ಗ್ಯಾರಂಟಿ ಯೋಜನೆ: ಸಿದ್ದರಾಮಯ್ಯ ಸರ್ಕಾರವನ್ನ ಹಾಡಿ ಹೊಗಳಿದ ರಾಜ್ಯಪಾಲ ಗೆಹಲೋತ್..!

By Kannadaprabha News  |  First Published Aug 16, 2024, 7:03 AM IST

ಸ್ವಾತಂತ್ರೋತ್ಸವದ ಅಂಗವಾಗಿ ರಾಜ ಭವನದ ಅಂಗಳದಲ್ಲಿ ಗುರುವಾರ ಧ್ವಜಾ ರೋಹಣನೆರವೇರಿಸಿದ ಅವರು ಬಳಿಕ ರಾಜ್ಯದ ಜನತೆ ಉದ್ದೇಶಿಸಿ ವಿಡಿಯೋ ಮೂಲಕ ಸ್ವಾತಂತ್ರೋತ್ಸವ ಸಂದೇಶ ನೀಡಿದರು. ಈ ವೇಳೆ ಕರ್ನಾಟಕ ದೇಶದ ಪ್ರಗತಿಪರ ರಾಜ್ಯ, ಕರ್ನಾಟಕ ರಾಜ್ಯವು ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್


ಬೆಂಗಳೂರು(ಆ.16):  'ರಾಜ್ಯದ ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ' ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ರಾಜ್ಯ ಸರ್ಕಾರವನ್ನು ಶ್ಲಾಘಿಸಿದ್ದಾರೆ.  ಮುಡಾ ಪ್ರಕರಣ ಸಂಬಂಧ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷದ ನಡುವೆಯೇ,

ರಾಜ್ಯಪಾಲರು ಗುರುವಾರ ಸ್ವಾತಂತ್ರೋತ್ಸವ ದಿನಾಚರಣೆ ಸಂದೇಶದಲ್ಲಿ ಸರ್ಕಾರದ ಗ್ಯಾರಂಟಿಗಳನ್ನು ಹೊಗಳಿದರು. ಸ್ವಾತಂತ್ರೋತ್ಸವದ ಅಂಗವಾಗಿ ರಾಜ ಭವನದ ಅಂಗಳದಲ್ಲಿ ಗುರುವಾರ ಧ್ವಜಾ ರೋಹಣನೆರವೇರಿಸಿದ ಅವರು ಬಳಿಕ ರಾಜ್ಯದ ಜನತೆ ಉದ್ದೇಶಿಸಿ ವಿಡಿಯೋ ಮೂಲಕ ಸ್ವಾತಂತ್ರೋತ್ಸವ ಸಂದೇಶ ನೀಡಿದರು. ಈ ವೇಳೆ ಕರ್ನಾಟಕ ದೇಶದ ಪ್ರಗತಿಪರ ರಾಜ್ಯ, ಕರ್ನಾಟಕ ರಾಜ್ಯವು ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ' ಎಂದು ಹೇಳಿದರು. 

Latest Videos

undefined

ಸಂಸತ್ ಅಧಿವೇಶನದ ಬಳಿಕ ಸಿದ್ದು ಪ್ರಾಸಿಕ್ಯೂಷನ್ ಭವಿಷ್ಯ ನಿರ್ಧಾರ?

ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುವಲ್ಲಿ ನಮ್ಮ ರಾಜ್ಯ ಪ್ರವರ್ತಕ ಸ್ಥಾನದಲ್ಲಿದೆ ಎಂದು ಕೊಂಡಾಡಿದರು.

ಇನ್ನು ಸ್ವಾತಂತ್ರ್ಯಾ ನಂತರ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದ್ದು, ದೇಶದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ವಿಶ್ವದ ಪ್ರಮುಖ ದೇಶಗಳಲ್ಲಿ 5 ನೇ ಸ್ಥಾನದಲ್ಲಿದೆ. ಸ್ವಾತಂತ್ರ್ಯದ 100 ನೇ ವರ್ಷಾಚರಣೆಯ ಸಂದರ್ಭದಲ್ಲಿ ಭಾರತವು ಶೇ.100 ರಷ್ಟು ವಿದ್ಯಾವಂತರಾಗಿ, ಆರ್ಥಿಕವಾಗಿ ಸದೃಢವಾಗಬೇಕು ಎಂಬುದು ಭಾರತದ ಜನರ ನಿರೀಕ್ಷೆಯಾಗಿದೆ. ಇದಕ್ಕಾಗಿ ನಾವೆಲ್ಲರೂ ಭಕ್ತಿ ಮತ್ತು ಸಮರ್ಪಣಾ ಭಾವದಿಂದ ನಮ್ಮ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ಕರೆ ನೀಡಿದರು.

ಮುಡಾ ಬೆನ್ನಲ್ಲೇ ಸಿಎಂ ವಿರುದ್ಧ ಗೌರ್ನರ್‌ಗೆ ಮತ್ತೊಂದು ದೂರು ಸಲ್ಲಿಕೆ..!

ಇದೇ ವೇಳೆ ಪ್ಯಾರಿಸ್‌ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಒಲಿಂಪಿಕ್ ಕ್ರೀಡಾಕೂಟ ದಲ್ಲಿ ಸಾಧನೆ ಮಾಡಿದ ಭಾರತೀಯ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದರು. ಇದಕ್ಕೂ ಮೊದಲು ರಾಜಭವನದ ಅಂಗಳದಲ್ಲಿರುವ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆ‌ರ್.ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದಿಂದ ಗೌರವ ರಕ್ಷೆ ನೀಡಲಾಯಿತು. 

ರಾಜಭವನದ ವಿಶೇಷ ಪ್ರಭುಶಂಕರ್‌ ಸೇರಿ ಹಲವರು ಹಾಜರಿದ್ದರು. ಅಮ್ಮನ ಹೆಸರಿನಲ್ಲಿ ಒಂದು ಮರ ಬೆಳೆಸಿ: ಪ್ರಸ್ತುತ ದೇಶ ಮತ್ತು ವಿಶ್ವದಲ್ಲಿ ಪರಿಸರ ಅಸಮತೋಲನ ಗಂಭೀರ ಸಮಸ್ಯೆ ಇದೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ 'ಅಮ್ಮನಹೆಸರಲ್ಲಿ ಒಂದು ಮರ' ಅಭಿಯಾನದ ಅಡಿಯಲ್ಲಿ ಎಲ್ಲರೂ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿ ಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಕರೆ ನೀಡಿದರು.

click me!