
ಬೆಂಗಳೂರು (ಫೆ.20): ರಾಜ್ಯದಲ್ಲಿ ಸುಮಾರು 45 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಗಾಣಿಗ ಸಮುದಾಯಕ್ಕೆ ಅನುಕೂಲ ಆಗುವಂತೆ ರಾಜ್ಯ ಸರ್ಕಾರದಿಂದ ಇಂದು 'ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ'ವನ್ನು ಸ್ಥಾಪಿಸಿ ಜಾರಿಗೆ ತರಲಾಗಿದೆ.
ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮಸಂಖ್ಯೆ 78(ಎ)ಯಿಂದ (ಇ)ವರೆಗೆ ಬರುವ ಗಾಣಿಗ, ತೇಲಿ, ಗಾಂಡ್ಲ, ವನಿಯನ್ ಹಾಗೂ ಜ್ಯೋತಿನಗರ, ಜ್ಯೋತಿನಗರ ವೈಶ್ಯ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆದೇಶಿಸಲಾಗಿದೆ.
ಈಡಿಗ- ಬಿಲ್ಲವರಿಗೆ ಗುಡ್ ನ್ಯೂಸ್: ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿದ ಸರ್ಕಾರ
ಮತಗಳನ್ನು ಸೆಳೆಯಲು ಬಿಜೆಪಿ ತಂತ್ರ: ಇನ್ನು ರಾಜ್ಯದಲ್ಲಿ ಸುಮಾರು 45 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಗಾಣಿಗ ಸಮುದಾಯದ ಅಭಿವೃದ್ಧಿಗೆ ಹಲವು ವರ್ಷಗಳಿಂದ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿತ್ತು. ಆದರೆ, ಹಲವು ವರ್ಷಗಳಿಂದ ಬೇಡಿಕೆ ಈಡೇರಿರಲಿಲ್ಲ. ಆದರೆ, ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲ ವರ್ಗದ ಮತಗಳನ್ನು ಪಡೆಯಬೇಕು ಎಂಬ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿದೆ.
ಈಡಿಗರಿಗೂ ಗುಡ್ ನ್ಯೂಸ್ ನೀಡಿದ್ದ ಸರ್ಕಾರ: ಈಗಾಗಲೇ ಬಿಲ್ಲವ - ಈಡಿಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮವನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ 15/4ರ ಅನ್ವಯ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು ಅನುಚ್ಚೇದ 16/4ರ ಅನ್ವಯ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹಿರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪ್ರವರ್ಗ 2ಎ ಕ್ರಮಸಂಖ್ಯೆ 4a ಯಿಂದ zವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿದೆ.
ಗಾಣಿಗ ಸಮುದಾಯ ಭವನಕ್ಕೆ 25 ಲಕ್ಷ ದೇಣಿಗೆ: ಸಚಿವ ಎಂಟಿಬಿ ನಾಗರಾಜ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ