
ಬೆಂಗಳೂರು (ಫೆ.20): ರಾಜ್ಯದಲ್ಲಿ ಹೊಸದಾಗಿ ಸರ್ಕಾರದಿಂದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ಮೂಲಕ ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬಿಲ್ಲವ - ಈಡಿಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮವನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ 15/4ರ ಅನ್ವಯ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು ಅನುಚ್ಚೇದ 16/4ರ ಅನ್ವಯ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹಿರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪ್ರವರ್ಗ 2ಎ ಕ್ರಮಸಂಖ್ಯೆ 4a ಯಿಂದ zವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿದೆ.
ಸ್ಥಾನಮಾನಕ್ಕಾಗಿ ಕೋಟ ಹಾಗೂ ಸುನೀಲ್ ಸಮುದಾಯವನ್ನು ಬಲಿ ಕೊಟ್ಟಿದ್ದಾರೆ: ಪ್ರಣವಾನಂದ ಸ್ವಾಮೀಜಿ
ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆ: ಈ ಪ್ರಸ್ತಾವನೆಯನ್ನು ಪರಿಗಣಿಸಿ ಈಡಿಗ- ಬಿಲ್ಲವ ಸೇರಿದಂತೆ ಒಟ್ಟು 26 ಉಪಜಾತಿಗಳ ಸಮಗ್ರ ಅಭಿವೃದ್ಧಿಗೆ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
ಅಭಿನಂದನೆ ಸಲ್ಲಿಸಿದ ಕುಮಾರ್ ಬಂಗಾರಪ್ಪ: ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಈಡಿಗ ಸಮಾಜದ ಶಾಸಕರಾದ ಕುಮಾರ ಬಂಗಾರಪ್ಪ, ಹರತಾಳ ಹಾಲಪ್ಪ, ಸುಭಾಸ್ ಗುತ್ತೆದಾರ, ಉಮಾನಾಥ ಕೋಟ್ಯಾನ್ ಇಂದು ಅಭಿನಂದನೆ ಸಲ್ಲಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ