'ಭೀಕರ ಸಾವು ನೋವಿಗೆ ಸರ್ಕಾರ ಹೊಣೆ : 10 ಕೆಜಿ ಅಕ್ಕಿ ಕೊಡಿ'

Kannadaprabha News   | Asianet News
Published : Apr 28, 2021, 07:25 AM ISTUpdated : Apr 28, 2021, 01:32 PM IST
'ಭೀಕರ ಸಾವು ನೋವಿಗೆ ಸರ್ಕಾರ ಹೊಣೆ : 10 ಕೆಜಿ ಅಕ್ಕಿ ಕೊಡಿ'

ಸಾರಾಂಶ

ರಾಜ್ಯದಲ್ಲಿ, ದೇಶದಲ್ಲಿ ಭೀಕರ ಪ್ರಮಾಣದಲ್ಲಿ ಸಾವು ನೋವುಗಳು ಸಂಭವಿಸುತ್ತಿದೆ. ಕೊರೋನಾ ಅಟ್ಟಹಾಸ ಮಿತಿ ಮಿರಿದೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಕೈ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ.28):  ಎರಡನೇ ಅಲೆಯ ಭೀಕರತೆ ಬಗ್ಗೆ ಕಳೆದ ವರ್ಷದ ನವೆಂಬರ್‌ ತಿಂಗಳಲ್ಲೇ ತಜ್ಞರ ಸಮಿತಿ ವರದಿ ನೀಡಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದವು. ಹೀಗಾಗಿಯೇ ಈ ಪ್ರಮಾಣದಲ್ಲಿ ಸಾವು-ನೋವು ಉಂಟಾಗುತ್ತಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರವೇ ಹೊಣೆ ಹೊರಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಅಲ್ಲದೆ, ಏಕಾಏಕಿ ಲಾಕ್ಡೌನ್‌ ಮಾಡಿರುವ ರಾಜ್ಯ ಸರ್ಕಾರವು ಶ್ರಮಿಕ ವರ್ಗ, ದಿನಗೂಲಿ ಕಾರ್ಮಿಕರಿಗೆ ತಲಾ 10 ಕೆ.ಜಿ. ಆಹಾರಧಾನ್ಯ ಹಾಗೂ ಪ್ರತಿ ಕುಟುಂಬಕ್ಕೆ 10 ಸಾವಿರ ರು. ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಕೊರೋನಾ ನಿರ್ವಹಣೆ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹಾಗೂ ಹಿರಿಯ ನಾಯಕರೊಂದಿಗೆ ಮಂಗಳವಾರ ನಡೆದ ವಿಡಿಯೋ ಸಂವಾದದ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

'ಬಿಎಸ್‌ವೈ ನೋಡಿದ್ರೆ ಕನಿಕರ ಮೂಡುತ್ತಿ, ಸಂಸದರನ್ನು ದೆಹಲಿಗೆ ಅಟ್ಟಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ' ..

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದಿಂದ ಲಾಕ್ಡೌನ್‌ ಘೋಷಿಸಿ ದುಡಿಯುವ ವರ್ಗ ಮತ್ತು ಸಮುದಾಯಗಳನ್ನು ಹಸಿವಿಗೆ ದೂಡಿವೆ. ಇಲ್ಲಿಯವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶ್ರಮಿಕರಿಗೆ, ದುಡಿಯುವ ವರ್ಗಕ್ಕೆ ಪ್ಯಾಕೇಜ್‌ ಘೋಷಿಸಿಲ್ಲ. ಮೊದಲ ಅಲೆ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿದ್ದ ಪ್ಯಾಕೇಜ್‌ ಕೂಡ ಅಗತ್ಯವಿದ್ದವರಿಗೆ ತಲುಪಿಲ್ಲ. ಹೀಗಾಗಿ ಈ ಹಿಂದೆಯೇ ನಾನು ಒತ್ತಾಯಿಸಿರುವಂತೆ ಅಂದೇ ದುಡಿದು ತಿನ್ನಬೇಕಾದ ಬಡ ಕುಟುಂಬಗಳಿಗೆ 10 ಕೆ.ಜಿ. ಅಕ್ಕಿ ಜತೆಗೆ ಅವರ ಕೈಗೆ 10 ಸಾವಿರ ರು. ಹಣ ಕೊಡಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ಕೇಂದ್ರದ ನಿರ್ಲಕ್ಷ್ಯಕ್ಕೆ ಸಾವಿರಾರು ಬಲಿ:

ಕೇಂದ್ರ ಸರ್ಕಾರವು ಎರಡನೇ ಅಲೆಯ ನಡುವೆಯೂ ಐದು ರಾಜ್ಯಗಳ ಚುನಾವಣೆ ಘೋಷಿಸಿತು. ಕುಂಬಮೇಳ ನಡೆಯುವುದಕ್ಕೂ ಅವಕಾಶ ನೀಡಿತು. ಇತರೆ ದೇಶಗಳಲ್ಲಿ ಎರಡನೇ ಅಲೆ ಸಂದರ್ಭದಲ್ಲಿ ಉಂಟಾದ ಸ್ಥಿತಿ ಗೊತ್ತಿದ್ದೂ ಕೇಂದ್ರ ಸರ್ಕಾರ ಸಂಪೂರ್ಣ ಮೈಮರೆಯಿತು. 2020ರ ಡಿಸೆಂಬರ್‌ನಲ್ಲಿ 2021ರ ಜನವರಿಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಕೇಂದ್ರ ಸರ್ಕಾರ ಏಪ್ರಿಲ… ಕೊನೆಯಲ್ಲಿ ತೆಗೆದುಕೊಳ್ಳುತ್ತಿದೆ. ಅದೂ ಕೂಡ ದೇಶದ ಕೋಟ್ಯಂತರ ಜನರು ಆಕ್ರೋಶ, ಛೀಮಾರಿ ಹಾಕಿದ ಬಳಿಕ ಎಚ್ಚೆತ್ತುಕೊಂಡಿದೆ. ಕೇಂದ್ರದ ಈನಿರ್ಲಕ್ಷ್ಯಕ್ಕೆ ಸಾವಿರಾರು ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.

ದೇಶದಲ್ಲಿ 20ರಿಂದ 30 ವರ್ಷದ ಚಿಕ್ಕ ವಯಸ್ಸಿನವರು ಕೊರೋನಾಗೆ ಬಲಿಯಾಗುತ್ತಿದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಡೀ ವಿಶ್ವವನ್ನು ಕೊರೋನಾ ವಿಪತ್ತಿನಿಂದ ಭಾರತ ರಕ್ಷಿಸಿಬಿಟ್ಟಿತು ಎಂದು ಹೇಳಿಕೆ ನೀಡಿದರು. ಈಗ ವೈದ್ಯ ಸವಲತ್ತುಗಳಿಲ್ಲದೆ ವಿಶ್ವದಲ್ಲೇ ಅತೀ ಹೆಚ್ಚು ನರಳುತ್ತಿರುವ ದೇಶ ಭಾರತ ಆಗಿದೆ. ಎರಡನೇ ಅಲೆ ವಿಕೋಪಕ್ಕೆ ಹೋಗಿದ್ದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು, ಮಹಾಕುಂಭಕ್ಕೆ ಬರುತ್ತಿರುವವರಿಗೆ ಸ್ವಾಗತ ಎಂದು ಟ್ವೀಟ್‌ ಮಾಡುತ್ತಾರೆ. ಎರಡನೇ ಅಲೆ ತಡೆಗಟ್ಟಲು ಕನಿಷ್ಠ ಸಿದ್ಧತೆಗಳನ್ನೂ ಮಾಡದ ಪ್ರಧಾನಿ ಅವರು ಹತ್ತಾರು ಚುನಾವಣಾ ರಾರ‍ಯಲಿಗಳನ್ನು ನಡೆಸಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರನ್ನು ನಾನು ನೋಡಿಯೇ ಇಲ್ಲ ಎನ್ನುತ್ತಾರೆ. ಇಂತಹ ಬೇಜವಾಬ್ದಾರಿ ಪ್ರಧಾನಿಯನ್ನು ಇತಿಹಾಸ ಕಂಡಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್