BBMP: ವಾರ್ಡ್‌ಗಳ ಮರು ವಿಂಗಡಣೆಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ

Published : Aug 06, 2023, 05:29 AM IST
BBMP: ವಾರ್ಡ್‌ಗಳ ಮರು ವಿಂಗಡಣೆಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ

ಸಾರಾಂಶ

ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಕೆ ಮಾಡಿ ಆದೇಶಿಸಿದ್ದ ರಾಜ್ಯ ಸರ್ಕಾರವು ಶನಿವಾರ ವಾರ್ಡ್‌ ಮರು ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ರಚನೆ ಮಾಡಿ ಅದೇಶಿಸಿದೆ.

ಬೆಂಗಳೂರು (ಆ.6) :  ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಕೆ ಮಾಡಿ ಆದೇಶಿಸಿದ್ದ ರಾಜ್ಯ ಸರ್ಕಾರವು ಶನಿವಾರ ವಾರ್ಡ್‌ ಮರು ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ರಚನೆ ಮಾಡಿ ಅದೇಶಿಸಿದೆ.

2011ರ ಜನಗಣತಿ ಆಧಾರಿಸಿ ವಾರ್ಡ್‌ ಮರು ವಿಂಗಡಿಸಬೇಕು. ವಾರ್ಡ್‌ ಮರು ವಿಂಗಡಣೆ ಆಯಾ ವಿಧಾನಸಭಾ ಕ್ಷೇತ್ರದ ಮಿತಿಯಲ್ಲಿ ಮಾಡಬೇಕು. ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ವಿಧಾನಸಭಾ ಕ್ಷೇತ್ರಕ್ಕೆ ಸೇರಿಸುವುದು ಅಥವಾ ವಿಂಗಡಿಸುವುದು ಮಾಡುವಂತಿಲ್ಲ. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿ ವಾರ್ಡ್‌ ವಿಂಗಡಣೆ ಇರಬೇಕು. ಭೌತಿಕವಾಗಿ ಲಕ್ಷಣವಾಗಿರಬೇಕು. ಒಂದು ವಾರ್ಡ್‌ ವ್ಯಾಪ್ತಿಯಲ್ಲಿ ಮತ್ತೊಂದು ವಾರ್ಡ್‌ನ ಪ್ರದೇಶ ಇರಬಾರದು. ಅಂದರೆ, ದ್ವೀಪ, ನಡುಗಡ್ಡೆ ರೀತಿ ಇರಬಾರದು ಎಂದು ಸೂಚಿಸಿದೆ.

ಕುಮಾರಸ್ವಾಮಿ ಹೊಸ ಬಾಂಬ್‌: 15 ಪರ್ಸೆಂಟ್‌ ಕಮೀಷನ್‌ ಆಧಾರದಲ್ಲಿ ಬಿಬಿಎಂಪಿ 710 ಕೋಟಿ ರೂ. ಹಣ ಬಿಡುಗಡೆ

ಇನ್ನು ಬಡಾವಣೆ, ರಸ್ತೆ, ಕಾಲೋನಿಗಳಲ್ಲಿ ಸಾಧ್ಯವಾದ ಮಟ್ಟಿಗೆ ಒಂದೇ ವಾರ್ಡ್‌ ವ್ಯಾಪ್ತಿಗೆ ಒಳಪಡುವಂತೆ ವಿಂಗಡಿಸಬೇಕು. ವಾರ್ಡ್‌ ವಿಂಗಡಣೆ ಸಂದರ್ಭದಲ್ಲಿ ಜನಸಂಖ್ಯೆಯು ಸರಾಸರಿ ಜನಸಂಖ್ಯೆಯ ಶೇ.15ರಷ್ಟುಹೆಚ್ಚು ಕಡಿಮೆ ಇರುವಂತೆ ಮಾಡುವುದು ಎಂದು ಮಾರ್ಗಸೂಚಿ ಆದೇಶದಲ್ಲಿ ಸೂಚಿಸಲಾಗಿದೆ.

ಅಕ್ಷೇಪಣೆಗೆ 15 ಅವಕಾಶ ನೀಡಿ

ಇನ್ನು ವಾರ್ಡ್‌ ಮರು ವಿಂಗಡಣೆಯ ಕರಡು ಅಧಿಸೂಚನೆಯ ಪ್ರಕಟಿಸಿ ವ್ಯಾಪಕ ಪ್ರಚಾರ ನೀಡಬೇಕು. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನ ಅವಕಾಶ ನೀಡಬೇಕು. ಆಕ್ಷೇಪಣೆ ಮತ್ತು ಸಲಹೆಗಳನ್ನು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಸಾರ್ವಜನಿಕರು ಲಿಖಿತ ರೂಪದಲ್ಲಿ ಸಲ್ಲಿಸಬೇಕು. ಅವುಗಳನ್ನು ಪರಿಗಣಿಸಿ ಸೂಕ್ತ ನಿರ್ಣಯ ತೆಗೆದುಕೊಂಡು ಅಂತಿಮ ನಿರ್ಧಾರ ತೆಗೆದುಕೊಂಡು ಪ್ರಕ್ರಿಯೆ ಪೂರ್ಣಗೊಳಿಸಬೇಕೆಂದು ಸರ್ಕಾರ ಸೂಚಿಸಲಾಗಿದೆ.

ನಗರದಲ್ಲಿ ಮತ್ತೆ ಫ್ಲೆಕ್ಸ್‌, ಬ್ಯಾನರ್‌ಗೆ ಅವಕಾಶ ನೀಡಿ ಆದಾಯ ಗಳಿಸಲು ಬಿಬಿಎಂಪಿ ಚಿಂತನೆ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೀಮ್ಡ್‌ ಅರಣ್ಯ ಪ್ರದೇಶದ ಪುನರ್‌ ಪರಿಶೀಲನೆಗಾಗಿ ಸಮಿತಿ: ಸಚಿವ ಈಶ್ವರ್‌ ಖಂಡ್ರೆ
ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!