ಮೈಸೂರು ರಾಜಮನೆತನದ ವಿರುದ್ಧ ರಾಜ್ಯ ಸರ್ಕಾರ ಸಮರ!

Published : Jan 17, 2025, 07:35 AM IST
ಮೈಸೂರು ರಾಜಮನೆತನದ ವಿರುದ್ಧ ರಾಜ್ಯ ಸರ್ಕಾರ ಸಮರ!

ಸಾರಾಂಶ

ಬೆಂಗಳೂರು ಅರಮನೆ ವಶಪಡಿಸಿಕೊಂಡಿರುವ 1997ರ ಬೆಂಗಳೂರು ಅರಮನೆ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿಯಲು ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.   

ಬೆಂಗಳೂರು(ಜ.17):  ಮೈಸೂರು ರಾಜಮನೆತನ, ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಟಿಡಿಆರ್ ಪರಿಹಾರ ನೀಡಲು ವಿಳಂಬ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಮೈಸೂರು ರಾಜಮನೆತನದ ಮೇಲೆ ರಾಜ್ಯ ಸರ್ಕಾರದಿಂದ ಸಾಲು ಸಾಲು ಕಠಿಣ ಕ್ರಮ ಕೈಗೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. 

ಬೆಂಗಳೂರು ಅರಮನೆ ವಶಪಡಿಸಿಕೊಂಡಿರುವ 1997ರ ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ ಯ ಸಿಂಧುತ್ವ ಎತ್ತಿ ಹಿಡಿಯಲು ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 

ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಹೆಚ್‌ಡಿಕೆ ಗಂಭೀರ ಆರೋಪ

ಅರಮನೆ ಮೈದಾನದ ಮಾಲೀಕತ್ವ ಕುರಿತ ಮೂಲ ದಾವೆ ಇತ್ಯರ್ಥವಾದ ಬಳಿಕ ಟಿಡಿಆರ್ ಪರಿಹಾರ ನೀಡುವ ಬಗ್ಗೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಈ ಕುರಿತು ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅರ್ಜಿ ಪರಿಗಣಿಸಿ ತುರ್ತು ವಿಚಾರಣೆಗೆ ಕೈಗೆತ್ತಿಕೊಂಡು ಪ್ರಕರಣ ಇತ್ಯರ್ಥಪಡಿಸಬೇಕು ಎಂದು ಕೋರಲು ತೀರ್ಮಾನಿಸಲಾಗಿದೆ. ಅಲ್ಲದೆ ಇದೇ ಪ್ರಕರಣದಲ್ಲಿ 2001ರಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು.

3 ದಶಕಗಳ ವಿವಾದ 

* 1996-9700 ರಾಮಯ್ಯ ಡಿಸಿಎಂ ಆಗಿದ್ದಾಗ ಬೆಂಗಳೂರು ಅರಮನೆ, ಮೈಸೂರು ಅರಮನೆ ಸ್ವಾಧೀನಕ್ಕೆ ಕಾಯ್ದೆ ಅಂಗೀಕಾರ 
* ಹೈಕೋರ್ಟ್‌ಲ್ಲಿ ಸರ್ಕಾ ರಕ್ಕೆ ಜಯ. ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ರಾಜಮನೆತನ. 2001 ರಲ್ಲಿ ಯಥಾಸ್ಥಿತಿಗೆ ಸುಪ್ರೀಂ ಆದೇಶ 
* ಬೆಂಗಳೂರಿನ ಬಳ್ಳಾರಿ, ಜಯಮಹಲ್ ರಸ್ತೆಗಳ ಅಗಲೀಕರಣಕ್ಕೆ ರಾಜ ಮನೆತನಕ್ಕೆ ಸೇರಿದ 15.7 ಎಕರೆ ಜಾಗವನ್ನು ಬಳಸಿದ್ದ ರಾಜ್ಯ ಸರ್ಕಾರ
* ಟಿಡಿಆರ್ ಪರಿಹಾರ ರೂಪ ದಲಿ 3011 ಕೋಟಿ ರುಪಾಯಿ ನೀಡಲು 2014ರಲ್ಲಿ ಹೈಕೋರ್ಟ್ ತೀರ್ಪು. 
* ಸರ್ಕಾರದ ಮೇಲ್ಮನವಿ ವಜಾ ಪರಿಹಾರಕ್ಕಾಗಿ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ರಾಜಮನೆತನ. ಸರ್ಕಾರಿ ಅಧಿಕಾರಿಗಳಿಗೆ ನೋಟಿಸ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ನಮ್ಮನ್ನೇಕೆ ವೈರಿಗಳಂತೆ ನೋಡುತ್ತೀರಿ? ನಾವು ಸಹೋದ್ಯೋಗಿಗಳು: ಡಿಸಿಎಂ ಡಿಕೆ ಶಿವಕುಮಾರ್
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ