ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರಿ ಸೌಕರಿ

By Kannadaprabha NewsFirst Published Aug 26, 2022, 12:30 AM IST
Highlights

ಸೈನಿಕರ ಅವಲಂಬಿತರಿಗೆ ಅನುಕಂಪದ ಕೆಲಸ ನೀಡಲು ಸಂಪುಟ ನಿರ್ಧಾರ, 25 ಲಕ್ಷ ರು. ಪರಿಹಾರ, ನಿವೇಶನ ಸ್ಥಗಿತ: ಸಚಿವ ಮಾಧುಸ್ವಾಮಿ

ಬೆಂಗಳೂರು(ಆ.26):   ಕರ್ತವ್ಯನಿರತ ಸಮಯದಲ್ಲಿ ಹುತಾತ್ಮರಾದ ಯೋಧರ ಕುಟುಂಬದ ಅವಲಂಬಿತ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಕಲ್ಪಿಸುವ ಕುರಿತು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದೇ ತಿಂಗಳ 15ರಂದು ನಡೆದ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿನ 75ನೇ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು.

ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು, 8 ನೂತನ ವಿವಿಗಳ ಸ್ಥಾಪನೆ ಇನ್ನು ಸುಲಭ

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಕರ್ತವ್ಯದ ಸಮಯದಲ್ಲಿ ಯೋಧರು ಹುತಾತ್ಮರಾದರೆ ಅವರ ಕುಟುಂಬದ ಸದಸ್ಯರಿಗೆ ಜೀವನ ಭದ್ರತೆ ಕಲ್ಪಿಸುವ ಉದ್ದೇಶದಿಂದ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಕಲ್ಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಒಟ್ಟು 400 ಯೋಧರು ಕರ್ತವ್ಯದ ವೇಳೆ ಹುತಾತ್ಮರಾಗಿದ್ದು, ಈ ಪೈಕಿ 200 ಹುತಾತ್ಮ ಯೋಧರ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಗೆ ಅರ್ಹ ಇದ್ದಾರೆ. ಅವರಿಗೆ ಸರ್ಕಾರಿ ಉದ್ಯೋಗ ನೀಡಲು ಕ್ರಮ ವಹಿಸಲಾಗುವುದು. ಇದೇ ವೇಳೆ ಮೃತ ಯೋಧರ ಕುಟುಂಬದವರಿಗೆ 25 ಲಕ್ಷ ರು. ಪರಿಹಾರ ಮತ್ತು ನಿವೇಶನ ನೀಡಲಾಗುತ್ತಿದ್ದು, ಇದೀಗ ಪರಿಹಾರದ ಬದಲಿಗೆ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ತಿಳಿಸಿದರು.
 

click me!