
ಬೆಂಗಳೂರು(ಜು.23): ನೆರೆಪೀಡಿತರು ಮತ್ತು ಮನೆ ಕಳೆದುಕೊಂಡವರಿಗೆ ಹಿಂದಿನ ಬಿಜೆಪಿ ಸರ್ಕಾರ ಸ್ಪಂದಿಸಿದ ಮಾದರಿಯಲ್ಲಿ ಈಗಿನ ಕಾಂಗ್ರೆಸ್ ಸರ್ಕಾರವೂ ಹೆಚ್ಚು ಪರಿಹಾರ ಕೊಟ್ಟು ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಕೋಲಾ ತಾಲ್ಲೂಕಿನ ಉಳುವಾರೆ, ಶಿರೂರು ಮತ್ತಿತರ ಕಡೆ ಆದ ಮಳೆ ಹಾನಿ, ಅನಾಹುತದಿಂದ ಬಡವರು ಮನೆ ಕಳೆದುಕೊಂಡಿದ್ದಾರೆ. ಅದನ್ನು ನಾನು ವೀಕ್ಷಿಸಿ ಬಂದಿದ್ದೇನೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ರಾಜ್ಯ ಸರ್ಕಾರವು ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಮನೆ ಕಳೆದುಕೊಂಡ ಬಡವರಿಗೆ ಸುಮಾರು ಒಂದು ಲಕ್ಷ ರು. ಕೊಡ ಬೇಕಿತ್ತು. ಅದು ಸಾಕಾಗುವುದಿಲ್ಲ ಎಂದು 5 ಲಕ್ಷ ರು. ನೀಡುವ ನಿರ್ಧಾರವನ್ನು ಯಡಿಯೂ ಅವರು ಕೈಗೊಂಡಿದ್ದರು ಎಂದರು.
ಸುಮ್ಮನೆ ಪ್ರತಿಪಕ್ಷಗಳನ್ನು ಬೆದರಿಸಬೇಡಿ, ನಿಮ್ಮ ಗೊಡ್ಡು ಬೆದರಿಕೆಗಳಿಗೆ ಹೆದರಲ್ಲ: ವಿಜಯೇಂದ್ರ
ಗೋಡೆ ಕುಸಿದ ಮನೆಗೆ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ 40 ಸಾವಿರ ರು. ಕೊಡುತ್ತಿದ್ದರು. ಅದನ್ನು ಒಂದು ಲಕ್ಷಕ್ಕೆ ಹೆಚ್ಚಿಸುವ ನಿರ್ಧಾರವನ್ನು ಯಡಿಯೂರಪ್ಪ ಅವರು ಕೈಗೊಂಡಿದ್ದರು. ರಾಜ್ಯಾದ್ಯಂತ ಬಡವರು ಅತಿವೃಷ್ಟಿಯಿಂದ ಮನೆಗಳನ್ನು ಕಳಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಇದೇ ಮಾದರಿಯಲ್ಲಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಹೋರಾಟ ಮುಂದುವರೆಯಲಿದೆ:
ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ವಾಲ್ಮೀಕಿ ನಿಗಮದ ಹಗರಣ ಕುರಿತ ಬಿಜೆಪಿಯ ಹೋರಾಟ ಮುಂದುವರೆಯಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ