ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರಲಿದೆ ಆತಂಕಪಡುವ ಅಗತ್ಯವಿಲ್ಲ, ಕಾರ್ತಿಕ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯದಲ್ಲಿ ಕೆಲ ಅವಘಢಗಳು ನಡೆಯುವ ಸಂಭವಗಳಿವೆ ಎಂದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಪ್ರಸಿದ್ಧ ಸುಕ್ಷೇತ್ರ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.
ಹೊನ್ನಾಳಿ )ಸೆ.14) : ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರಲಿದೆ ಆತಂಕಪಡುವ ಅಗತ್ಯವಿಲ್ಲ, ಕಾರ್ತಿಕ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯದಲ್ಲಿ ಕೆಲ ಅವಘಢಗಳು ನಡೆಯುವ ಸಂಭವಗಳಿವೆ ಎಂದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಪ್ರಸಿದ್ಧ ಸುಕ್ಷೇತ್ರ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.
ಹೊನ್ನಾಳಿ ನಿವಾಸಿ ನಾಗವೇಣಿ ಮಂಜುನಾಥ ನಿವಾಸಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮನುಷ್ಯ ಮಾಡಿದ ತಪ್ಪುಗಳ ಭಗವಂತ ಕ್ಷಮಿಸುತ್ತಾನೆ ಆದರೆ ತಿಳಿದೂ ತಪ್ಪುಗಳನ್ನು ಮಾಡಿದಾಗ ಕ್ಷಮಿಸಲಾರ ಇತ್ತೀಚಿನ ದಿನಗಳಲ್ಲಿ ಗೊತ್ತಿದ್ದೂ ಮನುಷ್ಯ ಪ್ರಕೃತಿ,ನೆಲ, ಜಲ ಇವುಗಳ ನಿರಂತರ ದುರುಪಯೋಗ ಪಡಿಸುತ್ತಿರುವ ಕಾರಣ ನಾವು ಅನೇಕ ರೀತಿಯ ಪ್ರಕೃತಿ ವಿಕೋಪಗಳನ್ನು ನೋಡುತ್ತಿದ್ದೇವೆ ಎಂದರು.
undefined
ಲೋಕಸಭೆ ಚುನಾವಣೆ ಹಾದಿಯಲ್ಲಿ ರಾಜ್ಯ, ರಾಷ್ಟ್ರ ರಾಜಕಾರಣದ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಪೋಟಕ ಭವಿಷ್ಯ!
ಯಾವುದು ಮನುಷ್ಯನಿಗೆ, ಸಮಾಜಕ್ಕೆ ಶಾಂತಿ,ನೆಮ್ಮದಿ ನೀಡುತ್ತದೆಯೋ ಅದುವೆ ಧರ್ಮ. ಇನ್ನು ಸಮಾತನ ಧರ್ಮದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಈ ಬಗ್ಗೆ ಈಗಾಗಲೇ ಹುಬ್ಬಳಿಯಲ್ಲಿ ಮಾತನಾಡಿದ್ದೇನೆ ಪದೇ ಪದೇ ಹೇಳುವ ಅಗತ್ಯವಿಲ್ಲ ಎಂದು ಹೇಳಿದರು.
ಧರ್ಮ ಮತ್ತು ರಾಜಕಾರಣದ ಕುರಿತು ಮಾತನಾಡಿ ನೀರಿನ ಮೇಲೆ ದೊಣಿ ಇರಬೇಕೇ ಹೊರತು ದೋಣಿಯೊಳಗೆ ನೀರು ಬಂದರೆ ಆಪಾಯ ತಪ್ಪದು ಎಂದು ಸೂಚ್ಯವಾಗಿ ಹೇಳಿದರು. ರಾಜಕಾರಣಿಗಳಾಗಲಿ, ಗುರುಗಳಾಗಲಿ ಸಮಾಜದಲ್ಲಿ ಶಾಂತಿ ನಿರ್ಮಿಸುವ ಹೇಳಿಕೆಗಳ ನೀಡಬೇಕು ಅಶಾಂತಿ ನಿರ್ಮಿಸುವಂತಹ ಹೇಳಿಕೆ ನೀಡದಿರಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಕಣುಮಪ್ಪ, ಮಲ್ಲೇಶ ಮಾಳಕ್ಕಿ, ಯುವ ಕಾಂಗ್ರೇಸ್ ಎಚ್.ಎಸ್. ರಂಜಿತಾ.ಯುವ ಮುಖಂಡ ಅನಂದ ಸೇರಿ ಹಲವರಿದ್ದರು.
ನೂರಾರು ವರ್ಷಗಳಲ್ಲಿ ಹೇಳಿದ್ದು ಸತ್ಯ
ಕಾಲಜ್ಞಾನವೇ ಗುರುಗಳ ಸಂಪತ್ತಾಗಿದ್ದು ಕಾಲಜ್ಞಾನದಲ್ಲಿ ಕಟ್ಟಿಗೆ ಹಾಡುತ್ತದೆ ಕಬ್ಬಿಣವು ಓಡುತ್ತದೆ, ಗಾಳಿ ಮಾತನಾಡುತ್ತದೆ ಎಂದು ನೂರಾರು ವರ್ಷಗಳಲ್ಲಿ ಹೇಳಲಾಗಿದ್ದು ಇದು ಸತ್ಯವಾಗಿದೆ. ಕಟ್ಟಿಗೆ ಮತ್ತು ಕಬ್ಬಿಣ ಅಂದರೆ ಇಂದು ರೈಲುಗಳು ಬಂದಿರುವ ಬಗ್ಗೆಯಾದರೆ ಗಾಳಿ ಮಾತನಾಡುತ್ತದೆ ಎಂದರೆ ಮೊಬೈಲ್ ಬಂದಿರುವುದಕ್ಕೆ ಸಾಕ್ಷಿ. ಇದೆ ರೀತಿ ಕಲ್ಲಿನ ಕೋಳಿ ಕೂಗುತ್ತದೆ ಎಂದರೆ ಮೊಬೈಲ್ ನಲ್ಲಿರುವ ಸಿಮ್ ಗಳಾಗಿವೆ ಎಂದು ಕೋಡಿ ಶ್ರೀಗಳು ವಿವರಿಸಿದರು.
ಕರ್ನಾಟಕದಲ್ಲಿ ಮಹಿಳೆಗೆ ಮುಖ್ಯಮಂತ್ರಿಯಾಗುವ ಯೋಗವಿದೆ: ಕೋಡಿಶ್ರೀಗಳ ಭವಿಷ್ಯ
ಆಳುವ ಸರ್ಕಾರಗಳು ಏನೇ ಯೋಜನೆಗಳನ್ನು ಜಾರಿಗೆ ತಂದರೂ ತೊಂದರೆ ಇಲ್ಲ ಕಾರಣ ನಮ್ಮ ಕರ್ನಾಟಕ ಪ್ರಾಕೃತಿಕವಾಗಿ ಎಲ್ಲಾ ರೀತಿಯಲ್ಲಿ ಸಮೃದ್ದವಾಗಿದ್ದು ಇದನ್ನು ಸಮರ್ಪಕವಾಗಿ ಬಳಿಸಿಕೊಂಡಾಗ ಯಾವುದೇ ತೊಂದರೆ ಆಗದು.
ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಕೋಡಿ ಮಠ