
ಬೆಂಗಳೂರು : ಅನಿಲ ಸಿಲಿಂಡರ್ ಕೊರತೆಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸೋಮವಾರ ಅನಿಲ ಕಂಪನಿಗಳ ಜೊತೆ ಸಭೆ ನಡೆಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಂಜೆ 4 ಗಂಟೆಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಗ್ಯಾಸ್ ಕಂಪನಿಗಳ ಜೊತೆ ಸಭೆ ನಡೆಯಲಿದೆ. ಹೋಟೆಲ್‌ಗಳಿಗೆ ಸ್ವಲ್ಪ ಸಿಲಿಂಡರ್ ನೀಡುವ ಬಗ್ಗೆ ಮಾತನಾಡಲಾಗುವುದು.
ಅನಿಲ ತುಂಬಿದ ಎರಡು ಹಡಗುಗಳು ದೇಶಕ್ಕೆ ಆಗಮಿಸಿರುವುದರಿಂದ ಅನುಕೂಲ ಆಗುತ್ತದೆ ಎಂದು ಭಾವಿಸಿದ್ದೇವೆ. ಇನ್ನೂ ಯುದ್ಧ ನಿಂತಿಲ್ಲ. ಮಿತವ್ಯಯವಾಗಿ ಗ್ಯಾಸ್ ಬಳಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ