ಡೆಂಗ್ಯೂ ಟೆಸ್ಟ್‌ಗೆ ಬೆಲೆ ನಿಗದಿಪಡಿಸಿದ ಸರ್ಕಾರ: ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿದ ಸಚಿವ ದಿನೇಶ್ ಗುಂಡೂರಾವ್

By Govindaraj S  |  First Published Jul 3, 2024, 9:27 PM IST

ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯೂ ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.


ಬೆಂಗಳೂರು (ಜು.03): ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯೂ ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್‌ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. 

ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗ್ಯೂ ಟೆಸ್ಟಿಂಗ್ ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ. 

Tap to resize

Latest Videos

ರಾಹುಲ್ ಗಾಂಧಿ ಸಮಸ್ತ ಹಿಂದುಗಳ ಕ್ಷಮೆ ಕೇಳಲಿ: ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಆಗ್ರಹ

ಡೆಂಗ್ಯೂ ನಿಯಂತ್ರಣ ಮುಂಜಾಗೃತ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್  ಸಭೆ ಕರೆದಿದ್ದಾರೆ. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗಿ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಡಿನಲ್ಲಿ ಮಹತ್ವದ ಸಭೆ ಕರೆದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಕೈಗೊಂಡಿರುವ ಮುಂಜಾಗೃತ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಿದ್ದಾರೆ.

click me!