ಬರ ಪರಿಹಾರ ಕೋರಿ ಕರ್ನಾಟಕ ಸುಪ್ರೀಂಕೋರ್ಟ್‌ಗೆ

By Kannadaprabha NewsFirst Published Mar 24, 2024, 4:21 AM IST
Highlights

ರಾಜ್ಯದ 223 ತಾಲೂಕುಗಳಲ್ಲಿ ಎದುರಾಗಿರುವ ಬರಕ್ಕೆ ಸಂಬಂಧಿ ಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯಂತೆ 18,171 ಕೋಟಿ ರು. ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ಸುಪ್ರೀಂಕೋರ್ಟ್‌ಗೆ ಶನಿವಾರ ರಿಟ್ ಅರ್ಜಿ ಸಲ್ಲಿಸಲಾಗಿದೆ. ಕೇಂದ್ರದಿಂದ ಪರಿಹಾರ ಮತ್ತು ಅನುದಾನಕ್ಕಾಗಿ ಈಗಾಗಲೇ ಹಲವು ಸಂದರ್ಭದಲ್ಲಿ ಹಲವು ರಾಜ್ಯಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿವೆ.

ಬೆಂಗಳೂರು(ಮಾ.24): ಬರ ಪರಿಹಾರ ಪಡೆಯುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ.
ರಾಜ್ಯದ 223 ತಾಲೂಕುಗಳಲ್ಲಿ ಎದುರಾಗಿರುವ ಬರಕ್ಕೆ ಸಂಬಂಧಿ ಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯಂತೆ 18,171 ಕೋಟಿ ರು. ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ಸುಪ್ರೀಂಕೋರ್ಟ್‌ಗೆ ಶನಿವಾರ ರಿಟ್ ಅರ್ಜಿ ಸಲ್ಲಿಸಲಾಗಿದೆ. ಕೇಂದ್ರದಿಂದ ಪರಿಹಾರ ಮತ್ತು ಅನುದಾನಕ್ಕಾಗಿ ಈಗಾಗಲೇ ಹಲವು ಸಂದರ್ಭದಲ್ಲಿ ಹಲವು ರಾಜ್ಯಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿವೆ. ಆದರೆ, ಬರ ಪರಿಹಾರ ನೀಡಲು ನಿರ್ದೇಶಿಸುವಂತೆ ರಾಜ್ಯ ಸರ್ಕಾರವೊಂದು ಸುಪ್ರೀಂಕೋರ್ಟ್‌ಗೆ ಹೋಗಿದ್ದು ಇದೇ ಮೊದಲು ಎನ್ನಲಾಗಿದೆ.

ಈ ಹಿಂದೆ ಜಿಎಸ್‌ಟಿಗಾಗಿ ತಮಿಳುನಾಡು, ಹೆಚ್ಚುವರಿ ಸಾಲಕ್ಕಾಗಿ ಕೇರಳ ರಾಜ್ಯಗಳು ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ಗೆ ಹೋಗಿದ್ದವು. ಅಲ್ಲದೆ, ಕೇರಳ ಸರ್ಕಾರ ಅರ್ಜಿ ಸಲ್ಲಿಕೆ ವೇಳೆ ಕರ್ನಾಟಕ ಸರ್ಕಾರಕ್ಕೆ ಕೈ ಜೋಡಿಸುವಂತೆ ಕೋರಿತ್ತು. ಆದರೆ, ಕರ್ನಾಟಕ ಸರ್ಕಾರ ಅದಕ್ಕೆ ನಿರಾಕರಿಸಿತ್ತು.

ಬರ ಪರಿಹಾರಕ್ಕೆ ನೀತಿ ಸಂಹಿತೆ ಅಡ್ಡಿ ಇಲ್ಲ: ಚುನಾವಣಾಧಿಕಾರಿ ವೆಂಕಟೇಶ್‌ ಕುಮಾರ್‌

1 ತಿಂಗಳ ಚರ್ಚೆ ನಂತರ ರಿಟ್: ಕೇಂದ್ರ ಸರ್ಕಾರದ ವಿರುದ್ಧ

ಸುಪ್ರೀಂಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಹಿರಿಯ ಸಚಿವರು, ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜತೆಗೆ ಕಳೆದೊಂದು ತಿಂಗಳಿನಿಂದ ಚರ್ಚೆ ನಡೆಸಿದ್ದಾರೆ. ಆ ವೇಳೆ ಒಂದು ತಿಂಗಳವರೆಗೆ ಕಾದು ನೋಡುವ ಬಗ್ಗೆಯೂ ನಿರ್ಧರಿಸಲಾಯಿತು. ಆದರೆ, ಕೇಂದ್ರ ಸರ್ಕಾರ ಪರಿಹಾರ ನೀಡದಕಾರಣ ಅಂತಿಮವಾಗಿ ರಿಟ್ ಅರ್ಜಿಸಲ್ಲಿಸಲಾಗಿದೆ.ಬೆಳೆನಷ್ಟದಪರಿಹಾರಕ್ಕಾಗಿ 4,663.112ಕೋಟಿರು. ಬರಗಾಲದಿಂದಸಮಸ್ಯೆ ಗೊಳಗಾಗಿರುವ ಕುಟುಂಬಗಳಿಗೆ ಪರಿಹಾರ ನೀಡಲು 12,577.9 ಕೋಟಿ ರು., ಕುಡಿಯುವ ನೀರು ಪೂರೈಕೆಗೆ 566.78 ಕೋಟಿ ರು., ಜಾನುವಾರು ಆರೈಕೆಗೆ 363.68 ಕೋಟಿ ರು. ಸೇರಿದಂತೆ18,171.44 ಕೋಟಿ ರು. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆ 2005ರಲ್ಲೇನಿದೆ?:

ಬರ, ಪ್ರವಾಹ ಸೇರಿದಂತೆ ಇನ್ನಿತರ ಪ್ರಕೃತಿ ವಿಕೋಪದಸಂದರ್ಭದಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಥವಾ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ನೀಡುವ ಸಲುವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರೂಪಿಸಲಾಗಿದೆ. ಅದರ ಪ್ರಕಾರ ಬರ ಅಥವಾ ಪ್ರವಾಹಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ ಒಂದು ವಾರದಲ್ಲಿ ಕೇಂದ್ರ ಆಂತರಿಕಸಚಿವಾಲಯತಂಡವುರಾಜ್ಯಕ್ಕಾಗಮಿಸಿ ಪ್ರಕೃತಿ ವಿಕೋಪ ಪರಿಸ್ಥಿತಿ ಅಧ್ಯಯನ ನಡೆಸುತ್ತದೆ. ನಂತರ ಅದರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗುತ್ತದೆ. ಕೇಂದ್ರ ಸರ್ಕಾರವು ವರದಿ ಬಂದ ಒಂದು ತಿಂಗಳಲ್ಲಿ ರಾಜ್ಯಕ್ಕೆ ಪರಿಹಾರ ಮೊತ್ತ ಬಿಡುಗಡೆ ಮಾಡಬೇಕು ಎಂದು ಕಾಯ್ದೆಯಲ್ಲಿದೆ. ಆದರೆ, ಆ ಒಂದು ತಿಂಗಳಲ್ಲಿ ಪರಿಹಾರ ನೀಡದಿದ್ದರೆ ಏನು ಕ್ರಮ ಎಂಬ ಬಗ್ಗೆ ಕಾಯ್ದೆಯಲ್ಲಿ ಯಾವುದೇ ಅಂಶವಿಲ್ಲ.

ಕರ್ನಾಟಕ ಅರ್ಜಿಯ ಪ್ರಮುಖ ಅಂಶಗಳು

 ಸಂವಿಧಾನದ 32ನೇ ವಿಧಿ ಅಡಿಯಲ್ಲಿ ರಾಜ್ಯದಿಂದ ರಿಟ್ ಅರ್ಜಿ ಸಲ್ಲಿಸುತ್ತಿದ್ದೇವೆ
• 2023ರ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ರಾಜ್ಯದಲ್ಲಿ ಶೇ.25 ಮಳೆ ಕೊರತೆಯಾಗಿದೆ
ರಾಜ್ಯದ 196 ತಾಲೂಕುಗಳಲ್ಲಿ ತೀವ್ರ ಬರ, 27 ತಾಲೂಕುಗಳಲ್ಲಿ ಬರ ಪರಿಸ್ಥಿತಿಯಿದೆ
• ಬರ ಪರಿಸ್ಥಿತಿಯಿಂದ ಈವರೆಗೆ 35,162 ಕೋಟಿ ಮೌಲ್ಯದ ಬೆಳೆ ನಾಶವಾಗಿದೆ
• ರಾಜ್ಯದಿಂದ ನಾಲ್ಕು ಬಾರಿ ಬರಗಾಲದ ಮೌಲ್ಯಮಾಪನ ಮಾಡಲಾಗಿದೆ
ಕೇಂದ್ರ ಸರ್ಕಾರಕ್ಕೆ ಮೂರು ಬಾರಿ ಮನವಿ ಪತ್ರ ಸಲ್ಲಿಸಿದರೂ ಕಾನೂನು ಪ್ರಕಾರ ಪರಿಹಾರವಿಲ್ಲ
• ಕೇಂದ್ರ ಸರ್ಕಾರಕ್ಕೆ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಬೇಕು

ಕಾನೂನು ಸಮರ ಬೇಡವೆಂದು ಇಷ್ಟು ದಿನ ಸುಮ್ಮನಿದ್ದೆವು: ಸಿದ್ದು

ಬೆಂಗಳೂರು:  ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಬೇರೆ ದಾರಿಯಿಲ್ಲದೆ ಸುಪ್ರೀಂಕೋರ್ಟ್ ಮೊರೆ ಹೋದೆವು ಎಂದು ಮುಖ್ಯಮಂತ್ರಿ ಸಿದ್ದರಾ ಮಯ್ಯ ಹೇಳಿದ್ದಾರೆ. ಶನಿವಾರ ತುರ್ತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ನಮಗೆ ಕಾನೂನು ಮೊರೆ ಹೋಗುವುದು ಇಷ್ಟ ಇರಲಿಲ್ಲ. ಆದರೆ ಅದರ ಅನಿವಾರ್ಯತೆಯನ್ನು ಕೇಂದ್ರ ಸರ್ಕಾರ ಸೃಷ್ಟಿಸಿದೆ. ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್)ಯನ್ನು ತಕ್ಷಣಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ. ಸಂವಿಧಾನದ ಪರಿಚ್ಛೇದ 32ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ ಎಂದು ತಿಳಿಸಿದರು.

ಬರದ ಸಂದರ್ಭದಲ್ಲಿ ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗಿ ಸ್ಪಂದಿಸಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. ಆದರೆ ಇದುವರೆಗೂ ಕೇಂದ್ರ ಕಾನೂನುಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಅಂತ ಘೋಷಿಸಿದ್ದೇವೆ. నాలు ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್‌ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿಕೇಂದ್ರ ಕ್ಕೆಮನವಿಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರರಾಜ್ಯದಪಾಲಿನಲ್ಲಿನಯಾಪೈಸೆಯನ್ನೂ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಯಮಾವಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದವಾರದಲ್ಲಿ ಕೇಂದ್ರ ದತಂಡಬರಬೇಕು. ಆದರೆ, ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಿದೆ. ಈ ವರದಿ ಕೊಟ್ಟಒಂದುತಿಂಗಳಲ್ಲಿ ರಾಜ್ಯಕ್ಕೆ ಬರಪರಿಹಾರ ಕೊಡವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು ತಿಳಿಸಿದ ಸಿದ್ದರಾಮಯ್ಯ ಅವರು ಎನ್‌ಡಿಆರ್‌ಎಫ್ ನಿಯಮಾವಳಿಗಳನ್ನು ವಿವರಿಸಿದರು.

ಕೇಂದ್ರ ತಂಡ ವರದಿ ಕೊಟ್ಟರೂ ನಮಗೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದಾಗ ಕಂದಾಯ ಸಚಿವ ಕೃಷ್ಣಬೈ ರೇಗೌಡ ಅವರು ದೆಹಲಿಗೆ ಹೋದರು. ಆದರೆ, ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ. 3 ಬಳಿಕ ಡಿ.19 ರಂದು ನಾನು ಮತ್ತು ಕೃಷ್ಣಬೈರೇಗೌಡ ಅವರು ಮತ್ತೆ ದೆಹಲಿಗೆ ಹೋಗಿ ಪ್ರಧಾನಮಂತ್ರಿಗಳಿಗೆ ಭೇಟಿಮಾಡಿಮನವಿಮಾಡಿದೆವು.ನಂತರಡಿ.20ರಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ ನಮಗೆ ಪರಿಹಾರ ಕೊಡಲಿಲ್ಲ. ಬಳಿಕ ನಾನು ಬೆಂಗಳೂರಿನಲ್ಲೇ ಪ್ರಧಾನಿ ಮೋದಿಯವರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಪರಿಹಾರ ಸಿಗಲಿಲ್ಲ ಎಂದು ಸಿದ್ದರಾಮಯ್ಯ ಬೇಸರ ಹೊರಹಾಕಿದರು. ಕೇಂದ್ರದಿಂದ ನಯಾಪೈಸೆ ಬಿಡುಗಡೆ ಆಗದಿದ್ದಾಗ 327 ಕೋಟಿ ರು. ಕುಡಿಯುವ ನೀರಿಗೆ, 40 ಕೋಟಿ ರು. ಮೇವಿಗೆ, ರೈತರಿಗೆ 650 ಕೋಟಿ ರು. ಹೀಗೆ ಒಟ್ಟು 1017 ಕೋಟಿ ರು.ಬಿಡುಗಡೆಮಾಡಿದೆವು.ಜಿಲ್ಲಾಧಿಕಾರಿಗಳ ಬಳಿ ಇನ್ನೂ 800 ಕೋಟಿ ರು. ಹಣ ಬರನಿರ್ವಹಣೆ ಉದ್ದೇಶಕ್ಕಾಗಿಯೇ ಮೀಸಲಿಡಲಾಗಿದೆ. ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ ಎಂದರು.

4663 ಕೋಟಿ ರು. ಇನ್ ಪುಟ್ ಸಬ್ಸಿಡಿಗೆ ಹಣಬೇಕು. ಕಾಯ್ದೆ ಪ್ರಕಾರ ಇಂಥಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ ಎನ್‌ಡಿಆರ್‌ಎಫ್ ನಿಧಿ ಬಂದೇ ಇಲ್ಲ. ನಮ್ಮ ನಾಡಿಗೆ,ನಮ್ಮನಾಡಿನಜನರಿಗೆ ಆಗಿರುವ ಅನ್ಯಾಯವನ್ನು ಸರಿಮಾಡಿ ಎಂದು ನಿಧಿಕೊಡಿ ಎಂದು ಮೇಲಿಂದ ಮೇಲೆ ಮನವಿಮಾಡಿ ಎಲ್ಲಾ ರೀತಿಯಲ್ಲೂ ಬೇಡಿಕೆ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ. ಇವತ್ತು ಕೊಡುತ್ತಾರೆ. ನಾಳೆ ಕೊಡುತ್ತಾರೆ. ಇವತ್ತು ಬರುತ್ತೆ. ನಾಳೆ ಬರುತ್ತೆ ಅಂತ ಐದು ತಿಂಗಳು ಕಾದಿದ್ದಾಯ್ತು. ನಮಗೆ ಬೇರೆ ಇರಲಿಲ್ಲ ಎಂದು ಹೇಳಿದರು.

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಬೊಮ್ಮಾಯಿ ಅಷ್ಟೇ ಅಲ್ಲ, ಮೋದಿಯೇ ನಡುಗಿದ್ದಾರೆ: ಸಚಿವ ಎಚ್. ಕೆ.ಪಾಟೀಲ

ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಈ ಸಂದರ್ಭ ಉಪಸ್ಥಿತರಿದ್ದು ಕೇಂದ್ರದಿಂದ ಎನ್‌ಡಿಆರ್ ಎಫ್ ಪರಿಹಾರ ಪಡೆಯಲು ಇದುವರೆಗೂ ರಾಜ್ಯ ಸರ್ಕಾರ ಮಾಡಿದ ಪ್ರಯತ್ನಗಳನ್ನು ವಿವರಿಸಿದರು.

ಕೇಂದ್ರ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ

ಬರದ ಸಂದರ್ಭ, ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗಿ ಸ್ಪಂದಿಸಬೇಕೆನ್ನುವ ಉದ್ದೇ ಶದಿಂದ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. ಆದರೆ ಇದುವರೆಗೂ ಕೇಂದ್ರ ಕಾನೂನುಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

click me!