ಚಿನ್ನ ಅಕ್ರಮ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ 1 ವರ್ಷ ಜೈಲೇ ಗತಿ

Published : Apr 26, 2025, 11:27 AM ISTUpdated : Apr 26, 2025, 11:36 AM IST
ಚಿನ್ನ ಅಕ್ರಮ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ 1 ವರ್ಷ ಜೈಲೇ ಗತಿ

ಸಾರಾಂಶ

ರಾಜ್ಯದ ಗೂಂಡಾ ಕಾಯ್ದೆ ಮಾದರಿಯ ಈ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಪರಿಣಾಮ ಆರೋಪಿ ರನ್ಯಾ ರಾವ್, ಆಕೆಯ ಸ್ನೇಹಿತರಾದ ನಟ ತರುಣ್ ಹಾಗೂ ಸಾಹಿಲ್ ಜೈನ್‌ ಅವರು ಒಂದು ವರ್ಷ ಜಾಮೀನು ಸಿಗದೆ ಜೈಲಿನಲ್ಲೇ ಇರಬೇಕಾಗುತ್ತದೆ.   

ಬೆಂಗಳೂರು (ಏ.26): ಚಿನ್ನ ಕಳ್ಳ ಸಾಗಣೆ ಪ್ರಕರಣದ ಬಂಧಿತ ಆರೋಪಿ, ಡಿಜಿಪಿ ಅವರ ಮಲ ಮಗಳು ರನ್ಯಾ ರಾವ್ ಹಾಗೂ ಆಕೆಯ ಇಬ್ಬರು ಸ್ನೇಹಿತರ ವಿರುದ್ಧ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ)ವು ವಿದೇಶಿ ವಿನಿಮಯ ಸಂರಕ್ಷಣೆ ಹಾಗೂ ಕಳ್ಳ ಸಾಗಣೆ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಕಾಫಿಪೊಸಾ) ಪ್ರಯೋಗಿಸಿದೆ. ರಾಜ್ಯದ ಗೂಂಡಾ ಕಾಯ್ದೆ ಮಾದರಿಯ ಈ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಪರಿಣಾಮ ಆರೋಪಿ ರನ್ಯಾ ರಾವ್, ಆಕೆಯ ಸ್ನೇಹಿತರಾದ ನಟ ತರುಣ್ ಹಾಗೂ ಸಾಹಿಲ್ ಜೈನ್‌ ಅವರು ಒಂದು ವರ್ಷ ಜಾಮೀನು ಸಿಗದೆ ಜೈಲಿನಲ್ಲೇ ಇರಬೇಕಾಗುತ್ತದೆ. 

ವೃತ್ತಿಪರ ಕಳ್ಳ ಸಾಗಣಿದಾರರ ವಿರುದ್ಧ ಪ್ರಯೋಗಿಸುವ ಕಾಫಿಪೋಸಾ ಕಾಯ್ದೆಯನ್ನು ರನ್ಯಾ ತಂಡದ ಮೇಲೆ ಡಿಆರ್‌ಐ ಹೂಡಿರುವುದು ಮಹತ್ವ ಪಡೆದುಕೊಂಡಿದೆ. ಕಳೆದ ಮಾರ್ಚ್‌ನಲ್ಲಿ ದುಬೈನಿಂದ 12 ಕೋಟಿ ರು. ಮೌಲ್ಯದ 14.1 ಕೆ.ಜಿ. ಚಿನ್ನವನ್ನು ಕಳ್ಳ ಸಾಗಣೆ ಮಾಡುವಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರ ಮಲ ಮಗಳು ರನ್ಯಾರಾವ್‌ರನ್ನು ಡಿಆರ್‌ಐ ಬಂಧಿಸಿತ್ತು. ಬಳಿಕ ವಿಚಾರಣೆ ವೇಳೆ ಆಕೆ 43 ಕೋಟಿ ರು. ಮೌಲ್ಯಕ್ಕೂ ಮಿಗಿಲಾದ ಚಿನ್ನಾಭರಣ ಸಾಗಿಸಿರುವುದು ಪತ್ತೆಯಾಗಿತ್ತು. 

ಈ ಕಳ್ಳ ಸಾಗಣೆಗೆ ನೆರವು ನೀಡಿದ್ದ ಆಕೆಯ ಸ್ನೇಹಿತ ಹಾಗೂ ಬೆಂಗಳೂರಿನ ಏಟ್ರಿಯಾ ಹೋಟೆಲ್ ಸಮೂಹದ ಮಾಲಿಕರ ಮೊಮ್ಮಗ ತರುಣ್ ಹಾಗೂ ಬಳ್ಳಾರಿ ಚಿನ್ನಾಭರಣ ವ್ಯಾಪಾರಿ ಸಾಹಿಲ್ ಜೈನ್‌ನನ್ನೂ ಡಿಆರ್‌ಐ ಬಂಧಿಸಿತ್ತು. ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ ಡಿಆರ್‌ಐ ಅಧಿಕಾರಿಗಳು, ರನ್ಯಾ ತಂಡದ ವಿರುದ್ಧ ಕಾಫಿಪೊಸಾ ಪ್ರಯೋಗಕ್ಕೆ ಕೇಂದ್ರ ಆರ್ಥಿಕ ಗುಪ್ತಚರ ಮಂಡಳಿಗೆ ಪ್ರಸ್ತಾಪನೆ ಸಲ್ಲಿಸಿದ್ದರು. ಈ ಪ್ರಸ್ತಾಪಕ್ಕೆ ಮಂಡಳಿ ಸಮ್ಮತಿ ಸೂಚಿಸಿದ ಬೆನ್ನಲ್ಲೇ ಆರೋಪಿಗಳ ವಿರುದ್ಧ ಕಾಫಿಪೊಸಾ ಕಾಯ್ದೆ ಹೂಡಲಾಗಿದೆ ಎಂದು ಮೂಲಗಳು ಹೇಳಿವೆ.

ಚಿನ್ನ ಅಕ್ರಮ ಸಾಗಣೆ ಪ್ರಕರಣ: ರನ್ಯಾ ರಾವ್‌ ಜಾಮೀನು ತೀರ್ಪು ಬಾಕಿ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್‌ ಕಳೆದ ನಾಲ್ಕು ತಿಂಗಳಲ್ಲಿ ಸುಮಾರು 38.39 ಕೋಟಿ ರು. ಹಣವನ್ನು ಹವಾಲಾ ಮೂಲಕ ದುಬೈಗೆ ವರ್ಗಾಹಿಸಿ 49.6 ಕೆ.ಜಿ. ಚಿನ್ನ ಖರೀದಿಸಿದ್ದರು. ಅದನ್ನು ಕಳ್ಳ ಸಾಗಣೆ ಮೂಲಕ ನಗರಕ್ಕೆ ತಂದು ಮಾರಾಟ ಮಾಡಿದ್ದರು ಎಂದು ಆಕೆಯ ಸ್ನೇಹಿತ ಸಾಹಿಲ್‌ ಜೈನ್‌ ಕಂದಾಯ ಜಾರಿ ನಿರ್ದೇಶನಾಲಯ (ಡಿಆರ್‌ಐ)ದ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ತಾನು ದುಬೈಗೆ 38.39 ಕೋಟಿ ರು. ಹವಾಲಾ ಹಣ ವರ್ಗಾವಣೆಯಲ್ಲಿ ರನ್ಯಾಗೆ ಸಹಕರಿಸಿದ್ದೆ. ಅಲ್ಲದೆ, ಬೆಂಗಳೂರಿನಲ್ಲಿ 5 ಹಂತದಲ್ಲಿ ಆಕೆಗೆ 1.7 ಕೋಟಿ ರು. ಹವಾಲಾ ಮೂಲಕ ಹಣ ತಲುಪಿಸಿದ್ದಾಗಿ ಸಹ ವಿಚಾರಣೆ ವೇಳೆ ಸಾಹಿಲ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಈ ಕುರಿತ ಮಾಹಿತಿಯನ್ನು ಡಿಆರ್‌ಐ ಕೋರ್ಟ್‌ಗೆ ಮಾಹಿತಿ ಸಹ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!