ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಕ್ರಿಯಾಯೋಜನೆ: ಡಿಸಿಎಂ ಕಾರಜೋಳ

Kannadaprabha News   | Asianet News
Published : Aug 30, 2020, 10:20 AM IST
ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಕ್ರಿಯಾಯೋಜನೆ: ಡಿಸಿಎಂ ಕಾರಜೋಳ

ಸಾರಾಂಶ

ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಶಿಕ್ಷಣ, ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ವಿಶೇಷ ಕ್ರಿಯಾಯೋಜನೆ ಸಿದ್ದಪಡಿಸಲು ಅಧಿಕಾರಿಗಳಿಗೆ ಕಾರಜೋಳ ಸೂಚನೆ| ನೂತನ ಶಿಕ್ಷಣ ನೀತಿಯಿಂದ ಶಾಲಾ ವ್ಯವಸ್ಥೆಗೆ ಬಲ| 

ಬೆಂಗಳೂರು(ಆ.30): ನೂತನ ಶಿಕ್ಷಣ ನೀತಿ ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಬಲಪಡಿಸಲಿದ್ದು, ಈ ನೀತಿಯಡಿ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಶಿಕ್ಷಣ, ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ವಿಶೇಷ ಕ್ರಿಯಾಯೋಜನೆಯನ್ನು ಸಿದ್ದಪಡಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಶನಿವಾರ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನ ಕುರಿತು ಸಭೆ ನಡೆಸಿದರು. ಈ ವೇಳೆ ಮಾತನಾಡಿ ಅವರು, ‘ಎಸ್‌ಸಿ/ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳೇ ಹೆಚ್ಚಿನ ಪ್ರಮಾಣದಲ್ಲಿ ಸರ್ಕಾರಿ ಶಾಲೆಗಳನ್ನು ಅವಲಂಬಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಮತ್ತು ಪರಿಣಾಮಕಾರಿ ಶಿಕ್ಷಣ ನೀಡಲು ಈ ಶಿಕ್ಷಣ ನೀತಿಯಡಿ ಪರಿಣಾಮಕಾರಿ ಶಿಕ್ಷಣಕ್ಕೆ ವಿಫುಲ ಅವಕಾಶಗಳಿವೆ. ಈ ಎಲ್ಲ ಅವಕಾಶಗಳನ್ನು ಪಡೆಯುವ ಮೂಲಕ ವಿದ್ಯಾರ್ಥಿಗಳು ಸ್ವಾವಲಂಬಿಗಳಾಗುವಂತಹ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು. ಈ ಸಮುದಾಯಗಳಿಗೆ ವಿಶೇಷ ಆದ್ಯತೆ ನೀಡಿ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದರು.

ಎಸ್‌ಎಸ್‌ಎಲ್‌ಸಿ SC/STವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

‘ನೂತನ ಶಿಕ್ಷಣ ನೀತಿಯಡಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಾದೇಶಿಕ ಅಸಮಾನತೆ ನಿವಾರಣೆಗಾಗಿ ವಿಶೇಷ ಶೈಕ್ಷಣಿಕ ವಲಯ ರಚನೆ ಕುರಿತು ಪ್ರಸ್ತಾಪಿಸಲಾಗಿದ್ದು, ಇದರ ಜಾರಿಗೆ ಒತ್ತು ನೀಡಬೇಕು. ಎಸ್‌ಸಿ/ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಸಮುದಾಯದ ಶಿಕ್ಷಕ ವೃಂದಕ್ಕೆ ವೃತ್ತಿಪರ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸಬೇಕು. ಶಿಕ್ಷಕರ ಶಿಕ್ಷಣ ಮತ್ತು ನೇಮಕಾತಿಗಾಗಿ ವಿಶೇಷ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಮಲ್ಟಿಪಲ್‌ ಎಂಟ್ರಿ ಮತ್ತು ಮಲ್ಟಿಪಲ್‌ ಎಕ್ಸಿಟ್‌ನಿಂದಾಗಿ ಶಾಲೆಯಿಂದ ಹೊರಗುಳಿಯುವವರ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ’ ಎಂದು ಹೇಳಿದರು.

‘ರಾಜ್ಯದಲ್ಲಿ ವಸತಿ ಶಿಕ್ಷಣ ವ್ಯವಸ್ಥೆಯಿಂದ ರಾಜ್ಯದಲ್ಲಿ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯುವ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಹೊಸ ಶಿಕ್ಷಣ ನೀತಿಯಂತೆ ವಸತಿ ಶಿಕ್ಷಣ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಬೇಕು. ಸ್ವಂತ ನಿವೇಶನ ಹೊಂದಿರುವ ವಸತಿ ಶಾಲೆಯಲ್ಲಿ ಹೆಚ್ಚುವರಿ ಶಾಲಾ ಕೊಠಡಿ, ವಸತಿ ಕೊಠಡಿ ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು. ಪ್ರಸ್ತುತ ಇರುವ 1.7 ಲಕ್ಷ ವಿದ್ಯಾರ್ಥಿಗಳ ಸಂಖ್ಯೆಯನ್ನು 2.5 ಲಕ್ಷಕ್ಕೆ ವಿಸ್ತರಿಸಲು ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

ಸಭೆಯಲ್ಲಿ ವಿಧಾಪರಿಷತ್‌ ಸದಸ್ಯ ಅರುಣ್‌ ಶಹಾಪುರ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಾಘವೇಂದ್ರ, ಎಸ್‌ಸಿಪಿ/ಟಿಎಸ್‌ಪಿ ಸಲಹೆಗಾರ ಇ.ವೆಂಕಟಯ್ಯ ಇತರರು ಉಪಸ್ಥಿತರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!