ಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ ದೇಸಾಯಿ ಆಯೋಗಕ್ಕೆ ನೀಡಲಿ. ಸುಮ್ಮನೆ ಸಾರ್ವಜನಿಕವಾಗಿ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವುದು ಬೇಡ. ಈಗಾಗಲೇ ದೇಸಾಯಿ ಆಯೋಗವು ಪ್ರಕರಣದ ತನಿಖೆ ಆರಂಭಿಸಿದೆ ಎಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು(ಆ.23): ರಾಜ್ಯಪಾಲರಿಗೆ ಯಾವ ರೀತಿಯ ಬೆದರಿಗೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ಅವರು ರಕ್ಷಣೆ ಬೇಕೆಂದು ಕೇಳಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶವನ್ನು ಬೆಜಿಪಿಯವರು ಸೃಷ್ಟಿ ಮಾಡಿದ್ದಾರೆ. ಬಿಜೆಪಿಯವರ ಇತ್ತೀಚಿನ ಬೆಳವಣಿಗೆಗಳೇ ಇದಕ್ಕೆ ಕಾರಣ’ ಎಂದರು. ಇದೇ ವೇಳೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ಸಾರ್ವಜನಿಕವಾಗಿ ಹೇಳಿಕೆ ಕೊಟ್ಟು ಗೊಂದಲ ಸೃಷ್ಟಿಸುವ ಬದಲು ಪ್ರಕರಣದ ತನಿಖೆ ನಡೆಸುತ್ತಿರುವ ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ ಎಂದು ಪರಮೇಶ್ವರ್ ತೀರುಗೇಟು ನೀಡಿದರು.
undefined
ಪರಮೇಶ್ವರ್ ಸಿಎಂ ಆಗಲಿ: ಸಿದ್ಧರಬೆಟ್ಟ ಸ್ವಾಮೀಜಿ
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ ದೇಸಾಯಿ ಆಯೋಗಕ್ಕೆ ನೀಡಲಿ. ಸುಮ್ಮನೆ ಸಾರ್ವಜನಿಕವಾಗಿ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವುದು ಬೇಡ. ಈಗಾಗಲೇ ದೇಸಾಯಿ ಆಯೋಗವು ಪ್ರಕರಣದ ತನಿಖೆ ಆರಂಭಿಸಿದೆ ಎಂದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದ ಗೃಹ ಸಚಿವರು, ‘ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾ.ಮೈಕಲ್ ಪೊನ್ನಾ ಅವರ ವರದಿ ಬರುವರೆಗೂ ಏನನ್ನು ಮಾಡಲಾಗುವುದಿಲ್ಲ. ವರದಿಯಲ್ಲಿ ಏನು ಶಿಫಾರಸು ಮಾಡುತ್ತಾರೆ ಎಂಬುದನ್ನು ಗಮನಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಪ್ರೊಸಿಡಿಂಗ್ಸ್ ಮಾಡಬೇಕೆಂದು ವರದಿಯಲ್ಲಿ ಬಂದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.