ರೈತರಿಗೆ ಸಿಹಿಸುದ್ದಿ: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.90 ಸಹಾಯಧನ ಪಡೆಯಲು ಅರ್ಜಿ ಆಹ್ವಾನ

By Santosh Naik  |  First Published Nov 16, 2024, 2:31 PM IST

ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಟ್ರಾಕ್ಟರ್ ಖರೀದಿಗೆ ಮತ್ತು ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್‌ ಖರೀದಿಗೆ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ.


ಬೆಂಗಳೂರು (ನ.16): ರೈತರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸಹಾಯಧನದೊಂದಿಗೆ ಕೃಷಿ ಯಂತ್ರೋಪಕರಣಗಳನ್ನು (Agricultural machinery) ಖರೀದಿಸಲು ಅರ್ಹ ರೈತರಿಂದ (Farmers news) ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ (Tractor Subsidy) ಟ್ರಾಕ್ಟರ್ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದ್ದರೆ, ಸಾಮಾನ್ಯ ವರ್ಗದ ರೈತರು ಶೇ.50ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್‌ ಸಹಾಯಧನ ಪಡೆಯಬಹುದಾಗಿದೆ. ಆಸಕ್ತ ರೈತರು ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಎರಡು ಭಾವಚಿತ್ರ, 100 ರೂಪಾಯಿಯ ಬಾಂಡ್‌ ಪೇಪರ್‌ನೊಂದಿಗೆ ಸ್ಥಳೀಯ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

2024-25ರ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್‌ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ಹಾಗೂ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ.90ರ ರಿಯಾಯ್ತಿ ದರದಲ್ಲಿ ತುಂತುರು ನೀರಾವರಿ ಘಟಕ (ಹೆಚ್‍ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ.

ಇದರೊಂದಿಗೆ  ಕೃಷಿ ಭಾಗ್ಯ ಯೋಜನೆಯಲ್ಲಅರ್ಹ ರೈತರಿಗೆ ನೀರು ಸಂಗ್ರಹಣಾ ರಚನೆ(ಕೃಷಿ ಹೊಂಡ), ಕೃಷಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಾಣ, ಹೊಂಡದಿಂದ ನೀರು ಎತ್ತಲು ಡೀಸೆಲ್/ ಸೋಲಾರ್ ಪಂಪ್ ಸೆಟ್(ಅಪ್ ಟು 10 ಹೆಚ್‍ಪಿ) ಮತ್ತು ಬೆಳೆಗೆ ನೀರು ಹಾಯಿಸಲು ಸೂಕ್ಷ್ಮ ನೀರಾವರಿ ಘಟಕಗಳ ಸೌಲಭ್ಯಗಳನ್ನು ಸಾಮಾನ್ಯ ರೈತರಿಗೆ ಶೇ.80ರ ಸಹಾಯಧನದಲ್ಲಿ /ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90ರ ಸಹಾಯಧನದಲ್ಲಿ ನೀಡಲಾಗುತ್ತದೆ.

Latest Videos

undefined

ಇ-ಕೆವೈಸಿ ಇಲ್ಲದ APL ರೇಷನ್‌ ಕಾರ್ಡ್‌ ರದ್ದು ಮಾಡಿದ ಆಹಾರ ಇಲಾಖೆ!

ಕೃಷಿ ಭಾಗ್ಯ ಯೋಜನೆಗೆ ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೇ ನಂಬರ್‌ನಲ್ಲಿ ಕನಿಷ್ಠ 1 ಎಕರೆ ಭೂಮಿ ಹೊಂದಿರಬೇಕು. ಕಳೆದ ವರ್ಷಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿದ್ದ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ.

ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ, ಯುವಕರು 70 ಗಂಟೆ ಕೆಲಸ ಮಾಡಲಿ: ಇನ್ಫಿ ನಾರಾಯಣ ಮೂರ್ತಿ

click me!