ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರು. ಪಡೆಯಲು ಅನುಕೂಲವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ.
ಬೆಂಗಳೂರು (ಜು.06): ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರು. ಪಡೆಯಲು ಅನುಕೂಲವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ. ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಜು.8ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ, ಪಾಸ್‍ಪೋರ್ಟ್ ಅಳತೆಯ ಫೋಟೋ ಮತ್ತು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕಾದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ತಿಳಿಸಿದೆ.
ಹಣ ಯಾವಾಗ ಬರತ್ತೆ..?: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಬಡ ಫಲಾನುಭವಿಗಳಿಗೆ ಪ್ರತಿ ತಿಂಗಳು ಸರ್ಕಾರ ನೀಡುವ ಗೃಹಲಕ್ಷ್ಮಿ ಯೋಜನೆಯ ₹ 2 ಸಾವಿರ ಗ್ಯಾರಂಟಿ ಹಣ ಸಾಕಷ್ಟು ಬಡವರಿಗೆ ಅನುಕೂಲ ಕಲ್ಪಿಸಿದೆ. ಜೂನ್ ತಿಂಗಳ ₹ 2000 ಹಣ ಜುಲೈ ಬಂದರೂ ಬಾರದ್ದರಿಂದ ಲಕ್ಷಾಂತರ ಕುಟುಂಬಗಳ ಯಜಮಾನಿಯರು ತಮ್ಮ ಬ್ಯಾಂಕ್ ಖಾತೆಗಳನ್ನು ನೋಡುತ್ತ ಕಾದು ಕುಳಿತಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅದ್ಯಾವಾಗ ಗೃಹಲಕ್ಷ್ಮಿ ಹಣ ಹಾಕುತ್ತಾರೆ ಎದುರು ನೋಡುತ್ತಿದ್ದಾರೆ.
ಲೋಕ ಚುನಾವಣೆ ವೇಳೆ ಬಂದ ಹಣ: ಮೇ 7ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಗೃಹಿಣಿಯರ ಮನವೊಲಿಸಿ ಮತಗಳ ಲಾಭ ಮಾಡಿಕೊಳ್ಳಲೆಂದು ಹಿಂದೆ ಬಾಕಿ ಉಳಿದಿದ್ದ ಎಲ್ಲ ತಿಂಗಳುಗಳ ಹಣವನ್ನು ಏಪ್ರೀಲ್ ಹಾಗೂ ಮೇ ತಿಂಗಳಿನಲ್ಲಿಯೇ ಮೂರು ಬಾರಿ ಟಕಾ ಟಕ್ ಎಂದು ಖಾತೆಗಳಿಗೆ ಜಮೆ ಮಾಡಲಾಗಿತ್ತು. ಆದರೆ ಚುನಾವಣೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಸಿಗದ ಹಿನ್ನೆಲೆ ಯೋಜನೆಯನ್ನು ಸ್ಥಗಿತಗೊಳಿಸಲಾಗುತ್ತದಾ ಎಂಬ ಚರ್ಚೆಗಳು ನಡೆಯುತ್ತಿವೆ.
ದರ್ಶನ್ ಭೇಟಿಗೆ ಕುಟುಂಬ ಹೋಗ್ತಿದೆ, ನಾವು ಎಲ್ಲಿಗೆ ಹೋಗ್ಬೇಕು: ರೇಣುಕಾಸ್ವಾಮಿ ತಾಯಿ
ಮಾರ್ಚ್ ತಿಂಗಳ ಬಾಕಿಯನ್ನು ಏಪ್ರಿಲ್ 16ರಂದು, ಎಪ್ರೀಲ್ ತಿಂಗಳ ಹಣವನ್ನು ಏಪ್ರೀಲ್ 23ಕ್ಕೆ, ಮೇ ತಿಂಗಳದ್ದು ಮೇ 4ರಂದೇ ಫಲಾನುಭವಿಗಳ ಖಾತೆಗೆ ಹಾಕಲಾಗಿತ್ತು. ಚುನಾವಣೆಗೂ ಮೊದಲು ಬಾಕಿ ಉಳಿಸಿಕೊಳ್ಳಬಾರದು ಎಂದು ಮೇ ತಿಂಗಳ ಆರಂಭದಲ್ಲೇ ಜಮೆ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಲೋಕಸಭೆಯಲ್ಲಿ ಮತದಾರರನ್ನು ಸೆಳೆಯಲು ಮ್ಯಾಜಿಕ್ ಎಂಬಂತೆ ಮೂರು ತಿಂಗಳ ಹಣವನ್ನು ಎರಡೇ ತಿಂಗಳಿನಲ್ಲಿ ನೀಡಿತ್ತು. ಆದರೆ, ಚುನಾವಣೆ ಮುಗಿದಿದ್ದೆ ತಡೆ ವಿಳಂಬ ನೀತಿ ಅನುಸರಿಸುತ್ತಿದೆ.