ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಯೋಗ, ಉನ್ನತ ವಿದ್ಯಾಭ್ಯಾಸಕ್ಕೆ ಇಲ್ಲಿದೆ ಅವಕಾಶ!

By Ravi Janekal  |  First Published Nov 28, 2024, 4:33 PM IST

ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ನಿಟ್ಟಿನಲ್ಲಿ 2023-2024 ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇಕಡ 70ಕ್ಕಿಂತ ಹೆಚ್ಚು ಅಂಕ ಪಡೆದು ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.


ಬೆಂಗಳೂರು(ನ.28): ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ನಿಟ್ಟಿನಲ್ಲಿ 2023-2024 ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇಕಡ 70ಕ್ಕಿಂತ ಹೆಚ್ಚು ಅಂಕ ಪಡೆದು ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.

ದೇಶದ ಅತಿ ದೊಡ್ಡ ಸಾಫ್ಟ್‌ವೇರ್‌ ಸಂಸ್ಥೆಗಳಲ್ಲಿ ಒಂದಾಗಿರುವ ಎಚ್‌.ಸಿ.ಎಲ್‌-ಟೆಕ್ ಬೀ ಸಂಸ್ಥೆಯು ವಿದ್ಯಾರ್ಥಿಗಳಿಗೆ ತರಬೇತಿ, ಉದ್ಯೋಗಾವಕಾಶ ಮತ್ತು ಹಣಕಾಸಿನ ನೆರವಿನೊಂದಿಗೆ ಉನ್ನತ ಪದವಿ ಶಿಕ್ಷಣ ಪಡೆಯಲು ಅವಕಾಶವನ್ನು ಕಲ್ಪಿಸಿದೆ.

Latest Videos

undefined

ಕಾರ್ಪೋರೇಟ್‌ ಯಶಸ್ಸಿಗೆ ಚಾಣಕ್ಯ ನೀಡಿರುವ 10 ಸಲಹೆಗಳು!

ಈ ಕುರಿತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದೊಂದಿಗೆ (KSDC) ಎಚ್‌ಸಿಎಲ್‌-ಟೆಕ್ ಬೀ ಸಂಸ್ಥೆಯು ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದೆ. ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಕನಗವಲ್ಲಿ  ಮತ್ತು ಎಚ್‌ಸಿಎಲ್‌-ಟೆಕ್ ಬೀ ರಾಜ್ಯ ಮುಖ್ಯಸ್ಥರಾದ ಆರ್. ಪಾಪಿರೆಡ್ಡಿ ಅವರು ಇತ್ತೀಚಿಗೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. ಈ ಮೂಲಕ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ  ತರಬೇತಿ ನೀಡಲಿದೆ.

ಎಚ್‌ಸಿಎಲ್‌-ಟೆಕ್ ಬೀನಲ್ಲಿ ಇಂಟರ್ನ್‌ಶಿಪ್‌ಗಾಗಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಹತ್ತು ಸಾವಿರ ರೂಪಾಯಿ ನೀಡಲಾಗುತ್ತಿದೆ. ನಂತರ ಅದೇ ಸಂಸ್ಥೆಯಲ್ಲಿ ಉದ್ಯೋಗಿಗಳಾದರೆ ವಾರ್ಷಿಕ ₹1.7 ಲಕ್ಷದಿಂದ ₹ 2.2 ಲಕ್ಷ ರೂಪಾಯಿ ವೇತನ ನೀಡಲಾಗುತ್ತದೆ. ಇದರ ಜೊತೆಗೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಪದವಿ ಶಿಕ್ಷಣ ಪಡೆಯುವ ಅವಕಾಶವನ್ನೂ ಒದಗಿಸಲಾಗುತ್ತದೆ. ತರಬೇತಿ ಪಡೆಯಲು ಶುಲ್ಕ ನಿಗದಿಪಡಿಸಲಾಗಿದೆ.

ಭವಿಷ್ಯದಲ್ಲಿ ಉದ್ಯೋಗ ನೀಡಲಿರುವ ಏಕೈಕ ನಗರ ಬೆಂಗಳೂರು, ಕೆಲಸ ಕೊಡಲು ಕಾಯ್ತಿವೆ 62,000 ಕಂಪನಿಗಳು!

2017ರಲ್ಲಿ ಎಚ್‌.ಸಿ.ಎಲ್‌-ಟೆಕ್‌ ಬೀ ಸಂಸ್ಥೆಯು ಈ ಯೋಜನೆ ಆರಂಭಿಸಿದೆ. 2023-2024 ಶೈಕ್ಷಣಿಕ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ  2025ರಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಕೂಡಲೇ https://bit.ly/TechBeeKSDC ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದಾದ ಮೊಬೈಲ್‌ ಸಂಖ್ಯೆಗಳು: 9845454471/ 8722790340

click me!