ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ವಿಧಾನಸೌಧ, ಸುವರ್ಣಸೌಧ, ಮೈಸೂರು ಅರಮನೆ!

Published : Aug 29, 2026, 02:19 PM IST
Gruha Lakshmi Scheme Anniversary Vidhana Soudha Suvarna Soudha Mysore Palace to Glow Pink

ಸಾರಾಂಶ

ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಮೈಸೂರು ಅರಮನೆ ಸೇರಿದಂತೆ ರಾಜ್ಯದ ಪ್ರಮುಖ ಕಟ್ಟಡಗಳು ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ.

ಬೆಂಗಳೂರು,ಆ.29: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ,ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಭಾನುವಾರ(ಆ.30) ಸಂಜೆ 6ರಿಂದ ರಾತ್ರಿ 10ರವರೆಗೆ ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಲಿವೆ.

ಗೃಹಲಕ್ಷ್ಮೀ ಜಾರಿಗೆ ಬಂದು ಆ.30ಕ್ಕೆ ಮೂರು ವರ್ಷ!

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000/- ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇದೇ ಆ.30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ. ಹೀಗಾಗಿ ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ(PINK) ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ.

ಇದುವರೆಗೂ ಸದರಿ ಯೋಜನೆ ಅಡಿ 1.20ಕೋಟಿ ಫಲನುಭವಿಗಳ ಖಾತೆಗೆ 76500ಕೋಟಿಗೂ ಹೆಚ್ಚು ಹಣ ಪಾವತಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಫ್ರೆಂಡ್‌ಗೆ ಕ್ರೆಡಿಟ್ ಕಾರ್ಡ್ ಕೊಟ್ಟಿದ್ದೇ ತಪ್ಪಾಯ್ತು! 3.5 ಲಕ್ಷ ಖರ್ಚು ಮಾಡಿ ಈಗ ಫೋನ್ ಎತ್ತುತ್ತಿಲ್ಲ!
KPSC ಪಶು ವೈದ್ಯಾಧಿಕಾರಿ ಮಾತ್ರವಲ್ಲ, 3 ವರ್ಷಗಳಲ್ಲಿ ನಡೆದ 4 ಪ್ರಮುಖ ಪರೀಕ್ಷೆಗಳ ತನಿಖೆಗೆ ಇಳಿದ ಸಿಐಡಿ ಮತ್ತು ಇಡಿ!