ಸರ್ಕಾರದ ಸುಪರ್ದಿಯಲ್ಲಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲಾಗಿದೆ. ಗೋಕರ್ಣ ದೇವಾಲಯವನ್ನು ಮಠಕ್ಕೆ ಸೋಮವಾರದೊಳಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ದೇಗುಲವನ್ನು ಮಠಕ್ಕೆ ಹಸ್ತಾಂತರಿಸಲಾಗಿದೆ.
ಕಾರವಾರ: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸರ್ಕಾರದ ಸುಪರ್ದಿಯಲ್ಲಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲಾಗಿದೆ.
ಗೋಕರ್ಣ ದೇವಾಲಯವನ್ನು ಮಠಕ್ಕೆ ಸೋಮವಾರದೊಳಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ದೇಗುಲವನ್ನು ಮಠಕ್ಕೆ ಹಸ್ತಾಂತರಿಸಲಾಗಿದೆ.
ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ ಬಿ.ಎಸ್ .ನಾಗರತ್ನಮ್ಮ ಈ ಬಗ್ಗೆ ಆದೇಶ ನೀಡಿದ್ದರು. ಕೊಲ್ಲೂರು ದೇವಾಲಯದ ಆಡಳಿತಾಧಿಕಾರಿಯಾಗಿರುವ ಹಾಲಪ್ಪ ಅವರನ್ನೇ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತಾಧಿಕಾಯಾಗಿ ಸರ್ಕಾರ ನೇಮಿಸಿತ್ತು.
ಹಾಲಪ್ಪ ಶನಿವಾರ ಗೋಕರ್ಣಕ್ಕೆ ಆಗಮಿಸಿ ತಮ್ಮ ಆಡಳಿತದಲ್ಲಿದ್ದ ದೇವಾಲಯವನ್ನು ಮಠಕ್ಕೆ ಹಸ್ತಾಂತರ ಮಾಡಿದ್ದಾರೆ.