ಗೃಹ ಜ್ಯೋತಿ ಯೋಜನೆ: ಕಳೆದ 10 ದಿನಗಳಲ್ಲಿ ಹರಿದು ಬಂತು  70.05 ಲಕ್ಷ ಅರ್ಜಿಗಳು !

Published : Jun 27, 2023, 08:37 PM IST
ಗೃಹ ಜ್ಯೋತಿ ಯೋಜನೆ: ಕಳೆದ 10 ದಿನಗಳಲ್ಲಿ ಹರಿದು ಬಂತು  70.05 ಲಕ್ಷ ಅರ್ಜಿಗಳು !

ಸಾರಾಂಶ

ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಗೆ ದಿನ ಕಳೆದಂತೆ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿದ್ದು ಕಳೆದ 10 ದಿನಗಳಲ್ಲಿ 70,05,892 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. 

-ಸ್ವಸ್ತಿಕ್ ಕನ್ಯಾಡಿ

ಬೆಂಗಳೂರು (ಜೂ.27): ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಗೆ ದಿನ ಕಳೆದಂತೆ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿದ್ದು ಕಳೆದ 10 ದಿನಗಳಲ್ಲಿ 70,05,892 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. 

ಜೂನ್ 27, ಮಂಗಳವಾರ ಒಂದೇ ದಿನ ಸಂಜೆ 6 ಗಂಟೆಯ ವರೆಗೆ ಬೆಸ್ಕಾಂ(BESCOM) ವ್ಯಾಪ್ತಿಯಲ್ಲಿ 2,58,263 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.  ಸೆಸ್ಕ್ ನಲ್ಲಿ  98,842, ಜೆಸ್ಕಾಂನಲ್ಲಿ 63,435, ಹೆಸ್ಕಾಂನಲ್ಲಿ 1,19,309, ಹುಕ್ಕೇರಿ ಯಲ್ಲಿ (HRECS) 2,926, ಮೆಸ್ಕಾಂನಲ್ಲಿ – 76,771 ಸೇರಿದಂತೆ ರಾಜ್ಯದ್ಯಂತ ಒಟ್ಟು 6,19,546 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. 

 

ಧಾರವಾಡ: ಗೃಹಜ್ಯೋತಿ ಯೋಜನೆಗೆ ಈವರೆಗೆ 7 ಲಕ್ಷ ಅರ್ಜಿ!

ರಾಜ್ಯದ ಒಟ್ಟು 6 ವಿದ್ಯುತ್ ನಿಗಮಗಳಲ್ಲಿ ಗೃಹ ಜ್ಯೋತಿ ಯೋಜನೆ(Gruhajyoti scheme)ಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ವೇಗ ಪಡೆದಿರುವ ಹಿನ್ನೆಲೆಯಲ್ಲಿ ಪ್ರತಿ ನಿತ್ಯ ಕನಿಷ್ಠ 10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ. ಇನ್ನೂ ಗೃಹ ಜ್ಯೋತಿ ನಿಯಮದನ್ವಯ ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯ. ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್ ಉಪಯೋಗಿಸಿದ್ದಲ್ಲಿ ಯೋಜನೆ ಅನ್ವಯವಾಗುವುದಿಲ್ಲ. 

ರಾಜ್ಯದ ಇ-ಆಡಳಿತ ಗೃಹ ಜ್ಯೋತಿ ಯೋಜನೆಗೆ ಪ್ರತ್ಯೇಕವಾಗಿ ನೋಂದಣಿ ಲಿಂಕ್ ನೀಡಿದ ಬಳಿಕ ಅರ್ಜಿ ಸಲ್ಲಿಕೆಯು ದುಪ್ಪಟ್ಟಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲದೆ ವಿದ್ಯುತ್ ಕಛೇರಿ, ನಾಡಕಛೇರಿ ಹಾಗೂ ಕಂಪ್ಯೂಟರ್, ಲ್ಯಾಪ್’ಟಾಪ್, ಮೊಬೈಲ್ ಫೋನ್ ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಾಯಿಸಬಹುದು. ಮೇಲ್ಕಂಡ ವೆಬ್ಸೈಟ್ ಹೊರತುಪಡಿಸಿ, ನೋಂದಣಿಗೆ ಯಾವುದೇ ಖಾಸಗಿ/ನಕಲಿ ವೆಬ್ಸೈಟ್ ಬಳಸದೇ ಇರುವುದು ಸೂಕ್ತ. 

ಬೆಂಗಳೂರು ಒನ್(Bengaluru one), ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನೋಂದಣಿಗೆ ನಿಗದಿತ ಸೇವಾ ಶುಲ್ಕವನ್ನಷ್ಟೇ ಪಾವತಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚುವರಿ ಹಣಕ್ಕೆ ಯಾರಾದರೂ ಬೇಡಿಕೆಯಿಟ್ಟಲ್ಲಿ, ಗ್ರಾಹಕರು ಕೂಡಲೇ 24x7 ಸಹಾಯವಾಣಿ 1912 ಕ್ಕೆ ಕರೆಮಾಡಿ ತಿಳಿಸಬಹುದು. ಅಂತಹ ಪ್ರಯತ್ನಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಗೃಹ​ಜ್ಯೋ​ತಿ ಸಮ​ಸ್ಯೆಗೆ ಜನ ಹೈರಾಣು; ಹೆಚ್ಚುವರಿ ಆಧಾರ್‌ ಸೇವಾ ಕೇಂದ್ರಕ್ಕೆ ಆಗ್ರಹ

ಎಸ್ಕಾಂವಾರು ನೋಂದಣಿ ವಿವರ

  • ಬೆಸ್ಕಾಂ-28,53,778
  • ಸೆಸ್ಕ್- 10,94,869
  • ಜೆಸ್ಕಾಂ-7,43,759
  • ಹೆಸ್ಕಾಂ-14,57,422
  • ಹುಕ್ಕೇರಿ-33,255
  • ಮೆಸ್ಕಾಂ -8,22,210
  • ಒಟ್ಟು - 70,05,892

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!