗಿದ್ದವರು. ಶ್ರೀಗಳು ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹ ಮೂಲಕ ತ್ರಿವಿಧ ದಾಸೋಹವನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಮಾಡಿದರು. ಯಾವುದೇ ಜಾತಿ, ಧರ್ಮ ಭೇದ ಮಾಡಿದೆ ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಸಹಾಯ ಬೇಡಿ ಬಂದ ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಆಹಾರ ನೀಡಿ ಸಮಾಜದಲ್ಲಿ ಒಂದು ಉತ್ತಮ ಸ್ಥಾನವನ್ನು ಹಾಗೂ ಹೆಸರು ಗಳಿಸುವಂತೆ ಮಾಡಿದವರು ಅವರು ಎಂದು ರಣದೀಪ್ ಸುರ್ಜೇವಾಲಾ ವಿವರಣೆ ನೀಡಿದ್ದಾರೆ.

ಶಿವಕುಮಾರ ಸ್ವಾಮೀಜಿ ಅವರು ನಿಜವಾಗಿಯೂ ಭಾರತದ ಅಮೂಲ್ಯ ರತ್ನ, ಕರ್ನಾಟಕದ ಈ ಮಹಾನ್‌ ಪುರುಷ ಶಿವಕುಮಾರ್ ಶ್ರೀಗಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಬೇಕೆನ್ನುವುದು ನನ್ನ ಭಾವನೆ. ಇದು ಆರೂವರೆ ಕೋಟಿ ಕನ್ನಡಿಗರ ಮಹಾಭಿಲಾಷೆಯೂ ಆಗಿದೆ ಎಂದು ಹೇಳಿದ್ದಾರೆ.

ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾಗಿರುವ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಘೋಷಿಸಿದ ಬೆನ್ನಲ್ಲೇ ಇದೀಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಿ ಎಂಬ ಕೂಗು ಜೋರಾಗಿದ

    PREV

    ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

    Read more Articles on
    click me!

    Recommended Stories

    ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
    ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!