ರಾಜ್ಯಕ್ಕೆ ಹೆಚ್ಚು ಗ್ಯಾಸ್‌ ಕೊಡಿ : ಕೇಂದ್ರಕ್ಕೆ ಸಿಎಂ

Kannadaprabha News   | Kannada Prabha
Published : Mar 21, 2026, 08:47 AM IST
CM Siddaramaiah

ಸಾರಾಂಶ

ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯನ್ನು ನೀಗಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು : ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯನ್ನು ನೀಗಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ತಮ್ಮ ಎಕ್ಸ್‌ ಖಾತೆಯಲ್ಲಿ ಪತ್ರ ಸಹಿತ ಪೋಸ್ಟ್‌ ಮಾಡಿರುವ ಮುಖ್ಯಮಂತ್ರಿ

ಈ ಮಾಹಿತಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಪತ್ರ ಸಹಿತ ಪೋಸ್ಟ್‌ ಮಾಡಿರುವ ಮುಖ್ಯಮಂತ್ರಿ ಅವರು, ರಾಜ್ಯ ಸರ್ಕಾರವು ಈಗಾಗಲೇ ಅಗತ್ಯ ವಲಯಗಳಿಗೆ ಪೂರೈಕೆಯನ್ನು ನಿಯಂತ್ರಿಸಲು ಮತ್ತು ಆದ್ಯತೆ ನೀಡಲು ಕ್ರಮಗಳನ್ನು ತೆಗೆದುಕೊಂಡಿದೆ. ಆದಾಗ್ಯೂ, ಸುಮಾರು 50,000 ಸಿಲಿಂಡರ್‌ಗಳ ಬೇಡಿಕೆ ಮತ್ತು ದಿನಕ್ಕೆ ಕೇವಲ 1,000 ಸಿಲಿಂಡರ್‌ಗಳ ಪೂರೈಕೆಗೆ ಸೀಮಿತವಾಗಿರುವುದರಿಂದ, ಪರಿಸ್ಥಿತಿ ನಿರ್ಣಾಯಕವಾಗಿಯೇ ಇದೆ. ವಾಣಿಜ್ಯ ಸಿಲಿಂಡರ್‌ಗಳ ಕೊರತೆಯಿಂದ ಹೋಟೆಲ್‌ಗಳು ಮುಚ್ಚಬೇಕಾದ ಸ್ಥಿತಿ ಬಂದಿದೆ. ಇದು ಕೇವಲ ಆ ಉದ್ಯಮಗಳ ಮೇಲೆ ಮಾತ್ರವಲ್ಲದೆ, ಹೋಟೆಲ್ ಅವಲಂಬಿತವಾಗಿರುವ ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳು ಮತ್ತು ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಪೂರೈಕೆಯನ್ನು ಮೇಲ್ವಿಚಾರಣೆ ಮಾಡಲು ಸಮಗ್ರ ವೇದಿಕೆ ಲಭ್ಯವಿಲ್ಲ

ಗೃಹ ಬಳಕೆಯ ಅನಿಲ ಪೂರೈಕೆಯನ್ನು ಮೇಲ್ವಿಚಾರಣೆ ಮಾಡಲು ಈಗಾಗಲೇ ಐಟಿ ವ್ಯವಸ್ಥೆ ಇದ್ದರೂ, ವಾಣಿಜ್ಯ ಪೂರೈಕೆಯನ್ನು ಮೇಲ್ವಿಚಾರಣೆ ಮಾಡಲು ಸಮಗ್ರ ವೇದಿಕೆ ಲಭ್ಯವಿಲ್ಲ. ಅದೇ ರೀತಿಯಲ್ಲಿ, ಆಟೋ ಎಲ್‌ಪಿಜಿ ಅನೇಕ ಆಟೋ ರಿಕ್ಷಾಗಳಿಗೆ ಅತ್ಯಂತ ಪ್ರಮುಖ ಇಂಧನವಾಗಿದೆ. ಇದು ನಗರದ ಕಟ್ಟಕಡೆಯ ಸಂಪರ್ಕ ವ್ಯವಸ್ಥೆಯ ಮುಖ್ಯ ಭಾಗವಾಗಿದ್ದು ಅನೇಕ ಚಾಲಕರ ಜೀವನೋಪಾಯವನ್ನು ಬೆಂಬಲಿಸುತ್ತದೆ. ಆದರೆ ಆಟೋ ಎಲ್‌ಪಿಜಿ ವಿತರಣೆಯನ್ನು ಮೇಲ್ವಿಚಾರಣೆ ಮಾಡಲು ಸಮಗ್ರ ವ್ಯವಸ್ಥೆ ಇಲ್ಲದ ಕಾರಣ ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಕೊರತೆ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ಭಾರತಕ್ಕೆ ಶೀಘ್ರದಲ್ಲೇ ಎರಡು ಟ್ಯಾಂಕರ್‌ಗಳು ಬರಲಿರುವುದಾಗಿ ನಮಗೆ ತಿಳಿದುಬಂದಿದೆ. ಇದು ಮೇಲ್ಕಂಡ ಸಮಸ್ಯೆಗಳನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು. ಆದ್ದರಿಂದ, ರಾಜ್ಯದ ಕಾರ್ಯಾಚರಣ ಅಗತ್ಯತೆಗಳು ಹಾಗೂ ವಿಶೇಷ ಅವಲಂಬನೆ ಮಾದರಿಗಳನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಬೆಂಗಳೂರು ನಗರದ ದೃಷ್ಟಿಯಿಂದ, ಕರ್ನಾಟಕಕ್ಕೆ ಸಮರ್ಪಕ ಪ್ರಮಾಣದಲ್ಲಿ ವಾಣಿಜ್ಯ ಎಲ್‌ಪಿಇ ಮತ್ತು ಆಟೋ ಎಲ್‌ಪಿಜಿ ಹಂಚಿಕೆ ಮತ್ತು ಲಭ್ಯತೆಯನ್ನು ಖಚಿತಪಡಿಸಲು ನಿಮ್ಮ ಮಧ್ಯಸ್ಥಿಕೆಯನ್ನು ವಿನಂತಿಸುತ್ತೇನೆ ಎಂದು ಸಿಎಂ ಬರೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಿವೃತ್ತಿಗೆ ವಾರ ಇರುವಾಗಲೇ ಸಮಾಜ ಕಲ್ಯಾಣ ಅಧಿಕಾರಿ ಆತ್ಮ*ತ್ಯೆ, ಸಾವಿಗೂ ಮುನ್ನ ವಿಡಿಯೋ ರೆಕಾರ್ಡ್
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ತನಿಖೆಗೆ ಹೈಕೋರ್ಟ್ ತಡೆ, ನಿಟ್ಟುಸಿರು ಬಿಟ್ಟ ಭಕ್ತರು