ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರ ಗೌರವ ಧನ ದ್ವಿಗುಣ

By Sathish Kumar KHFirst Published Dec 18, 2022, 5:17 PM IST
Highlights

ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ದ್ವಿಗುಣಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು (ಡಿ.18): ರಾಜ್ಯಾದ್ಯಂತ ಇರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ದ್ವಿಗುಣಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ವರೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ 3 ಸಾವಿರ ರೂ., ಉಪಾಧ್ಯಕ್ಷರು 2 ಸಾವಿರ ರೂ ಹಾಗೂ ಸದಸ್ಯರಿಗೆ 1 ಸಾವಿರ ರೂ. ಮಾಸಿಕ ಗೌರವ ಧನ ನೀಡಲಾಗುತ್ತಿತ್ತು. ಇದೀಗ ಅಧ್ಯಕ್ಷರಿಗೆ 6 ಸಾವಿರ ರೂ. , ಉಪಾಧ್ಯಕ್ಷ ರಿಗೆ 4 ಸಾವಿರ ರೂ. ಹಾಗೂ ಸದಸ್ಯರಿಗೆ 2 ಸಾವಿರ ರೂ. ಗೌರವ ಧನ ನಿಗದಿ ಪಡಿಸಿ ಸರ್ಕಾರಿ ಆದೇಶ ಹೊರಡಿಸಲಾಗಿದೆ.

ಹಲವು ವರ್ಷಗಳ ಬೇಡಿಕೆ: ಇನ್ನು ಈಗಾಗಲೇ ಲೋಕಸಭೆಯಲ್ಲಿ ಸಂಸದರ ಗೌರವಧನ ಹಾಗೂ ರಾಜ್ಯದಲ್ಲಿ ಶಾಸಕರ ಗೌರವಧನ ಹೆಚ್ಚಳ ಮಾಡಿದ್ದರೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರ ನಡೆಸುವ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗೌರವಧನ ಮಾತ್ರ ಹೆಚ್ಚಳ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಗೌರವ ಧನ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಂಚಾಯತ್‌ ರಾಜ್‌ ಸಚಿವರಿಗೂ ಮನವಿ ಮಾಡಲಾಗಿತ್ತು. 

ಗ್ರಾಪಂ ಸದಸ್ಯರ ವೇತನ ₹10,000ಕ್ಕೆ ಹೆಚ್ಚಿಸಲು ಆಗ್ರಹ

ಚುನಾವಣೆಗೆ ಅನುಕೂಲ: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಾಗ 5.628 ಗ್ರಾಮ ಪಂಚಾಯಿತಿಗಳ ಸದಸ್ಯರಿಂದ ಪಕ್ಷ ಸಂಘಟನೆ ಮತ್ತು ಇತರೆ ಕಾರ್ಯಗಳನ್ನು ಮಾಡಿಸಿಕೊಳ್ಳಲು ಅನುಕೂಲ ಆಗುವಂತೆ ಗೌರವಧನ ಹೆಚ್ಚಳ ಮಾಡಲಾಗಿದೆ ಎಂದು ಕೇಳಿಬರುತ್ತಿದೆ. ಆದರೆ, ಸರ್ಕಾರ ಮಾತ್ರ ಈ ಬಗ್ಗೆ ಯಾವುದೇ ತಲೆಯನ್ನೂ ಕೆಡಿಸಿಕೊಳ್ಳದೇ ಗೌರವಧನ ಹೆಚ್ಚಳ ಮಾಡಿರುವುದು ಸರ್ಕಾರ ಮಹಾತ್ಕಾರ್ಯ ಎಂದು ಹೇಳಿಕೊಳ್ಳಲು ಸಿದ್ಧವಾಗಿದೆ.

click me!