ತಾಕತ್ತಿದ್ದರೆ ಎಫ್‌ಎಸ್‌ಎಲ್ ವರದಿ ಬಹಿರಂಗಪಡಿಸಿ: ಆ‌ರ್.ಅಶೋಕ್‌

By Kannadaprabha News  |  First Published Mar 1, 2024, 12:15 PM IST

ಪಾಕಿಸ್ತಾನದ ಪರ ಜೈಕಾರದ ಸುದ್ದಿ ಮಾಧ್ಯಮಗಳಲ್ಲಿ ಬಂದು ಜನರಿಗೆ ಗೊತ್ತಾದರೂ ಜನರ ಕಣ್ಣಿಗೆ ಮಣ್ಣೆರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಎಫ್‌ಎಸ್ಎಲ್ ವರದಿ ಪರಿಶೀಲನೆ ಎಂದು ಹೇಳಿ ಯಾವುದೋ ವಾಹಿನಿಯ ವೀಡಿಯೋ ಪಡೆದು ಪರೀಕ್ಷೆ ನಡೆಸಿ ಸುಳ್ಳು ವರದಿ ರೂಪಿಸಲಾಗುತ್ತಿದೆ. ಇದನ್ನು ಮುಚ್ಚಿ ಹಾಕಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವರದಿಯನ್ನು ತಿರುಚುವುದು ಖಂಡಿತ ಎಂದು ಆಪಾದಿಸಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್ 


ಬೆಂಗಳೂರು(ಮಾ.01):  ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ ಎಫ್‌ಎಸ್‌ಎಲ್ ವರದಿ ಬಹಿರಂಗಪಡಿ ಸಲಿ. ಯಾರನ್ನೋ ರಕ್ಷಣೆ ಮಾಡಲು ಸರ್ಕಾರ ವರದಿಯನ್ನು ಮುಚ್ಚಿಡುವುದು ಬೇಡ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. 

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಪರ ಜೈಕಾರದ ಸುದ್ದಿ ಮಾಧ್ಯಮಗಳಲ್ಲಿ ಬಂದು ಜನರಿಗೆ ಗೊತ್ತಾದರೂ ಜನರ ಕಣ್ಣಿಗೆ ಮಣ್ಣೆರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಎಫ್‌ಎಸ್ಎಲ್ ವರದಿ ಪರಿಶೀಲನೆ ಎಂದು ಹೇಳಿ ಯಾವುದೋ ವಾಹಿನಿಯ ವೀಡಿಯೋ ಪಡೆದು ಪರೀಕ್ಷೆ ನಡೆಸಿ ಸುಳ್ಳು ವರದಿ ರೂಪಿಸಲಾಗುತ್ತಿದೆ. ಇದನ್ನು ಮುಚ್ಚಿ ಹಾಕಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವರದಿಯನ್ನು ತಿರುಚುವುದು ಖಂಡಿತ ಎಂದು ಆಪಾದಿಸಿದರು. 

Tap to resize

Latest Videos

Siddaramaiah: ಪಾಕಿಸ್ತಾನ್‌ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಕಾರ ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ಬಂಧಿಸಿ ಎಂದು ಆಗ್ರಹಿಸಿದರೆ ಸರ್ಕಾರ ಅವರನ್ನು ಬಿಟ್ಟುಬಿಡಿ ಎಂದು ಪೊಲೀಸರಿಗೆ ಸೂಚಿಸಿದೆ ಎಂದು ಹೇಳಿದರು.

click me!