
ಬೆಂಗಳೂರು, (ಆ.14): ರಾಜ್ಯಪಾಲ ವಜುಭಾಯಿ ವಾಲಾ ಅವರು 74ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದ್ದಾರೆ.
ತಮ್ಮ ಸಂದೇಶದಲ್ಲಿ ವಜುಭಾಯಿ ವಾಲಾ ಅವರು ಕರ್ನಾಟಕದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.
ಕರ್ನಾಟಕದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ
'ಈ ಐತಿಹಾಸಿಕ ದಿನದಂದು ನಮ್ಮ ದೇಶದ ನಿರ್ಮಾತೃಗಳಿಗೆ ಶ್ರೇಷ್ಠ ಗೌರವ ಸಲ್ಲಿಸುವಲ್ಲಿ ನಾನು ನಿಮ್ಮೆಲ್ಲರ ಜೊತೆಗೆ ಸೇರುತ್ತೇನೆ. ನಮ್ಮ ತಾಯಿನಾಡಿನ ಎಲ್ಲಾ ಧೀರ ಪುತ್ರರು ಮತ್ತು ವೀರ ವನಿತೆಯರು ಹಾಗೂ ಸವಾಲಿನ ಪರಿಸ್ಥಿತಿಯಲ್ಲೂ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ನಮ್ಮ ಸಶಸ್ತ್ರ ಪಡೆಗಳು, ಅರೆ ಸೈನಿಕ ಪಡೆ, ಸ್ವಾತಂತ್ರ್ಯ ಹೋರಾಟಗಾರರು, ರಾಜ್ಯ ಪೊಲೀಸ್ ಮತ್ತು ಎಲ್ಲಾ ಇತರೆ ಸಂಸ್ಥೆಗಳಿಗೆ ನನ್ನ ಮೆಚ್ಚುಗೆಯನ್ನು ತಿಳಿಸುತ್ತೇನೆ.
ಭವ್ಯವಾದ ಆಚರಣೆಯ ಈ ಸಮಯದಲ್ಲಿ ಮತ್ತೊಮ್ಮೆ ನಾನು ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ತಿಳಿಸುತ್ತಾ, ಈ ಸಂದರ್ಭವು ತಮಗೆ ಸಂತೋಷ ಹಾಗೂ ಸಂಭ್ರಮ ತರಲೆಂದು ಹಾರೈಸುತ್ತೇನೆ' ಎಂದು ರಾಜ್ಯಪಾಲ ವಜುಭಾಯಿ ವಾಲಾ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ