
ಬೆಂಗಳೂರು(ನ.14): ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಹುಟ್ಟುವ ನದಿಗಳಿಂದ ಕುಡಿಯುವ ನೀರು ಪಡೆಯುತ್ತಿರುವ ನಗರ ಹಾಗೂ ಪಟ್ಟಣಗಳಲ್ಲಿ ಹಸಿರು ಸೆಸ್ ವಿಧಿಸಲು ಅರಣ್ಯ ಇಲಾಖೆ ಪ್ರಸ್ತಾವನೆ ಸಿದ್ದಪಡಿಸಲು ಮುಂದಾಗಿದೆ.
ಪಶ್ಚಿಮಘಟ್ಟ ಅರಣ್ಯ ಪ್ರದೇಶದಿಂದಲೇ ತುಂಗಾ-ಭದ್ರಾ, ಕಾವೇರಿ, ಕೃಷ್ಣಾ, ಮಲಪ್ರಭ, ಘಟಪ್ರಭ, ಹೇಮಾವತಿ ಸೇರಿದಂತೆ 15ಕ್ಕೂ ಹೆಚ್ಚಿನ ನದಿಗಳು ಉಗಮವಾಗುತ್ತವೆ. ಈ ನದಿಗಳ ನೀರನ್ನು ಬೆಂಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಮಂಗಳೂರು, ಚಿಕ್ಕಮಗಳೂರು, ಬೆಳಗಾವಿ, ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ನಗರ ಮತ್ತು ಪಟ್ಟಣಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಪೂರೈಸಲಾಗುತ್ತಿದೆ.
ಬಂಡೀಪುರ ರಾತ್ರಿ ಸಂಚಾರ ಬಗ್ಗೆ ಶೀಘ್ರವೇ ಚರ್ಚೆ: ಸಚಿವ ಈಶ್ವರ ಖಂಡ್ರೆ
ಅಲ್ಲಿನ ಸ್ಥಳೀಯ ಜಲ ಮಂಡಳಿಯಿಂದ ನೀರಿನ ಸಂಪರ್ಕ ಪಡೆದವರಿಗೆ ನೀರಿನ ಬಿಲ್‌ನಲ್ಲಿ ಹಸಿರು ಸೆಸ್ ವಿಧಿಸುವ ಪ್ರಸ್ತಾವನೆ ಸಿದ್ದಪಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ