ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಚಿಂತನೆ

By Kannadaprabha NewsFirst Published Aug 14, 2020, 10:24 AM IST
Highlights

ಕೊರೋನಾ ಆರೋಗ್ಯ ತುರ್ತು ಪರಿಸ್ಥಿತಿ ಹಾಗೂ ವಾರ್ಡ್‌ ಸದಸ್ಯರ ಮೀಸಲಾತಿ ಪಟ್ಟಿ ಇನ್ನು ಸಿದ್ಧವಾಗದ ಹಿನ್ನೆಲೆಯಲ್ಲಿ ಸದ್ಯ ಚುನಾವಣೆ ನಡೆಯುವುದು ಅನುಮಾನ|  ಚುನಾವಣೆ ನಡೆಯುವವರೆಗೆ ಬಿಬಿಎಂಪಿಯ ಆಡಳಿತ ನಿರ್ವಹಣೆಗೆ ಹಿರಿಯ ಐಎಎಸ್‌ ಅಧಿಕಾರಿಯ ನೇಮಕಕ್ಕೆ ಸರ್ಕಾರ ಮುಂದಾಗಿದೆ|

ಬೆಂಗಳೂರು(ಆ.14): ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿ ಸೆ.10ಕ್ಕೆ ಮುಕ್ತಾಯ ಆಗುತ್ತಿರುವ ಕಾರಣ ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಚಿಂತನೆ ನಡೆಸಿದೆ.

ಕೊರೋನಾ ಆರೋಗ್ಯ ತುರ್ತು ಪರಿಸ್ಥಿತಿ ಹಾಗೂ ವಾರ್ಡ್‌ ಸದಸ್ಯರ ಮೀಸಲಾತಿ ಪಟ್ಟಿ ಇನ್ನು ಸಿದ್ಧವಾಗದ ಹಿನ್ನೆಲೆಯಲ್ಲಿ ಸದ್ಯ ಚುನಾವಣೆ ನಡೆಯುವುದು ಅನುಮಾನವಾಗಿದೆ. ಹಾಗಾಗಿ, ಚುನಾವಣೆ ನಡೆಯುವವರೆಗೆ ಬಿಬಿಎಂಪಿಯ ಆಡಳಿತ ನಿರ್ವಹಣೆಗೆ ಹಿರಿಯ ಐಎಎಸ್‌ ಅಧಿಕಾರಿಯ ನೇಮಕಕ್ಕೆ ಸರ್ಕಾರ ಮುಂದಾಗಿದೆ.

ಹಸಿ ಕಸ ನಿರ್ವಹಣೆ: 45 ಗುತ್ತಿಗೆದಾರರಿಗೆ ಬಿಬಿಎಂಪಿ ಕಾರ್ಯಾದೇಶ

ಆಡಳಿತ ಅಧಿಕಾರಿ ನೇಮಕಕ್ಕೆ ಸೆ.10ರ ವರೆಗೆ ಸರ್ಕಾರಕ್ಕೆ ಕಾಲಾವಕಾಶವಿದೆ. ಹೀಗಾಗಿ, ಬಿಬಿಎಂಪಿ ಆಡಳಿತ ನಿರ್ವಹಣೆಗೆ ಆಡಳಿತಾಧಿಕಾರಿಯಾಗಿ ಯಾರನ್ನು ನೇಮಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮೂಲಗಳ ಪ್ರಕಾರ ಹಿರಿಯ ಅಧಿಕಾರಿಗಳಾದ ಗೌರವ್‌ ಗುಪ್ತಾ, ಮಹೇಂದ್ರ ಜೈನ್‌ ಹಾಗೂ ರಾಕೇಶ್‌ ಸಿಂಗ್‌ ಅವರಲ್ಲಿ ಒಬ್ಬರನ್ನು ಆಡಳಿತ ಅಧಿಕಾರಿಯಾಗಿ ನೇಮಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
 

click me!