Grama One: 1 ತಿಂಗಳಲ್ಲಿ ಗ್ರಾಮ ಒನ್‌ ಯೋಜನೆ ರಾಜ್ಯಾದ್ಯಂತ ವಿಸ್ತರಣೆ: ಸಿಎಂ ಬೊಮ್ಮಾಯಿ

Kannadaprabha News   | Asianet News
Published : Jan 30, 2022, 07:01 AM IST
Grama One: 1 ತಿಂಗಳಲ್ಲಿ ಗ್ರಾಮ ಒನ್‌ ಯೋಜನೆ ರಾಜ್ಯಾದ್ಯಂತ ವಿಸ್ತರಣೆ: ಸಿಎಂ ಬೊಮ್ಮಾಯಿ

ಸಾರಾಂಶ

*  ಯೋಜನೆ ಪರಿಶೀಲನೆಗೆ ಪ್ರತಿ ತಿಂಗಳು ಸಭೆ *  ಅಸಮರ್ಥ ಆಪರೇಟರ್‌ಗಳ ಪರವಾನಗಿ ರದ್ದುಗೊಳಿಸಬೇಕು *  4 ಫುಡ್‌ಪಾರ್ಕ್ ಯಶಸ್ಸಿಗೆ ಪ್ರಭಾವದ ಮೌಲ್ಯಮಾಪನ

ಬೆಂಗಳೂರು(ಜ.30):  ಲೋಕಾರ್ಪಣೆಗೊಂಡಿರುವ ಸರ್ಕಾರದ ಮಹತ್ವಾಕಾಂಕ್ಷಿ ಗ್ರಾಮ ಒನ್‌(Grama One) ಯೋಜನೆಯನ್ನು ಫೆಬ್ರವರಿ ಅಂತ್ಯದೊಳಗೆ ರಾಜ್ಯಾದ್ಯಂತ(Karnataka) ವಿಸ್ತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸೂಚಿಸಿದ್ದಾರೆ.

ಈ ಕುರಿತು ಇ-ಆಡಳಿತ(E-Governance), ಆರ್‌ಡಿಪಿಆರ್‌(RDPR), ಕಂದಾಯ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಮತ್ತು ರಾಜ್ಯದ ಎಲ್ಲಾ ಜಿಲ್ಲಾ​ಧಿಕಾರಿಗಳಿಗೆ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ. ಗ್ರಾಮ ಒನ್‌ ಯೋಜನೆಯ ಪರಿಶೀಲನೆ ನಡೆಸಲು ವಾರಕ್ಕೊಮ್ಮೆ ಖುದ್ದು ಗ್ರಾಮ ಒನ್‌ ಆಪರೇಟರ್‌ಗಳು, ತಹಶೀಲ್ದಾರರು ಮತ್ತು ಜಿಲ್ಲಾಧಿ​ಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದಿದ್ದಾರೆ.

Grama One: 3000 ಸೇವಾಕೇಂದ್ರ ತೆರೆಯಲು ನಿರ್ಧಾರ: ಜ.26ರಿಂದ 12 ಜಿಲ್ಲೆಗಳಲ್ಲಿ ಜಾರಿ!

ಗ್ರಾಮ ಒನ್‌ನಿಂದ ಸ್ವೀಕರಿಸಿದ ಅರ್ಜಿಗಳ ಶೀಘ್ರ ವಿಲೇವಾರಿ, ಅರ್ಜಿಗಳ ತಿರಸ್ಕಾರಕ್ಕೆ ಕಾರಣಗಳನ್ನು ಎಲ್ಲಾ ಇಲಾಖೆಗಳ ಡ್ರಾಪ್‌ಡೌನ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು. ಜಿಲ್ಲಾಧಿ​ಕಾರಿಗಳು ಹಾಗೂ ಇಲಾಖೆಯ ಹಿರಿಯ ಅ​ಧಿಕಾರಿಗಳು ತಿರಸ್ಕೃತ ಅರ್ಜಿಗಳನ್ನು ಪರಿಶೀಲಿಸಿ, ಅನಗತ್ಯವಾಗಿ ತಿರಸ್ಕೃತ ಮಾಡುತ್ತಿರುವ ಅ​ಕಾರಿ/ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ವಹಿಸಬೇಕು. ಅಲ್ಲದೇ, ಕೆಡಿಪಿ ಸಭೆಯಲ್ಲಿ(KDP Meeting) ಪರಿಶೀಲಿಸಬೇಕು. ಎಲ್ಲಾ ಗ್ರಾಮ ಒನ್‌ ಆಪರೇಟರ್‌ಗಳಿಗೆ ಅನ್ವಯಿಸುವಂತೆ ಇ-ಆಡಳಿತ ಇಲಾಖೆಯಿಂದ ನೀತಿ ಸಂಹಿತೆ ಪ್ರಕಟಿಸಿ, ಇದರ ಕಡ್ಡಾಯ ಪಾಲನೆಯನ್ನು ಜಿಲ್ಲಾಧಿ​ಕಾರಿಗಳು ಖಚಿತಪಡಿಸಿಕೊಳ್ಳಬೇಕು. ತಾಂತ್ರಿಕ, ಆಡಳಿತಾತ್ಮಕ ಮತ್ತು ಕಾನೂನು ಸಮಸ್ಯೆಗಳ ಬಗ್ಗೆ ಗ್ರಾಮ ಒನ್‌ ಆಪರೇಟರ್‌ ಗಳಿಗೆ ತರಬೇತಿ ನೀಡಬೇಕು ಮತ್ತು ಸೇವೆಗಳನ್ನು ವಿತರಿಸುವ ಆಡಳಿತಾತ್ಮಕ ಕಾರ್ಯವಿಧಾನಗಳ ತಿಳುವಳಿಕೆ ಇರಬೇಕು. ಇದರಿಂದ ಗ್ರಾಮ ಒನ್‌ ಆಪರೇಟರ್‌ಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ ಮತ್ತು ಯೋಜನೆಯು ಹೆಚ್ಚು ಜನಪ್ರಿಯ ಮತ್ತು ಯಶಸ್ವಿಯಾಗುತ್ತದೆ ಎಂದು ತಿಳಿಸಿದ್ದಾರೆ.

ಗ್ರಾಮ ಒನ್‌ ಆಪರೇಟರ್‌ಗಳಿಗೆ ಕಾಲಕಾಲಕ್ಕೆ ತರಬೇತಿ(Training) ಆಯೋಜಿಸಿ, ಅವರ ಪ್ರಾವೀಣ್ಯತೆಯನ್ನು ನಿಯಮಿತವಾಗಿ ಪರೀಕ್ಷಿಸಬೇಕು. ಅಸಮರ್ಥ ಆಪರೇಟರ್‌ಗಳ ಪರವಾನಗಿಯನ್ನು ರದ್ದುಗೊಳಿಸಬೇಕು. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇ-ಆಡಳಿತ ಇಲಾಖೆ ಕನಿಷ್ಠ ಮುಂದಿನ ಎರಡು ತಿಂಗಳವರೆಗೆ ಪ್ರತಿ ವಾರ ಸಭೆಯನ್ನು ಆಯೋಜಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ರಾಜ್ಯದ 3026 ಹಳ್ಳಿಗಳಲ್ಲಿ "ಗ್ರಾಮ ಒನ್‌’ಗೆ ಚಾಲನೆ

ಬೆಂಗಳೂರು: ಸರ್ಕಾರದ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರಿಗೆ ತಲುಪಿಸುವ ಉದ್ದೇಶ ಹೊಂದಿರುವ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್‌’  ರಾಜ್ಯದ 12 ಜಿಲ್ಲೆಗಳಲ್ಲಿ ಆರಂಭವಾಗಿದೆ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ. 26 ರಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನ್‌ಲೈನ್‌ ಮೂಲಕ ರಾಜ್ಯದ 12 ಜಿಲ್ಲೆಗಳ 3026 ಗ್ರಾಮ ಪಂಚಾಯತಿಗಳಲ್ಲಿ ‘ಗ್ರಾಮ ಒನ್‌’ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಿದ್ದರು.

ಬಳಿಕ ಮಾತನಾಡಿದ್ದ ಸಿಎಂ, ಈ ಯೋಜನೆಯನ್ನು ಮಾರ್ಚ್ (March)ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಪ್ರಕಟಿಸಿದ್ದರು. ಸರ್ಕಾರದ ಸೌಲಭ್ಯ ಪಡೆಯಲು ಜನರು ಸಮಯ ಹಾಗೂ ಹಣ ವ್ಯಯಿಸುವುದನ್ನು ತಪ್ಪಿಸಿ, ಗ್ರಾಮೀಣ ಜನರ ಬಳಿಯೇ ಸೇವೆಗಳನ್ನು ತಲುಪಿಸುವ ಧ್ಯೇಯದೊಂದಿಗೆ ಗ್ರಾಮ ಒನ್‌ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಸೇರಿದಂತೆ ಹಲವು ಸೇವೆಗಳು ಗ್ರಾಮ ಮಟ್ಟದಲ್ಲಿ ಲಭ್ಯವಾಗಲಿವೆ. ತಾಲ್ಲೂಕು ಕಚೇರಿಯಲ್ಲಿ ಜನಸಂದಣಿ ತಪ್ಪಿಸಲು ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದರು. 

4 ಫುಡ್‌ಪಾರ್ಕ್ ಯಶಸ್ಸಿಗೆ ಪ್ರಭಾವದ ಮೌಲ್ಯಮಾಪನ

ರಾಜ್ಯ ಸರ್ಕಾರದ(Government of Karnataka) ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್‌ಗಳನ್ನು(Food Park) ಯಶಸ್ವಿಗೊಳಿಸಲು ಪ್ರಭಾವದ ಮೌಲ್ಯಮಾಪನ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

Karnataka Budget 2022 ಬೊಮ್ಮಾಯಿ ಸರ್ಕಾರದ ಮೊದಲ ಬಜೆಟ್‌ಗೆ ಮುಹೂರ್ತ ಫಿಕ್ಸ್

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಆಹಾರ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಜೇವರ್ಗಿಯಲ್ಲಿರುವ ಫುಡ್‌ಪಾರ್ಕ್‌ಗಳಿಗೆ ಸಂಬಂಧಿ​ಸಿದಂತೆ ಭೂಮಿ, ಈಕ್ವಿಟಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು. ಆಹಾರ ನಿಯಮಿತ, ಫುಡ್‌ಪಾರ್ಕ್ಗಳನ್ನು ಆರಂಭಿಸಲು ಕೋರಿರುವ 26 ಕೋಟಿ ರು. ಅನುದಾನ ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆಯ ನಂತರ ತೀರ್ಮಾನಕ್ಕೆ ಬರಲಾಗುವುದು’ ಎಂದು ತಿಳಿಸಿದರು.

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‌(BC Patil), ಸಂಸದ ಶಿವಕುಮಾರ್‌ ಉದಾಸಿ, ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌ ಇತರರು ಉಪಸ್ಥಿತರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ