
ಬೆಂಗಳೂರು(ಜ.2): ನಾಯಕತ್ವ ಎನ್ನುವುದು ವಿದ್ಯಾರ್ಥಿ ದೆಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿಯ ಸಂಚಾಲಕರೂ ಆಗಿರುವ ಸಚಿವ ಡಾ. ಪಾಟೀಲ್, ಜನವರಿ 13ಕ್ಕೆ ಈ ಸಮಿತಿಯ ಮೊದಲ ಸಭೆ ಮಾಡಲಿದ್ದೇವೆ ಎಂದರು.
ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಸಮಿತಿ ರಚಿಸಿ, ಡಾ. ಶರಣಪ್ರಕಾಶ್ ಪಾಟೀಲ್ ಅವರನ್ನು ಸಂಚಾಲಕರನ್ನಾಗಿ ನೇಮಿಸಿದ್ದಾರೆ. ಚುನಾವಣೆ ರೂಪುರೇಷೆ ಕುರಿತು ಸಭೆಯಲ್ಲಿ ಚರ್ಚಿಸುತ್ತೇವೆ. ಸಮಿತಿ ಸಭೆಯಲ್ಲಿ ನಿರ್ಧರಿಸಿದ ವಿಷಯಗಳ ಕುರಿತು ವರದಿ ಮಾಡಿ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರು ನೇಮಿಸಿರುವ ಸಮಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರಾದ ರಿಜ್ವಾನ್ ಅರ್ಷದ್, ಬಿ. ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ ಹಾಗೂ ಎಚ್.ಎಸ್. ಮಂಜುನಾಥ್ ಗೌಡ, ಕೀರ್ತಿ ಗಣೇಶ್ ಈ ಸಮಿತಿಯಲ್ಲಿ ಇದ್ದಾರೆ.
ಇದನ್ನೂ ಓದಿ: ಬಳ್ಳಾರಿ ಫೈರಿಂಗ್ ಕೇಸ್: ಇವರು ಹೇಳಿಬಿಟ್ರೆ ಆಯ್ತಾ? ಜನಾರ್ದನ ರೆಡ್ಡಿ ಟಾರ್ಗೆಟ್ ಆರೋಪಕ್ಕೆ ಸಚಿವ ಮಹದೇವಪ್ಪ ತಿರುಗೇಟು
ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡುವ ಬಗ್ಗೆ ಸಿಎಂ ಸೂಚನೆ ಕೊಟ್ಟರೆ ಮಾಡುತ್ತೇವೆ. ಸಿಎಂ ಆದೇಶವೇ ಅಂತಿಮ ಎಂದು ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಎಂಜಿನಿಯರ್ ಮತ್ತು ಮೆಡಿಕಲ್ ಸೀಟು ಶುಲ್ಕ ಹೆಚ್ಚಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲಎಂದು ಡಾ. ಪಾಟೀಲ್ ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ