ಕಳೆದ ವರ್ಷದ ಅತಿಥಿ ಉಪನ್ಯಾಸಕರನ್ನೇ ಸದ್ಯ ಮುಂದುವರೆಸಲು ಸರ್ಕಾರ ಆದೇಶ

Published : Sep 30, 2025, 07:19 AM IST
Vidhana soudha

ಸಾರಾಂಶ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಎದುರಾಗಿರುವ ಕಾನೂನು ಕಗ್ಗಂಟು ಬಗೆಹರಿಯುವವರೆಗೆ ಕಳೆದ ವರ್ಷ ಕಾರ್ಯನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನೇ 2025-26ನೇ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ ಮುಂದುವರಿಸಲು ಸರ್ಕಾರ ಅನುಮತಿ ನೀಡಿದೆ.

ಬೆಂಗಳೂರು (ಸೆ.30): ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಕ್ಕೆ ಎದುರಾಗಿರುವ ಕಾನೂನು ಕಗ್ಗಂಟು ಬಗೆಹರಿಯುವವರೆಗೆ ಕಳೆದ ವರ್ಷ ಕಾರ್ಯನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನೇ 2025-26ನೇ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ ಮುಂದುವರಿಸಲು ಸರ್ಕಾರ ಅನುಮತಿ ನೀಡಿದೆ.

ಹೆಚ್ಚುವರಿ ಅಡ್ವೋಕೇಟ್ ಜನರಲ್ ಅವರು ನೀಡಿರುವ ಕಾನೂನು ಅಭಿಪ್ರಾಯದಂತೆ ಸೆ.9ರಂದು ನೀಡಿರುವ ಮಧ್ಯಂತರ ಆದೇಶಕ್ಕೆ ಒಳಪಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2024-25ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನೇ ತಾತ್ಕಾಲಿಕವಾಗಿ ಈ ಸಾಲಿನ ಹಾಲಿ ಸೆಮಿಸ್ಟರ್‌ ಪೂರ್ಣಗೊಳ್ಳುವವರೆಗೆ ಮುಂದುವರೆಸಲು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ ಅವರಿಗೆ ಬರೆದಿರುವ ಪತ್ರದಲ್ಲಿ ಸೂಚನೆ ನೀಡಿದ್ದಾರೆ.

ಯುಜಿಸಿ ವಿದ್ಯಾರ್ಹತೆ

ಈ ರೀತಿ ಕಳೆದ ವರ್ಷದ ಅತಿಥಿ ಉಪನ್ಯಾಸಕರ ಮುಂದುವರಿಕೆ ನಂತರವೂ ಹೆಚ್ಚುವರಿ ಕಾರ್ಯಭಾರ ಕಂಡು ಬಂದಲ್ಲಿ ಅಂತಹ ಕಾರ್ಯಭಾರಕ್ಕೆ ಎದುರಾಗಿ ನ್ಯಾಯಾಲಯದ ಮಧ್ಯಂತರ ಆದೇಶದ ಅನುಸಾರ ಪ್ರಸ್ತುತ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಲಾಗಿದೆ.

ಕಳೆದ ವರ್ಷ ಸುಮಾರು 10,500 ಅತಿಥಿ ಉಪನ್ಯಾಸಕರನ್ನು ಉನ್ನತ ಶಿಕ್ಷಣ ಇಲಾಖೆಯು ನೇಮಕ ಮಾಡಿಕೊಂಡಿತ್ತು. ಅವರ ಕರ್ತವ್ಯದ ಅವಧಿಯು ಇದೇ ಆ.2ಕ್ಕೆ ಕೊನೆಯಾಗಿತ್ತು. ಆಗಸ್ಟ್‌ನಲ್ಲಿ ಕಾಲೇಜು ಆರಂಭವಾದ ಬಳಿಕ ಎರಡು ತಿಂಗಳಿನಿಂದ ಉಪನ್ಯಾಸಕರಿಲ್ಲದೆ ತರಗತಿಗಳು ನಡೆಯದಿರುವ ಕಾರಣ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್