ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌: ಮನೆ ಬಾಗಿಲಿಗೆ ಪಡಿತರ ವಿತರಣೆಗೆ ಪಟ್ಟಿ ಸಿದ್ಧಪಡಿಸಿದ ಸರ್ಕಾರ

Published : Oct 13, 2023, 01:48 PM IST
ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌: ಮನೆ ಬಾಗಿಲಿಗೆ ಪಡಿತರ ವಿತರಣೆಗೆ ಪಟ್ಟಿ ಸಿದ್ಧಪಡಿಸಿದ ಸರ್ಕಾರ

ಸಾರಾಂಶ

ಆಂಧ್ರಪ್ರದೇಶ ರಾಜ್ಯದಲ್ಲಿ ಮನೆ ಬಾಗಿಲಿಗೆ ಪಡಿತರ ನೀಡುವಂತೆ, ಕರ್ನಾಟಕದಲ್ಲಿ  ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ ಮನೆ ಬಾಗಲಿಗೆ ಪಡಿತರ ವಿತರಿಸಲು ಸರ್ಕಾರ ಮುಂದಾಗಿದೆ.

ಬೆಂಗಳೂರು (ಅ.13): ಆಂಧ್ರ ಪ್ರದೇಶ ರಾಜ್ಯದಲ್ಲಿ ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಈ ಯೋಜನೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸುವ ಬಗ್ಗೆ ಚಿಂತನೆ ಮಾಡಿದ್ದ ಆಹಾಯ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ಈಗ ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ (75 ವರ್ಷ ಮೇಲ್ಪಟ್ಟ) ಮನೆ ಬಾಗಲಿಗೆ ಆಹಾರ ಧಾನ್ಯಗಳನ್ನು ವಿತರಣೆ ಸಿದ್ಧತೆ ಮಾಡಿದ್ದಾರೆ.

ಇನ್ನು ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರವನ್ನು 75 ವರ್ಷ ದಾಟಿದವರ ಮನೆ ಬಾಗಿಲಿಗೇ ತಲುಪಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ. ರಾಜ್ಯಕ್ಕೆ ಅಗತ್ಯವಿರುವ ಅಕ್ಕಿಯನ್ನು ಎಫ್‌ಸಿಐ ನಿಗದಿಪಡಿಸಿದ ದರದಲ್ಲಿ (ಪ್ರತಿ ಕೆ.ಜಿಗೆ 34) ಪೂರೈಸಲು ಛತ್ತೀಸಗಢ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಒಪ್ಪಿಗೆ ಸೂಚಿಸಿವೆ. ಈ ತಿಂಗಳಿಂದ ಅನ್ನ ಭಾಗ್ಯ ಯೋಜನೆಯಡಿ ಪೂರ್ಣ ಪ್ರಮಾಣದಲ್ಲಿ 10 ಅಕ್ಕಿ ಪೂರೈಸಲು ನಿರ್ಧರಿಸಿರುವ ಇಲಾಖೆ, ಪಡಿತರ ವಿತರಣೆಯಲ್ಲಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಮತ್ತೊಂದು ನಿರ್ಧಾರ ತೆಗೆದುಕೊಂಡಿದೆ.

ಕರ್ನಾಟಕ ಲೋಡ್‌ಶೆಡ್ಡಿಂಗ್‌ಗೆ ಬಿಜೆಪಿ ಆಡಳಿತವೇ ಕಾರಣ: ಇಂಧನ ಸಚಿವ ಜಾರ್ಜ್‌ ಆರೋಪ

ರಾಜ್ಯದಲ್ಲಿ ಈವರೆಗೆ ಪಡಿತರ ಕಾರ್ಡ್‌ (ಬಿಪಿಎಲ್‌ ಮತ್ತು ಎಪಿಎಲ್) ಹೊಂದಿರುವ ಕುಟುಂಬದ ಒಬ್ಬ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ತೆರಳಿ ಬಯೊಮೆಟ್ರಿಕ್‌ ನೀಡಿದ ನಂತರ ತಮ್ಮ ಕುಟುಂಬಕ್ಕೆ ನಿಗದಿಪಡಿಸಿದ ಅಕ್ಕಿ ಹಾಗೂ ಇತರೆ ಪಡಿತರ ಪಡೆಯುತ್ತಿದ್ದರು. ಆದರೆ, ವಯಸ್ಸಾದವರು ಪಡಿತರ ಕೇಂದ್ರಗಳಿಗೆ ಹೋಗಲು ಸಮಸ್ಯೆ ಅನುಭವಿಸುತ್ತಿದ್ದರು. ಹೀಗಾಗಿ, ಮನೆಯಲ್ಲಿ ಒಬ್ಬಂಟಿ ವೃದ್ಧರಿದ್ದರೆ ಅವರ ಮನೆ ಬಾಗಿಲಿಗೆ ಪಡಿತರ ವಿತರಣೆ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸುತ್ತಿರುವ ಮನೆ ಬಾಗಿಲಿಗೆ ಪಡಿತರ ಪಡೆಯಲು ಸಂಬಂಧಪಟ್ಟಂತಹ ಕುಟುಂಬದಲ್ಲಿ 75 ವರ್ಷದೊಳಗಿನ ಸದಸ್ಯರು ಇರಬಾರದು. ಒಂದು ವೇಳೆ 75 ವರ್ಷದೊಳಗಿನ ಸದಸ್ಯರಿದ್ದಲ್ಲಿ ಅವರೇ ವಿತರಣಾ ಕೇಂದ್ರಗಳಿಗೆ ಬಂದು ಪಡಿತರ ಪಡೆಯಬೇಕು. ಹೀಗಾಗಿ, ಸರ್ಕಾರದಿಂದ ಪಡಿತರ ಚೀಟಿ ಹೊಂದಿದ ಒಂಟಿ ವೃದ್ಧರು, 75 ದಾಟಿದ ದಂಪತಿಗಳ ಪ್ರತ್ಯೇಕ ಪಟ್ಟಿಯನ್ನು ಸಿದ್ಧಪಡಿಸಿದೆ. ಜೊತೆಗೆ, 75 ವರ್ಷದೊಳಗಿನ ಇತರೆ ಸದಸ್ಯರಿದ್ದರೂ ಅವರು ಕೆಲಸದ ನಿಮಿತ್ಯ ಬೇರೆ ಪ್ರದೇಶಗಳಿಗೆ ತೆರಳಿದ್ದರೆ, ಅಂತಹ ಸಮಯದಲ್ಲಿ ಊರಲ್ಲಿರುವ ವೃದ್ಧರ ಮನೆ ಬಾಗಿಲಿಗೇ ಪಡಿತರ ನೀಡಲು ಮುಂದಾಗಿದೆ.

ಚಿತ್ರದುರ್ಗ ಮುರುಘಾ ಶ್ರೀಗಳ ಪೋಕ್ಸೋ ಕೇಸ್‌ ಆರೋಪಿ ಪರಮಶಿವಯ್ಯಗೆ ಜಾಮೀನು ಮಂಜೂರು

ಆಂಧ್ರಪ್ರದೇಶಕ್ಕೆ ಭೇಟಿ ಮಾಡಿದಾಗಲೇ ಮನೆ ಬಾಗಿಲಿಗೆ ಪಡಿತರ ಚಿಂತನೆ: ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ಪಡಿತರ ಚೀಟಿದಾರರ ಮನೆ ಬಾಗಿಲಿಗೆ ಮೊಬೈಲ್ ವಿತರಣಾ ಘಟಕಗಳ ಮೂಲಕ (Door delivery vehicles) ಪಡಿತರವನ್ನು ತಲುಪಿಸುವ ಆಂಧ್ರಪ್ರದೇಶ ಸರ್ಕಾರದ ವ್ಯವಸ್ಥೆ ಉತ್ತಮವಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದರು. ಇತ್ತೀಚೆಗೆ ತಮ್ಮ ವೈಯಕ್ತಿಕ ಕೆಲಸದ ನಿಮಿತ್ತ ವಿಜಯವಾಡಕ್ಕೆ ಬಂದಿದ್ದ ಮುನಿಯಪ್ಪ ಅವರು ಆಂಧ್ರ ಪ್ರದೇಶ ರಾಜ್ಯ ನಾಗರಿಕ ಸರಬರಾಜು ಇಲಾಖೆ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದರು. ಅವರನ್ನು ಸ್ವಾಗತಿಸಿದ ಆಂಧ್ರ ಪ್ರದೇಶ ನಾಗರಿಕ ಸರಬರಾಜು ಸಚಿವ ಕರುಮುರಿ ವೆಂಕಟ ನಾಗೇಶ್ವರ ರಾವ್ ಅವರು ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆಯನ್ನು ಮಾಡುವ ವ್ಯವಸ್ಥೆಯನ್ನು ವಿವರಿಸಿದರು. ಮೊಬೈಲ್ ವಿತರಣಾ ಘಟಕಗಳನ್ನು ಪರಿಶೀಲಿಸಿದ ನಂತರ, ಮುನಿಯಪ್ಪ ಅವರು ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ನಂತರ ಕರ್ನಾಟಕದಲ್ಲಿ ಇದೇ ರೀತಿಯ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನಿಸುವುದಾಗಿ ತಿಳಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್
ಮಹಿಳಾ ನೌಕರರಿಗೆ ಬ್ಯಾಡ್ ನ್ಯೂಸ್: ಮುಟ್ಟಿನ ರಜೆಗೆ ಹೈಕೋರ್ಟ್ ತಡೆ: ಸರ್ಕಾರದ ಆದೇಶಕ್ಕೆ ಹಿನ್ನಡೆ?