* ಸಾಲದ ಮರುಪಾವತಿ ಅವಧಿ ವಿಸ್ತರಣೆ
* ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲದ ಕಂತು ಪಾವತಿ ವಿಸ್ತರಣೆ
* ಲಾಕ್‌ಡೌನ್ ವಿಸ್ತರಣೆಗೊಳಿಸಿರುವ ಹಿನ್ನೆಲೆಯಲ್ಲಿ ಈ ತೀರ್ಮಾನಕೈಗೊಂಡ ಸರ್ಕಾರ
ಬೆಂಗಳೂರು, (ಮೇ.21): ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರೈತರ ಸಾಲ ಮರುಪಾವತಿ ಸಮಸ್ಯೆಯನ್ನು ನಿವಾರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ರೈತರು ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲದ ಮರು ಪಾವತಿ ಕಂತು ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಇಂದು (ಶುಕ್ರವಾರ) ಅಧಿಕೃತ ಆದೇಶ ಹೊರಡಿಸಿದೆ.
undefined
ಕರ್ನಾಟಕದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ವಿಸ್ತರಣೆ: ಸಿಎಂ ಅಧಿಕೃತ ಘೋಷಣೆ
ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್‌ಡೌನ್ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದರು. ಇದರ ಬೆನ್ನಲ್ಲೇ ಇದೀಗ ಸಾಲದ ಕಂತು ಪಾವತಿ ದಿನಾಂಕವನ್ನು ವಿಸ್ತರಿಸಲಾಗಿದೆ.
ಸಾಲದ ಕಂತು ಪಾವತಿಯನ್ನು ಏಪ್ರಿಲ್ 1 ರಿಂದ ಜೂನ್ 31ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಲಾಕ್‌ಡೌನ್‌ನಿಂದಾಗಿ ಯಾವುದೇ ಕೆಲಸವಿಲ್ಲದೇ ಮನೆಯಲ್ಲಿ ಕುಳಿತುಕೊಳ್ಳಬೇಕಾಗಿದೆ. ಇದರಿಂದ ರಾಜ್ಯ ಸರ್ಕಾರ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.