ರಾಜ್ಯ ಸರ್ಕಾರದ 6ನೇ ಗ್ಯಾರಂಟಿಯಾಗಿ ರೂಪುಗೊಂಡ ‘ಗೃಹ ಆರೋಗ್ಯ’ ಯೋಜನೆ: ಜನರಿಗೆ ಉಚಿತ ಚಿಕಿತ್ಸೆ, ಔಷಧಿ

Published : Nov 13, 2025, 05:59 AM IST
Dinesh Gundu Rao

ಸಾರಾಂಶ

ಗ್ರಾಮೀಣ ಭಾಗದ 30 ವರ್ಷ ಮೇಲ್ಪಟ್ಟವರ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧಿ ವಿತರಿಸುವ ‘ಗೃಹ ಆರೋಗ್ಯ’ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ರಾಜ್ಯಾದ್ಯಂತ ಕ್ಕೆ 5 ಲಕ್ಷಕ್ಕೂ ಹೆಚ್ಚು ಜನ ಉಚಿತ ಔಷಧ ಪಡೆಯುತ್ತಿದ್ದಾರೆ.

ಬೆಂಗಳೂರು (ನ.13): ಗ್ರಾಮೀಣ ಭಾಗದ 30 ವರ್ಷ ಮೇಲ್ಪಟ್ಟವರ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧಿ ವಿತರಿಸುವ ‘ಗೃಹ ಆರೋಗ್ಯ’ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ರಾಜ್ಯಾದ್ಯಂತ ರಕ್ತದೊತ್ತಡ, ಮಧುಮೇಹಕ್ಕೆ 5 ಲಕ್ಷಕ್ಕೂ ಹೆಚ್ಚು ಜನ ಉಚಿತ ಔಷಧ ಪಡೆಯುತ್ತಿದ್ದಾರೆ. ಆ ಮೂಲಕ ಹೃದಯಾಘಾತ, ಕಿಡ್ನಿ ವೈಫಲ್ಯ, ಸ್ಟ್ರೋಕ್‌ನಂತಹ ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಗಳಿಗೆ ಮೂಲದಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ‘ಗೃಹ ಆರೋಗ್ಯ’ ರಾಜ್ಯ ಸರ್ಕಾರದ ಆರನೇ ಗ್ಯಾರಂಟಿಯಾಗಿ ಬದಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ದೂರದೃಷ್ಟಿಯಿಂದ ‘ಗೃಹ ಆರೋಗ್ಯ’ ಯೋಜನೆಗೆ ಕೋಲಾರದಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು. ಬಳಿಕ ರಾಜ್ಯಾದ್ಯಂತ ವಿಸ್ತರಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ಯೋಜನೆಗೆ ಸ್ವಲ್ಪ ಬದಲಾವಣೆ ತಂದಿದ್ದರು. ರಕ್ತದೊತ್ತಡ, ಡಯಾಬಿಟಿಸ್ ಜೊತೆಗೆ ಕ್ಯಾನ್ಸರ್, ಮಾನಸಿಕ ಕಾಯಿಲೆಗಳು, ಸೇರಿದಂತೆ 14 ಬಗೆಯ ಕಾಯಿಲೆಗಳ ತಪಾಸಣೆ ನಡೆಸಲು ಸೂಚಿಸಿದ್ದರು. ಇದರಂತೆ ಇದೀಗ ರಾಜ್ಯಾದ್ಯಂತ ಸದ್ದಿಲ್ಲದೇ ಪರಿಣಾಮಕಾರಿಯಾಗಿ ಕಾರ್ಯಗತಗೊಳ್ಳುತ್ತಿದೆ.

ಯೋಜನೆಯಡಿ 326703 ರಕ್ತದೊತ್ತಡ ಕಾಯಿಲೆ ಹೊಂದಿರುವ ಜನ ಉಚಿತವಾಗಿ ಔಷಧಿಯನ್ನ ಪಡೆಯುತ್ತಿದ್ದಾರೆ. ಅಲ್ಲದೆ, 2,36,759 ಮಧುಮೇಹದ ರೋಗಿಗಳಿಗೆ ಉಚಿತವಾಗಿ ಔಷಧಿ ಪೂರೈಸಲಾಗುತ್ತಿದೆ. ಪ್ರತಿ ಎರಡು ತಿಂಗಳಿಗೊಮ್ಮ ಸ್ಥಳೀಯ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ರೋಗಿಗಳು ಉಚಿತವಾಗಿ ಔಷಧಿ ಪಡೆಯಲು ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ. ಸುಮಾರು 185 ಕೋಟಿ ವೆಚ್ಚದ 'ಗೃಹ ಆರೋಗ್ಯ’ ಯೋಜನೆಯಡಿ ರಕ್ತದೊತ್ತಡ, ಡಯಾಬಿಟಿಸ್ ರೋಗಿಗಳಿಗೆ ನಿರಂತರವಾಗಿ ಉಚಿತ ಔಷಧಿ ಒದಗಿಸಲು ಈಗಾಗಲೇ 115 ಕೋಟಿ ಮೌಲ್ಯದ ಔಷಧಿಗಳ ಖರೀದಿ ಪ್ರಕ್ರೀಯೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಯಿಲೆಗಳಿಗೆ ತಪಾಸಣೆಗೆ ಒಳಪಟ್ಟವರ ವಿವರ

ತೀವ್ರ ಕಿಡ್ನಿ ಸಮಸ್ಯೆ ಹಿನ್ನೆಲೆ 8,46,399 ಮಂದಿ ತಪಾಸಣೆಗೆ ಒಳಪಟ್ಟಿದ್ದು, 7,719 ಮಂದಿಗೆ ಸಮಸ್ಯೆ ಇರುವುದಾಗಿ ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. ಈ ರೀತಿಯ ಪ್ರಕರಣಗಳನ್ನು ಶಂಕಿತ ಪ್ರಕರಣಗಳನ್ನಾಗಿ ಪಟ್ಟಿ ಮಾಡಲಾಗಿದೆ. ಶ್ವಾಸಕೋಶ ಸಮಸ್ಯೆಗೆ 9,48,671 ಮಂದಿಗೆ ತಪಾಸಣೆಗೆ ಒಳಪಟ್ಟಿದ್ದಾರೆ. ಲಿವರ್ ಕಾಯಿಲೆಗೆ ಸಂಬಂಧಿಸಿ 9,58,671 ಮಂದಿ ತಪಾಸಣೆಗೆ ಒಳಪಟ್ಟಿದ್ದು, 7,535 ಮಂದಿಗೆ ಸಮಸ್ಯೆ ಶಂಕಿಸಲಾಗಿದೆ. ಬಾಯಿ ಕ್ಯಾನ್ಸರ್‌ಗಾಗಿ 11,92,436 ಮಂದಿಗೆ ತಪಾಸಣೆ ನಡೆಸಿದ್ದು, 3,403 ಶಂಕಿತ ಪ್ರಕರಣ ಪಟ್ಟಿಯಾಗಿವೆ. ಗರ್ಭಕಂಠದ ಕ್ಯಾನ್ಸರ್‌ ಸಂಬಂಧ 950, ಸ್ತನ ಕ್ಯಾನ್ಸರ್‌ಗೆ ಸಂಬಂಧಿಸಿ 1,311, ಮಾನಸಿಕ ರೋಗಗಳ ವಿಚಾರಕ್ಕೆ ಸಂಬಂಧಿಸಿ 7,751 ಶಂಕಿತ ಪ್ರಕರಣ ವರದಿಯಾಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ